ಮೈಸೂರು | 2022-23ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ಪ್ರದಾನ

Date:

ಮೈಸೂರು ನಗರದ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಾಲಯದಿಂದ 2022-23ನೇ ಸಾಲಿನ ‘ಕಾಯಕಲ್ಪ ಪ್ರಶಸ್ತಿʼ ಪ್ರದಾನ ಸಮಾರಂಭ ಆಯೋಜಿಸಿದ್ದರು.

- Advertisement -

2022-23ನೇ ಸಾಲಿನಲ್ಲಿ ಜಿಲ್ಲಾದ್ಯಂತ ಸುಮಾರು 67 ಆರೋಗ್ಯ ಕೇಂದ್ರಗಳು ಕಾಯಕಲ್ಪ ಪ್ರಶಸ್ತಿಗೆ ಭಾಜನವಾಗಿದ್ದು, ಸದರಿ ಆರೋಗ್ಯ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ ಪ್ರಶಂಸಾ ಪತ್ರಗಳನ್ನು ವಿತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಗಾಯತ್ರಿ ಕೆ ಎಂ ನೇತೃತ್ವದಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ವೈದ್ಯಾಧಿಕಾರಿಗಳ 2ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.‌

ಸಭೆಯಲ್ಲಿ ಮಾತನಾಡಿದ ಸಿಇಒ ಕೆ ಎಂ ಗಾಯತ್ರಿ, “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಮಾರ್ಗಸೂಚಿ ಅನುಸಾರ ಪರಿಣಾಮಕಾರಿ ಅನುಷ್ಠಾನ ಮಾಡಿ, ಶೇ.100ರಷ್ಟು ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಲು ಕಟ್ಟುನಿಟ್ಟಾಗಿ ಕ್ರಮ ವಹಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಅ.25ರಿಂದ ಅನೈರ್ಮಲ್ಯ ಶೌಚಾಲಯ, ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ ಸಮೀಕ್ಷೆ: ವೆಂಕಟ್ ರಾಜಾ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಕುಮಾರಸ್ವಾಮಿ ಪಿ ಸಿ ಹಾಗೂ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...