ಮೈಸೂರು | ಮುಸ್ಲಿಂ ಸಮುದಾಯ ಕುರಿತು ಅವಹೇಳನ; ಆರೋಪಿ ಸುರೇಶ್ ಬಂಧನ

Date:

ಮುಸ್ಲಿಂ ಸಮುದಾಯವನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಸ್ಟ್‌ ಹಾಕಿದ್ದ ಆರೋಪಿ ಸುರೇಶ್‌ ಎಂಬಾತನನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

- Advertisement -

ಮೈಸೂರಿನ ಉದಯಗಿರಿ ನಿವಾಸಿ ಸುರೇಶ್ ಎಂಬಾತ ಪೋಸ್ಟರ್‌ವೊಂದನ್ನು ರಚಿಸಿದ್ದು, ಅದರಲ್ಲಿ ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಹಾಗೂ ಅರವಿಂದ ಕೇಜ್ರಿವಾಲ್ ಅವರನ್ನು ಅರೆನಗ್ನ ರೀತಿಯಲ್ಲಿ ಚಿತ್ರಿಸಿ, ಅವರ ತೊಡೆಮೇಲೆ ವ್ಯಕ್ತಿಯೊಬ್ಬ ನಮಾಜ್ ಮಾಡುತ್ತರುವಂತೆ ಚಿತ್ರಿಸಲಾಗಿತ್ತು. ಜೊತೆಗೆ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಕುರಿತು ಅವಹೇನಾಕಾರಿ ಸಾಲುಗಳನ್ನು ಬರೆಯಲಾಗಿತ್ತು. ಆ ಪೋಸ್ಟರ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಆ ಪೋಸ್ಟ್‌ ವೈರಲ್ ಆದ ಬಳಿಕ, ಸೋಮವಾರ ರಾತ್ರಿ, ಮುಸ್ಲಿಂ ಸಮುದಾಯ ಮುಖಂಡರು ಉದಯಗಿರಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಆರೋಪಿ ಸುರೇಶ್‌ನನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದರು.

ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಯತ್ನಿಸಿದಾಗ, ಕಲ್ಲು ತೂರಾಟ ನಡೆದಿದೆ. ಬಳಿಕ, ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದ್ದರು. ಆರೋಪಿಯನ್ನು ಬಂಧಿಸುವುದಾಗಿ ಭರವಸೆ ನೀಡಿದ ಬಳಿಕ, ಪ್ರತಿಭಟನೆ ಸ್ಥಗಿತಗೊಂಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತ್ತು.

ಲಾಠಿ ಚಾರ್ಜ್‌ ವೇಳೆ ಹಲವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಸುರೇಶ್‌ನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಠಾಣೆಯ ಸುತ್ತ ಪೊಲೀಸರನ್ನು ನಿಯೋಜಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...