ಮೈಸೂರು | ಅತಿದೊಡ್ಡ ಆರ್ಥಿಕ ವ್ಯವಸ್ಥೆಗೆ ಮಹಿಳಾ ಉದ್ಯೋಗಿಗಳ ಹೆಚ್ಚಳ ಅವಶ್ಯಕ: ಶ್ರೀರಾಮ್ ರಂಗನಾಥನ್

Date:

Advertisements

ಭಾರತವು ಅತಿದೊಡ್ಡ ಅಥವಾ ಎರಡನೆಯ ದೊಡ್ಡ ಆರ್ಥಿಕ ವ್ಯವಸ್ಥೆಗೆ ಬಯಸಿದರೆ, ತನ್ನ ಮಹಿಳಾ ಉದ್ಯೋಗಿಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ವಿಪ್ರೋ ಲಿಮಿಟೆಡ್ ಗ್ಲೋಬಲ್ ಟ್ಯಾಕ್ಸ್ ಮುಖ್ಯಸ್ಥ ಶ್ರೀರಾಮ್ ರಂಗನಾಥನ್ ಅಭಿಪ್ರಾಯಪಟ್ಟರು.

ಮೈಸೂರು ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್ಸ್‌ಟಿಟ್ಯೂಟ್ ಫಾರ್ ಮ್ಯಾನೇಜ್‌ಮೆಂಟ್‌ ಡೆವಲಪ್‌ಮೆಂಟ್‌ ಸಂಸ್ಥೆಯವರು ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಅಂಡ್ ಕಾಮರ್ಸ್(ಬಿಸಿಐಸಿ) ಸಹಯೋಗದೊಂದಿಗೆ ಆಯೋಜಿಸಿದ್ದ “ಕಾರ್ಪೊರೇಟ್ ಹಣಕಾಸು ಮತ್ತು ಹಣಕಾಸು ಮಾರ್ಕೆಟ್‌ಗಳಲ್ಲಿನ ಉದಯೋನ್ಮುಖ ಪ್ರವೃತ್ತಿಗಳು” ವಿಷಯ ಕುರಿತ 12ನೇ ಅಂತಾರಾಷ್ಟ್ರೀಯ ಆರ್ಥಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಹಾನಗರಗಳಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಕ್ರಮೇಣ ಹೆಚ್ಚಾಗುತ್ತಿದೆ. ಆದರೆ ರಾಷ್ಟ್ರಮಟ್ಟದಲ್ಲಿ ಈ ಏರಿಕೆಯು ಕಡಿಮೆಯಿದೆ. ಭಾರತದ ಆರ್ಥಿಕ ಮಟ್ಟ ಉತ್ತಮವಾಗಲು ಈ ಅಂತರವನ್ನು ಕಡಿಮೆ ಮಾಡಿಕೊಳ್ಳಬೇಕು. ನಮ್ಮ ದೇಶದ ಜನಸಂಖ್ಯೆಯನ್ನು ಗಣನೆಗೆ ತೆಗೆದುಕೊಂಡರೆ, ಮಹಿಳಾ ಕಾರ್ಯಪಡೆಯ ಈಗಿನ ಸಂಖ್ಯೆ ಕಡಿಮೆ. ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ನಾವು ಸೂಕ್ತ ಕ್ರಮಗಳನ್ನು ತೆಗೆದುಕೊಂಡು, ಅತಿದೊಡ್ಡ ಆರ್ಥಿಕ ವ್ಯವಸ್ಥೆಯಾಗುವತ್ತ ಮುಂದುವರೆಯಬಹುದು” ಎಂದು ಹೇಳಿದರು.

Advertisements

“ಭಾರತದ ಬಂಡವಾಳ ಮಾರುಕಟ್ಟೆಗಳ ವಿಕಾಸ, ವಿದೇಶಿ ಬಂಡವಾಳ ಹೂಡಿಕೆಗಳ ಚಂಚಲತೆಯ ವಿರುದ್ಧ ಸ್ಥಿರತೆ ಒದಗಿಸುವಲ್ಲಿ ದೇಶೀಯ ಹಣಕಾಸು ಸಂಸ್ಥೆಗಳ ಪ್ರಾಮುಖ್ಯತೆ, ಜಾಗತಿಕ ಅನಿಶ್ಚಿತತೆ ಈ ಸಂದರ್ಭದಲ್ಲಿ ಭಾರತೀಯ ಮಾರುಕಟ್ಟೆಯ ಚೇತರಿಕೆಯು ಭವಿಷ್ಯದ ಬೆಳವಣಿಗೆಯ ಧನಾತ್ಮಕ ಲಕ್ಷಣವಾಗಿದೆ. ಆರ್ಥಿಕತೆಯ ಭವಿಷ್ಯವನ್ನು ರೂಪುಗೊಳಿಸುವಲ್ಲಿ ಆಧುನಿಕ ಬುದ್ಧಿಮತ್ತೆಯ ಪಾತ್ರದ ಒಳನೋಟ ಬಹುಮುಖ್ಯ” ಎಂದರು.‌

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಅಸೋಸಿಯೇಟ್ ಪ್ರೊಫೆಸರ್ ಡಾ ಶ್ರೀರಾಮ್ ಅವರು ಆರ್ಥಿಕ ವಿಷಯ ಹಾಗೂ ಜಾಗತಿಕ ಸವಾಲುಗಳ ನಡುವೆ ಭಾರತೀಯ ಆರ್ಥಿಕ ಮಾರುಕಟ್ಟೆಯ ಅಭಿವೃದ್ಧಿಗೆ ಅನುಕೂಲಕರ ಅಂಶಗಳ ಬಗ್ಗೆ ಮಾತನಾಡಿದರು.

ಪ್ರಾಧ್ಯಾಪಕರು ಮತ್ತು ಡೀನ್ ಅಂತಾರಾಷ್ಟ್ರೀಯ ಸಂಬಂಧಗಳು, ಎಸ್‌ಡಿಎಂಐಎಂಡಿ ಡಾ ಮೌಸುಮಿ ಸೇನ್ ಗುಪ್ತರವರು, ಹಣಕಾಸು ವಿನಿಮಯದ ಡಿಜಿಟಲೀಕರಣ, ಅದರ ಮಹತ್ವ ಹಾಗೂ ಆರ್ಥಿಕ ಒಳಗೊಳ್ಳುವಿಕೆಯ ಬಗ್ಗೆ ಮಾತನಾಡಿದರು.

ದೇಶದ ವಿವಿಧ ಭಾಗಗಳಿಂದ ಸಮ್ಮೇಳನಕ್ಕೆ ಆಗಮಿಸಿರುವ ತಜ್ಞರು, ಅಸೋಸಿಯೇಟ್ ಪ್ರೊಫೆಸರ್, ಲೇಖಕ ಡಾ ಎಸ್ ಕಣ್ಣದಾಸ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X