ಮೈಸೂರು | ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದ ಕುವೆಂಪುನಗರ ಎಸ್‌ಐ

Date:

ಪ್ರಕರಣವೊಂದಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವರಿಂದ ಠಾಣೆಯೊಳಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಮೈಸೂರಿನ ಕುವೆಂಪುನಗರ ಪೊಲೀಸ್‌ ಠಾಣೆಯ ಮಹಿಳಾ ಸಬ್‌ ಇನ್ಸ್‌ಪೆಕ್ಟರ್‌ ಅನ್ನು ಲೋಕಾಯುಕ್ತ ಪೊಲೀಸರು ರೆಡ್‌ ಹ್ಯಾಂಡ್‌ ಆಗಿ ಸೆರೆ ಹಿಡಿದಿದ್ದಾರೆ.

ಕುವೆಂಪುನಗರ ಠಾಣೆ ಎಸ್‌ಐ ರಾಧಾ ಸಿಕ್ಕಿಬಿದ್ದವರು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಮೈಸೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತಂಡ ಹಣದೊಂದಿಗೆ ಸಬ್‌ ಇನ್ಸ್‌ಪೆಕ್ಟರ್‌ ಅವರನ್ನು ಬಂಧಿಸಿತು. ಬಂಧಿತ ಎಸ್‌ಐ ರಾಧಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಲೋಕಾಯುಕ್ತ ಮೈಸೂರು ವಿಭಾಗದ ಎಸ್ಪಿ ಎಂ.ಎಸ್.ಸಜಿತ್‌ ತಿಳಿಸಿದ್ದಾರೆ.

ಮೈಸೂರಿನ ಕುವೆಂಪುನಗರ ಠಾಣೆ ವ್ಯಾಪ್ತಿಯ ವ್ಯಕ್ತಿಯೊಬ್ಬರ ಲಾಕರ್‌ ಅನ್ನು ಜಪ್ತಿ ಮಾಡಲಾಗಿತ್ತು. ಕೆಲ ದಿನಗಳ ಹಿಂದೆ ಲಾಕರ್‌ ವಿಚಾರದಲ್ಲಿ ದೂರು ದಾಖಲಾಗಿದ್ದರಿಂದ ಜಪ್ತಿಯಾಗಿತ್ತು. ಈ ಕುರಿತು ವಿಚಾರಣೆಯೂ ನಡೆಯುತ್ತಿದೆ. ಕುವೆಂಪುನಗರ ಠಾಣೆಯ ಈ ಪ್ರಕರಣದಲ್ಲಿ ತಮ್ಮ ಲಾಕರ್‌ ಅನ್ನು ವಾಪಾಸ್‌ ಪಡೆಯುವ ನಿಟ್ಟಿನಲ್ಲಿ ಕಾನೂನು ರೀತಿಯಲ್ಲಿ ಪ್ರಯತ್ನವೂ ನಡೆದಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಕಣ್ಣೀರು ಹಾಕಿದ ಕುವೆಂಪುನಗರ ಠಾಣೆ ಎಸ್‌ಐ ರಾಧಾ

 

ಇದರ ನಡುವೆ ಲಾಕರ್‌ ನೀಡಲು ಒಂದು ಲಕ್ಷ ರೂ.ಗಳನ್ನು ಕುವೆಂಪುನಗರ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ರಾಧಾ ಕೇಳಿದ್ದರು. ಆದರೆ 50 ಸಾವಿರ ರೂ.ಗೂ ಮಾತುಕತೆ ನಡೆದಿತ್ತು. ಹಣವನ್ನು ನೀಡಿದರೆ ಲಾಕರ್‌ ಬಿಡುಗಡೆ ಮಾಡಿಕೊಡುವುದಾಗಿ ಎಸ್‌ಐ ಭರವಸೆ ನೀಡಿದ್ದರು. ಠಾಣೆಗೆ ಅಲೆದು ಸುಸ್ತಾಗಿದ್ದ ವ್ಯಕ್ತಿ ಹಣಕ್ಕೆ ಒಪ್ಪಿಕೊಂಡು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲಾಕರ್‌ ನೀಡುವ ವಿಚಾರದಲ್ಲಿ ಕುವೆಂಪುನಗರ ಎಸ್‌ಐ ರಾಧಾ ಅವರು ಹಣ ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.

ಅದರಂತೆ ವ್ಯಕ್ತಿ ಗುರುವಾರ ಮಧ್ಯಾಹ್ನ ಲಾಕರ್‌ ಪಡೆಯಲು ಕುವೆಂಪುನಗರ ಠಾಣೆಗೆ ಆಗಮಿಸಿದ್ದರು. ಈ ವೇಳೆ ಠಾಣೆಯಲ್ಲಿಯೇ ಇದ್ದ ರಾಧಾ ಅವರು ವ್ಯಕ್ತಿಯಿಂದ 50 ಸಾವಿರ ರೂ.ಗಳನ್ನು ಪಡೆಯಲು ಮುಂದಾದರು. ಹಣವನ್ನು ಸ್ವೀಕರಿಸಿ ಇಟ್ಟುಕೊಳ್ಳುವ ಹೊತ್ತಿಗೆ ಮೈಸೂರು ವಿಭಾಗದ ಲೋಕಾಯುಕ್ತ ಎಸ್ಪಿ ಸಜಿತ್‌, ಡಿವೈಎಸ್ಪಿ ಮಾಲತೇಶ್‌, ಇನ್ಸ್‌ಪೆಕ್ಟರ್‌ ಕೃಷ್ಣಯ್ಯ ಹಾಗೂ ಸಿಬ್ಬಂದಿ ರೆಡ್‌ ಹ್ಯಾಂಡ್‌ ಆಗಿಯೇ ರಾಧಾ ಅವರನ್ನು ಹಿಡಿದರು.

ಈ ವೇಳೆ, “ಹಣ ನನ್ನದಲ್ಲ. ಅನಗತ್ಯವಾಗಿ ನನ್ನನ್ನು ಇದರಲ್ಲಿ ಸಿಲುಕಿಸಲಾಗಿದೆ” ಎಂದು ಕಣ್ಣೀರು ಕೂಡ ಹಾಕಿದರು. ಈ ವೇಳೆ ಎಸ್‌ಐ ಜೊತೆಗೆ ದೂರುದಾರ ಹಾಗೂ ಜತೆಗೆ ಹಣವೂ ಅಲ್ಲಿಯೇ ಇದ್ದುದರಿಂದ ಲೋಕಾಯುಕ್ತ ಪೊಲೀಸರು ಸಾಕ್ಷಿ ಸಮೇತ ಎಸ್‌ಐ ಅವರನ್ನು ಬಂಧಿಸಿದರು. ಅವರಿಂದ ಹೇಳಿಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಪ್ರೀತಂಗೌಡ ಆಪ್ತರಿಬ್ಬರಿಗೆ ಜಾಮೀನು

“ಲಾಕರ್‌ ಪಡೆಯುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಇದನ್ನಾಧರಿಸಿ ಲೋಕಾಯುಕ್ತ ತಂಡ ದಾಳಿ ನಡೆಸಿ ಎಸ್‌ಐ ರಾಧಾ ಅವರನ್ನು ಬಂಧಿಸಿದೆ. ಈ ಪ್ರಕರಣದ ಕುರಿತು ವಿಚಾರಣೆ ನಡೆಯುತ್ತಿದೆ” ಎಂದು ಲೋಕಾಯುಕ್ತ ಎಸ್‌ಪಿ ತಿಳಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು...

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ....

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...