ಮೈಸೂರು | ಕುಮಾರಸ್ವಾಮಿಯವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇಲ್ಲ: ಸಚಿವ ಎಚ್‌ ಸಿ ಮಹದೇವಪ್ಪ

Date:

Advertisements

ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ಸದನದ ಒಳಗೆ ಬಿಜೆಪಿಗೆ ಬೆಂಬಲ ನೀಡಿ, ಸದನದ ಹೊರಗೆ ಪ್ರತಿಭಟನೆ ಮಾಡುವ ನಾಟಕ ಆಡಿದ್ದ ಕುಮಾರಸ್ವಾಮಿ ಅವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇಲ್ಲ ಎಂಬುದು ಎಲ್ಲರಿಗೂ ತಿಳಿದ ವಿಚಾರ ಎಂದು ಸಮಾಜ ಕಲ್ಯಾಣ ಸಚಿವ ಡಾ ಎಚ್ ಸಿ ಮಹದೇವಪ್ಪ ಹೇಳಿದರು.

ಮೈಸೂರು ನಗರದಲ್ಲಿ ಪತ್ರಿಕೆ ಪ್ರಕಟಣೆಗೆ ತಿಳಿಸಿದ್ದು, “ಉತ್ತಮ ಸಾರ್ವಜನಿಕ ಬದುಕಿನ ಭಾಗವಾಗಿ ಈ ಹಿಂದೆಯೇ ಸೈದ್ಧಾಂತಿಕ ಬದ್ಧತೆಯ ಪ್ರಾಮುಖ್ಯತೆ ಮತ್ತು ಅದು ನಾಯಕತ್ವದ ಮೇಲೆ ಉಂಟು ಮಾಡುವ ಪರಿಣಾಮದ ಬಗ್ಗೆ ಒಳ್ಳೆಯ ಮನಸ್ಸಿನಿಂದ ಹಿಂದೆಯೇ ಅವರಿಗೆ ನಾನು ಎಚ್ಚರಿಸಿದ್ದೆ. ಆದರೆ ಇದ್ಯಾವುದನ್ನೂ ಗಂಭೀರವಾಗಿ ಪರಿಗಣಿಸದ ಅವರು ಈಗ ಮತ್ತೆ ಬಿಜೆಪಿಯೊಂದಿಗೆ ಕೈಜೋಡಿಸಿ ಸೈದ್ಧಾಂತಿಕವಾಗಿ ತಾವೆಷ್ಟು ಅಂಧಃಪತನಕ್ಕೆ ಜಾರಿದ್ದಾರೆ ಎಂಬುದನ್ನು ಸಾಬೀತು ಪಡಿಸಿದ್ದಾರೆ” ಎಂದರು.

“ಒಂದು ಉತ್ತಮ ಪ್ರಾದೇಶಿಕ ಪಕ್ಷವಾಗಿ ಸಂಘಟನೆ ಮತ್ತು ವಿಷಯಾಧಾರಿತ ಹೋರಾಟಗಳ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ತೋರಬೇಕಿದ್ದ ಅವರು ಈಗಲೂ ಸಹ ಅಧಿಕಾರ ಎಂದರೆ ಅತಂತ್ರ ಸ್ಥಿತಿಯಲ್ಲಿ ದೊರಕುವ ಅನಾಯಾಸ ಅವಕಾಶ ಎಂದುಕೊಂಡಿದ್ದು, ಇದೊಂದು ನಗೆಪಾಟಲಿನ ವಿಷಯವಾಗಿದೆ” ಎಂದು ಹೇಳಿದರು.

Advertisements

“ಬಿಜೆಪಿಯ ಎಲ್ಲ ಜನ ವಿರೋಧಿ ನೀತಿಗಳ ಸಂದರ್ಭದಲ್ಲಿ ಮೌನವಾಗಿದ್ದು ಕೆಲವಕ್ಕೆ ಬೆಂಬಲವನ್ನೂ ನೀಡಿದ ಕುಮಾರಸ್ವಾಮಿ ಅವರು ಇದೀಗ ಅಧಿಕಾರ ಸಿಕ್ಕಿಲ್ಲ ಎಂಬ ಒಂದೇ ಕಾರಣಕ್ಕೆ ಬಹಳಷ್ಟು ಹತಾಶೆಯಿಂದ ವರ್ತಿಸುತ್ತಿರುವುದು ಅತ್ಯಂತ ಸ್ಪಷ್ಟವಾಗಿದೆ” ಎಂದರು.

“ಮನೆಗೆ ಕರೆಂಟ್ ಪಡೆದುಕೊಂಡ ವಿಚಾರದಲ್ಲಿ ಕ್ಷುಲ್ಲಕ ರಾಜಕೀಯ ಮಾಡಬಾರದೆಂದು ಬೋಧಿಸುವ ಕುಮಾರಸ್ವಾಮಿ ಅವರು, ಮುಖ್ಯಮಂತ್ರಿಗಳು ಒಂದೆರಡು ಗಂಟೆ ಕ್ರಿಕೆಟ್ ಪಂದ್ಯ ವೀಕ್ಷಿಸಲು ಹೋದರೆ ಇವರಿಗೆ ರಾಜ್ಯದ ಸಮಸ್ಯೆಗಿಂತ ಕ್ರಿಕೆಟ್ ನೋಡುವುದು ಮುಖ್ಯವೆಂದು ಅತ್ಯಂತ ಬಾಲಿಶತನದ ಹೇಳಿಕೆಯನ್ನು ನೀಡಿದ್ದರು. ತಾನು ಮಾತ್ರ ಏನಾದರೂ ಹೇಳಬಹುದು, ಮಿಕ್ಕವರೆಲ್ಲರೂ ಇವರು ಅಪೇಕ್ಷಿಸುವ ಆದರ್ಶತನದಿಂದ ಇರಬೇಕೆಂದು ಬಯಸುವ ಕುಮಾರಸ್ವಾಮಿ ಅವರು ತಮ್ಮ ದ್ವಂದ್ವ ನಿಲುವುಗಳ ಕಾರಣಕ್ಕಾಗಿಯೇ ತಮ್ಮ ನಾಯಕತ್ವದ ಮೌಲ್ಯವನ್ನು ದಿನೇ ದಿನೆ ಕಳೆದುಕೊಳ್ಳುತ್ತಿದ್ದಾರೆ” ಎಂದು ತಿಳಿಸಿದರು.

“ಸಿದ್ದರಾಮಯ್ಯ ಅವರು ವರ್ಗಾವಣೆ ದಂಧೆ ಮಾಡುತ್ತಿದ್ದಾರೆಂದು ತಳಬುಡವಿಲ್ಲದ ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಅವರು ತಾವು ಮುಖ್ಯಮಂತ್ರಿ ಆಗಿದ್ದಾಗ ವರ್ಗಾವಣೆಗಳನ್ನು ಮಾಡಿಲ್ಲವೇ? ಅದನ್ನೂ ಅವರು ದಂಧೆ ಎಂದು ಪರಿಗಣಿಸುತ್ತಾರಾ ಎಂಬುದನ್ನು ಸ್ಪಷ್ಟಪಡಿಸಲಿ” ಎಂದರು.

“ಓರ್ವ ಪ್ರಾದೇಶಿಕ ಪಕ್ಷದ ನಾಯಕನಾಗಿ, ರಾಜ್ಯದ ಜನರ ಸಂಕಷ್ಟಗಳಿಗೆ ತೆರೆದ ಮನಸ್ಸಿನಿಂದ ದನಿಯಾಗುವ ಬಹುದೊಡ್ಡ ಜವಾಬ್ದಾರಿ ಕುಮಾರಸ್ವಾಮಿ ಅವರ ಮೇಲಿದೆ. ಆದರೆ ಅತಂತ್ರ ಸ್ಥಿತಿಯಲ್ಲಿ ಅಧಿಕಾರ ಪಡೆಯುವ ಉದ್ದೇಶ ಹೊಂದಿರುವ ಅವರಿಗೆ, ಜನರ ಬದುಕಿನ ಕಷ್ಟಗಳಾಗಲೀ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಪಕ್ಷಗಳು ನಿರ್ವಹಿಸುವ ಪಾತ್ರದ ಕುರಿತಾಗಲೀ ತಿಳಿದಿಲ್ಲ ಎಂಬುದಕ್ಕೆ ಅವರ ನಡವಳಿಕೆಗಳೇ ಮತ್ತೆ ಮತ್ತೆ ಸಾಕ್ಷಿ ಎನ್ನುವಂತಿವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ನಿವೇಶನದ ಮಂಜೂರಾತಿ ಪತ್ರ; ಪತ್ರಕರ್ತರ ಸಂಘಕ್ಕೆ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ

“ಆರೋಗ್ಯಕರ ಪ್ರಜಾಪ್ರಭುತ್ವದ ದೃಷ್ಟಿಯಿಂದ ವಿಪಕ್ಷಗಳು ಏನು ಮಾಡಬೇಕು ಎಂಬುದರ ಬಗ್ಗೆಯೂ ಆಡಳಿತ ಪಕ್ಷವೇ ಸಲಹೆ ನೀಡಬೇಕಾದ ಪರಿಸ್ಥಿತಿ ಮೂಡುತ್ತಿದ್ದು, ಇಂತಹ ಪರಿಸ್ಥಿತಿಗೆ ಕುಮಾರಸ್ವಾಮಿ ಆದಿಯಾಗಿ ಬಹಳಷ್ಟು ಮಂದಿ ಕಾರಣರಾಗುತ್ತಿದ್ದಾರೆ ಎಂಬುದನ್ನು ಅತ್ಯಂತ ಬೇಸರದಿಂದಲೇ ಹೇಳಬೇಕಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X