ಮೈಸೂರು | ಅಂಬೇಡ್ಕರ್ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡರೆ ದೇಶಕ್ಕೆ ಒಳಿತು: ಶಂಕರ ದೇವನೂರು

Date:

Advertisements

ಡಾ. ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ಕೇವಲ ಆಚರಣೆಗಳಿಗೆ ಮಾತ್ರ ಸೀಮಿತಗೊಳಿಸಬಾರದು. ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡರೆ ದೇಶಕ್ಕೆ ಒಳಿತು ಎಂದು ಸಂಸ್ಕೃತಿ ಚಿಂತಕ ಹಾಗೂ ವಿಶ್ರಾಂತ ಮುಖ್ಯ ಅಭಿಯಂತರರಾದ ಶಂಕರ ದೇವನೂರು ಅಭಿಪ್ರಾಯಪಟ್ಟರು.

ಮೈಸೂರು ವಿಶ್ವವಿದ್ಯಾನಿಲಯದ ಯುವರಾಜ ಕಾಲೇಜಿನಲ್ಲಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಅಂಬೇಡ್ಕರ್‌ ಅವರು ಯಾವುದೇ ಒಂದು ಜಾತಿಗಾಗಿ ಹೋರಾಟ ಮಾಡಿದವರಲ್ಲ. ಈ ದೇಶದ ಶೋಷಿತ ಸಮುದಾಯಕ್ಕೆ ಕೊಟ್ಟಂತಹ ಕೊಡುಗೆ ಅಪಾರ. ಅಲ್ಲದೆ ಈ ದೇಶದ ಮಹಿಳೆಯರು, ದಲಿತರು, ಕಾರ್ಮಿಕರು, ಹಿಂದುಳಿದ ವರ್ಗಗಳ ಏಳಿಗೆಗಾಗಿ ಬದುಕಿರುವವರೆಗೂ ಶ್ರಮಿಸಿದರು. ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಸಂವಿಧಾನ ಸಂವಿಧಾನದ ಮೂಲಕ ಕಲ್ಪಿಸಿದ್ದು, ಎಲ್ಲರಲ್ಲೂ ಭ್ರಾತೃತ್ವ ಭಾವನೆಗಳು ಮೂಡಿ ಪ್ರೀತಿಯಿಂದ ಬದುಕುವಂತಹ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ” ಎಂದು ಹೇಳಿದರು.

Advertisements
ಅಂಬೇಡ್ಕರ್‌ ಜಯಂತಿ ಯುವರಾಜ ಕಾಲೇಜು

“ಮಹಿಳೆಯರ ಹಕ್ಕು ಮತ್ತು ರಕ್ಷಣೆಗಾಗಿ ರಚಿಸಿದ್ದ ಹಿಂದೂ ಕೋಡ್ ಬಿಲ್ ಅನ್ನು ಪಾರ್ಲಿಮೆಂಟ್‌ನಲ್ಲಿ ಮಂಡಿಸಿದರು. ಆದರೆ ಆ ಮಸೂದೆಯನ್ನು ಜಾರಿಗೊಳಿಸಲು ಒಪ್ಪಿಗೆ ಸಿಗಲಿಲ್ಲವೆಂಬ ಕಾರಣಕ್ಕೆ ತನ್ನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದ ಏಕೈಕ ಧೀಮಂತ ನಾಯಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮಾತ್ರ” ಎಂದು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಡಾ. ಬಿ ಆರ್ ಅಂಬೇಡ್ಕರ್ ಜೋಡಿ ರಸ್ತೆ ನಾಮಫಲಕ ಅನಾವರಣ

ಆಡಳಿತಾಧಿಕಾರಿ ಕೆ ಅಜಯ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
ಕಾಲೇಜಿನ ಪ್ರಾಂಶುಪಾಲರು ಎಸ್ ಮಹದೇವಮೂರ್ತಿ ಅಧ್ಯಕ್ಷತೆಯ ಭಾಷಣವನ್ನು ನುಡಿದರು.

ಕಾರ್ಯಕ್ರಮದಲ್ಲಿ ಪ್ರೊ. ಕೃಷ್ಣಮೂರ್ತಿ, ಪ್ರೊ. ಸಿ ನಾಗೇಶ್ ಬಾಬು, ಬಿ ಎಂ ವೆಂಕಟೇಶ್, ಡಾ. ಎಂ ಕೆ ಗಿರೀಶ್ ಚಂದ್ರ, ಡಾ. ರವಿಚಂದ್ರನ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X