ಮೈಸೂರು | ಅವೈಜ್ಞಾನಿಕ ದತ್ತಾಂಶಗಳನ್ನು ಆಧರಿಸಿದ ಒಳಮೀಸಲಾತಿ ಧಿಕ್ಕರಿಸುವಂತೆ ಕುಳುವ ಮಹಾಸಂಘ ಆಗ್ರಹ

Date:

Advertisements

ಅವೈಜ್ಞಾನಿಕ, ಅತಾರ್ಕಿಕ ದತ್ತಾಂಶಗಳನ್ನು ಆಧರಿಸಿದ ಒಳಮೀಸಲಾತಿ ಧಿಕ್ಕರಿಸುವಂತೆ ಮೈಸೂರು ಜಿಲ್ಲಾ ಕುಳುವ ಮಹಾಸಂಘ ಆಗ್ರಹಿಸಿದೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕುಳುವ ಮಹಾ ಸಂಘದ ಅಧ್ಯಕ್ಷ ಡಿ ಎನ್ ಮುತ್ತುರಾಜು, “ಪರಿಶಿಷ್ಟ ಜಾತಿಯ ಒಳಮೀಸಲಾತಿಯ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಸಪ್ತಪೀಠವು ತೀರ್ಪು ನೀಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯ ಒಳಮೀಸಲಾತಿ ಕುರಿತಾಗಿ ಅವೈಜ್ಞಾನಿಕ, ಅತಾರ್ಕಿಕ ಹಾಗೂ ಅಸಮರ್ಥನೀಯ ದತ್ತಾಂಶಗಳನ್ನು ಆಧರಿಸಿ ಒಳಮೀಸಲಾತಿ ವರ್ಗೀಕರಣಕ್ಕೆ ಮುಂದಾಗಿರುವುದು ಸಾಮಾಜಿಕ ನ್ಯಾಯದ ಕಗ್ಗೊಲೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪರಿಶಿಷ್ಟ ಜಾತಿಯ 101 ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯತೆ ಕುರಿತಾದ ಸಮಗ್ರ ಹಾಗೂ ವಸ್ತುನಿಷ್ಟ ಅಂಕಿ-ಅಂಶಗಳ ಕುರಿತಾದ ಕೊರತೆ ಇದ್ದು, ಈ ಬಗ್ಗೆ ವೈಜ್ಞಾನಿಕ ಅಧ್ಯಯನ ಕೈಗೊಳ್ಳಬೇಕು. ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಏಕಾಏಕಿ ಒಳಮೀಸಲಾತಿ ವರ್ಗೀಕರಣ ಕುರಿತಾಗಿ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಮೈಸೂರು ಜಿಲ್ಲಾ ಕುಳುವ ಮಹಾಸಂಘವು ತೀವೃವಾಗಿ ಖಂಡಿಸುತ್ತದೆ ಎಂದು ಹೇಳಿದರು.

Advertisements
WhatsApp Image 2024 10 29 at 8.30.31 PM 1

ಪರಿಶಿಷ್ಟ ಜಾತಿಗಳ ನಡುವೆ ಒಳಮೀಸಲಾತಿ ಕಲ್ಪಿಸಲು ರಾಜ್ಯದಲ್ಲಿ 101 ಪರಿಶಿಷ್ಟ ಜಾತಿಗಳ ನಡುವಿನ ಮೀಸಲಾತಿ ಹಂಚಿಕೆಯ ಕುರಿತಾದ ಸಮಗ್ರ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಪ್ರಾತಿನಿಧ್ಯವನ್ನು ಖಾತ್ರಿಪಡಿಸಲು ಸಮರ್ಥನೀಯ ಹಾಗೂ ವೈಜ್ಞಾನಿಕ ದತ್ತಾಂಶಗಳನ್ನು ಕ್ರೋಢಿಕರಿಸಿ, ವಿಶ್ಲೇಷಿಸಿ ತಜ್ಞರ ವರದಿಯನ್ನು  ಪಡೆದುಕೊಳ್ಳದ ಹೊರತು, ಸರ್ಕಾರವು ಯಾವುದೇ ಕ್ರಮವನ್ನು ಕೈಗೊಳ್ಳದಂತೆ  ರಾಜ್ಯದ ದಮನಿತ ಹಾಗೂ ಅವಕಾಶ ವಂಚಿತ ಅಲೆಮಾರಿ, ಕೊರಮ, ಕೊರಚ, ಕೊರವ ಸಮುದಾಯಗಳ ಪರವಾಗಿ ಮೈಸೂರು ಜಿಲ್ಲಾ ಕುಳುವ ಮಹಾಸಂಘವು ಸರ್ಕಾರವನ್ನು ಒತ್ತಾಯಿಸುತ್ತದೆ ಎಂದರು.

ಪ್ರಧಾನ ಕಾರ್ಯದರ್ಶಿ ಮೋಹನ್ ಕಾಯಕ ಮಾತನಾಡಿ, 2011ರ ಜನಗಣತಿ ಆಧರಿಸಿ ಒಳಮೀಸಲಾತಿ ವರ್ಗಿಕರಣ ಮಾಡಿರುವುದು ಸರಿಯಲ್ಲ. ಇದರಿಂದ ಅವಕಾಶ ವಂಚಿತ ಕೊರಮ, ಕೊರಚ ಸಮುದಾಯಗಳಿಗೆ ಅನ್ಯಾಯವಾಗಲಿದೆ. ಅಲ್ಲದೇ, ಜಾತಿಗಣತಿ ವರದಿಯನ್ನು ಬಹಿರಂಗಗೊಳಿಸಿದ ನಂತರ ಜಾತಿಗಣತಿ ಜಾರಿಗೊಳಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ಪಿಲಿಕುಳ ನಿಸರ್ಗಧಾಮದಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ ಬಗ್ಗಿ ಎಲೆಕ್ಟ್ರಿಕ್ ವಾಹನ

ಕಾರ್ಯಾಧ್ಯಕ್ಷ ಪಿ ನಾಗರಾಜು ಮಾತನಾಡಿ, ಪರಿಶಿಷ್ಟ ಜಾತಿಯ ಅಲೆಮಾರಿ ಕೊರಮ, ಕೊರಚ ಸಮುದಾಯಗಳು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ತದಲ್ಲಿ ಅವಕಾಶವಿಲ್ಲದೆ ತಬ್ಬಲಿಯಾಗಿದೆ. ಹಾಗಾಗಿ ಒಳಮೀಸಲಾತಿ ವರ್ಗೀಕರಣ ಪಾರದರ್ಶಕವಾಗಿರಬೇಕು. ಪ್ರಸ್ತುತ ಜನಸಂಖ್ಯೆಗೆ ಆದಾರವಾಗಿ ಒಳಮೀಸಲಾತಿ ಹಂಚಿಕೆಯಾಗಬೇಕು ಎಂದರು.

ಮೈಸೂರು ಜಿಲ್ಲಾ ಕುಳುವ ಮಹಾಸಂಘದ ಜಂಟಿ ಕಾರ್ಯದರ್ಶಿ ಎನ್ ರವಿಕುಮಾರ್, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ, ಹೆಚ್ ಡಿ ಕೋಟೆ, ತಾಲ್ಲೂಕು ಅಧ್ಯಕ್ಷ ಪುರುಷೋತ್ತಮ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X