ಮೈಸೂರು | ಜೆಎಸ್ಎಸ್ ಮಹಾವಿದ್ಯಾಪೀಠ; 1 ರಿಂದ 8ನೇ ತರಗತಿಗೆ ಅರ್ಜಿ ಆಹ್ವಾನ

Date:

ಜೆಎಸ್ಎಸ್ ಮಹಾವಿದ್ಯಾಪೀಠದ ವತಿಯಿಂದ 2023-24ನೇ ಸಾಲಿಗೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಸುತ್ತೂರಿನ ಜೆಎಸ್ಎಸ್ ಶಾಲೆ ಮತ್ತು ವಿದ್ಯಾರ್ಥಿ ನಿಲಯದಲ್ಲಿ 1 ರಿಂದ 8 ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇಂಗ್ಲಿಷ್ ಮಾಧ್ಯಮ (1, 5 ಮತ್ತು 8 ನೇ ತರಗತಿ) ಮತ್ತು ಕನ್ನಡ ಮಾಧ್ಯಮ (1 ರಿಂದ 8 ನೇ ತರಗತಿ) ಎರಡಕ್ಕೂ ಪ್ರವೇಶ ಪಡೆಯಬಹುದು.

ದುಡಿಯುವ ವರ್ಗ, ಬಡವರು ಮತ್ತು ಸಮಾಜದ ವಂಚಿತ ವರ್ಗದ ಮಕ್ಕಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ಅರ್ಜಿ ನಮೂನೆಗಳು ಶಾಲಾ ಕಚೇರಿ ಅಥವಾ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತವೆ www.jssonline.org. ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಅಂಕಪಟ್ಟಿ, ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರಗಳು, ವಿದ್ಯಾರ್ಥಿ/ವಿದ್ಯಾರ್ಥಿನಿ ಮತ್ತು ಪೋಷಕರ ಆಧಾರ್ ಕಾರ್ಡ್‌, ಪಡಿತರ ಚೀಟಿ, ಜಾತಿ ಪ್ರಮಾಣಪತ್ರ ಮತ್ತು ಆದಾಯ ಪ್ರಮಾಣಪತ್ರದೊಂದಿಗೆ ಮೇ 13ರೊಳಗೆ ಸಲ್ಲಿಸಬೇಕು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಚುನಾವಣೆ ಕಾವು; ಉಚಿತ ವಸ್ತು, ನಗದು ಸಾಗಾಟ ತಡೆಯಲು ಚೆಕ್‌ಪೋಸ್ಟ್ ಆರಂಭ

ಅರ್ಜಿ ಸಲ್ಲಿಸುವವರು ಆಡಳಿತಾಧಿಕಾರಿಗಳು, ಜೆಎಸ್ಎಸ್ ಸಂಸ್ಥೆ, ಸುತ್ತೂರು, ನಂಜನಗೂಡು, ಮೈಸೂರು-571129 ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ 7411486938 ಅಥವಾ 08221-232054 ಸಂಪರ್ಕಿಸಬಹುದು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಎಸ್ಎಫ್ಐ ಜಿಲ್ಲಾ ಸಮಿತಿಯಿಂದ ʼವಿದ್ಯಾರ್ಥಿನಿಯರ ಸಮಾವೇಶʼ

ಪ್ರತಿ ವಿದ್ಯಾರ್ಥಿಯೂ ಸಮಾಜದ ಪ್ರಗತಿಗಾಗಿ ಚಿಂತಿಸಬೇಕು. ಸಮಾಜದಲ್ಲಿನ ಅನೇಕ ಸವಾಲುಗಳನ್ನು ಎದುರಿಸಲು...

ಬೆ. ಗ್ರಾಮಾಂತರ | ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟನೆ

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಕನಸಿದ ಪಶು ಆಸ್ಪತ್ರೆ ನೆಲಮಂಗಲದ...

ರಾಯಚೂರು | ನಿರ್ಮಾಣವಾಗಿ 6 ತಿಂಗಳಿಗೇ ಬಿರುಕುಬಿಟ್ಟ ರಸ್ತೆ

ನಿರ್ಮಾಣ ಮಾಡಿ ಇನ್ನೂ ಆರು ತಿಂಗಳೂ ಕಳೆದಿಲ್ಲ. ಆಗಲೇ ಬಿರುಕು ಬಿಟ್ಟಿದ್ದು,...

ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ತಮ್ಮದೇ ಸರ್ಕಾರದ ವಿರುದ್ಧ ಬಿ.ಆರ್ ಪಾಟೀಲ್ ಕಿಡಿ

ಕಳೆದ ಸದನದಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ...