ಭತ್ತದ ಗದ್ದೆಗೆ ಕೆಎಸ್‌ಆರ್‌ಟಿಸಿ ಬಸ್ ಉರುಳಿ ಬಿದ್ದಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಕೆ ಆರ್ ನಗರ ತಾಲೂಕಿನ ಕೆಸ್ತೂರು ಕೊಪ್ಪಲು ಗೇಟ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದೆ. ಬಸ್ ಬಿದ್ದ ರಭಸಕ್ಕೆ ಸೀಟುಗಳೆಲ್ಲ ಮುರಿದು ಒಂದರ ಮೇಲೊಂದು ಬಿದ್ದಿವೆ. ಚಾಲಕನ ಕೈ ಮುರಿದಿದ್ದು, ಕೆಲವು ಪ್ರಯಾಣಿಕರ ತಲೆಗೆ ತೀವ್ರ ಪೆಟ್ಟಾಗಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಹಳೇ ಬಸ್ ನಿಲ್ದಾಣದ ಒತ್ತುವರಿ ಆರೋಪ; ಕ್ರಮಕ್ಕೆ ಆಗ್ರಹ
“ಗಾಯಾಳುಗಳಿಗೆ ಕೆ ಆರ್ ನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮೈಸೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್‌ನಲ್ಲಿ 70 ಪ್ರಯಾಣಿಕರಿದ್ದರು. ಗಾಯಗೊಂಡವರ ಮಾಹಿತಿ ಕಲೆ ಹಾಕಲಾಗುತ್ತಿದೆ” ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.
