ಮೈಸೂರು | ರಕ್ತ ದಾನದಿಂದ ಆರೋಗ್ಯ ವೃದ್ಧಿ : ಶಾಸಕ ಶ್ರೀವತ್ಸ

Date:

ಮೈಸೂರಿನ ಸರಸ್ವತಿಪುರಂನಲ್ಲಿರುವ ರೋಟರಿ ಪಶ್ಚಿಮ ಶಾಲೆಯ ಸಭಾಂಗಣದಲ್ಲಿ ರೋಟರಿ ಕ್ಲಬ್ ಆಫ್ ಹೆರಿಟೇಜ್ ಮೈಸೂರು ಮತ್ತು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ಜಿಲ್ಲಾ ಘಟಕ ಮೈಸೂರು ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರಕ್ಕೆ ಶಾಸಕ ಶ್ರೀವತ್ಸ ಚಾಲನೆ ನೀಡಿ ‘ ರಕ್ತ ದಾನದಿಂದ ಆರೋಗ್ಯ ವೃದ್ಧಿ ‘ ಎಂದರು.

- Advertisement -

” ಸ್ವಯಂಪ್ರೇರಿತ ರಕ್ತದಾನ ಆರೋಗ್ಯಕರ ಜೀವನಕ್ಕೆ ದಾರಿಯಾಗಿದ್ದು, ಮತ್ತೊಬ್ಬರ ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅಗತ್ಯ. ರಕ್ತದಾನದ ಬಗ್ಗೆ ಜನ ಸಾಮಾನ್ಯರಲ್ಲಿ ಇರುವ ಸಾಕಷ್ಟು ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕು,
ಒಬ್ಬರ ರಕ್ತದಾನದಿಂದ ಮೂವರ ಪ್ರಾಣ ಉಳಿಸಬಹುದಾಗಿದೆ. ಏಕೆಂದರೇ ರಕ್ತವನ್ನು ಉತ್ಪಾದಸಲಾಗದು. ಮನುಷ್ಯ ದಾನ ಮಾಡಿದರಷ್ಟೇ ರಕ್ತದ ಉತ್ಪಾದನೆ ಸಾಧ್ಯ. ಆದ್ದರಿಂದ ಜನರು ಅದರಲ್ಲೂ ಯುವ ಪೀಳಿಗೆ ರಕ್ತದಾನ ಮಾಡಬೇಕು ಮತ್ತು ಈ ಬಗ್ಗೆ ಮತ್ತೊಬ್ಬರಿಗೂ ಅರಿವು” ಮೂಡಿಸಬೇಕೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರೋಟರಿ ಕ್ಲಬ್ ಆಫ್ ಹೆರಿಟೇಜ್‌ನ ಅಧ್ಯಕ್ಷ ರಾಜೇಶ್ ಆರ್ 50 ನೇ ಬಾರಿ ರಕ್ತದಾನ ಮಾಡಿ ಆರೋಗ್ಯದ ದೃಷ್ಟಿಯಿಂದ ಪ್ರತಿ ಆರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದು ಉತ್ತಮ ಬೆಳವಣಿಗೆ. ಕಳೆದ 26 ವರ್ಷದಿಂದ ರಕ್ತದಾನ ಮಾಡುತ್ತಿರುವ ನಾನು ಆರೋಗ್ಯವಂತ ಬದುಕನ್ನು ನಡೆಸುತ್ತಿದ್ದೇನೆ ಎಂದರು.

ರೋಟರಿ ಹೆರಿಟೇಜ್ ಕ್ಲಬ್‌ನ ಹಲವು ಸದಸ್ಯರು ಹಾಗೂ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಸದಸ್ಯರು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ನಡೆದ ಈ ಶಿಬಿರದಲ್ಲಿ, ಸುಮಾರು 72 ದಾನಿಗಳು ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿನ ರಕ್ತನಿಧಿ ಕೇಂದ್ರದಲ್ಲಿ ಅತಿ ಹೆಚ್ಚು ರಕ್ತದ ಕೊರತೆ ಇರುವುದರಿಂದ ಕೆಆರ್ ಆಸ್ಪತ್ರೆ ಮತ್ತು ಜಯದೇವ ಹೃದ್ರೋಗ ಆಸ್ಪತ್ರೆ ರಕ್ತನಿಧಿ ಕೇಂದ್ರಗಳಿಗೆ ಇಂದಿನ ಶಿಬಿರದಲ್ಲಿ ಸಂಗ್ರಹವಾದ ರಕ್ತವನ್ನು ದಾನ ಮಾಡುವುದಾಗಿ ನಿರ್ಧರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಮೈಸೂರು | ದಲಿತ ಕುಟುಂಬದೊಂದಿಗೆ ಅನುಚಿತ ವರ್ತನೆ, ಹಲ್ಲೆ : ಎಫ್ಐಆರ್ ದಾಖಲು

ಕಾರ್ಯಕ್ರಮದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನಾಗೇಂದ್ರ ಎಲ್, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗೌರವ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಿ ಎನ್ ಮಂಜೇಗೌಡ, ರೋಟರಿ ಕ್ಲಬ್ ನ ಕಾರ್ಯದರ್ಶಿ ಗೌರವ್ ಜಿ ಶರ್ಮ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಮೈಸೂರು ಅಧ್ಯಕ್ಷ ದಿವಾಕರ ಕೆ ಪಿ, ಕಾರ್ಯದರ್ಶಿ ನಟರಾಜು ಮತ್ತು ಉಪಾಧ್ಯಕ್ಷ ನೀಲಕಂಠ ಕುಮಾರ ಶೆಟ್ಟಿ, ರೋಟರಿ ಹೆರಿಟೇಜ್ ಕ್ಲಬ್‌ನ ಹಲವು ಸದಸ್ಯರು, ಮಾಜಿ ಸೈನಿಕರ ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...