ಮೈಸೂರು | ಸಾಹಿತಿ ಡಾ ಕೆ ಲೀಲಾ ಪ್ರಸಾದ್, ಡಾ ಜಯಪ್ಪ ಹೊನ್ನಾಳಿಗೆ ವಿಶ್ವಮಾನವ ಪ್ರಶಸ್ತಿ

Date:

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನೋತ್ಸವದ ಅಂಗವಾಗಿ ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಖ್ಯಾತ ಸಾಹಿತಿ ಡಾ. ಕೆ. ಲೀಲಾಪ್ರಸಾದ್ ಮತ್ತು ಕವಿ ಡಾ. ಜಯಪ್ಪ ಹೊನ್ನಾಳಿ ಅವರಿಗೆ ವಿಶ್ವ ಮಾನವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

- Advertisement -

ಹೂಟಗಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್, ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಿ.ಬಿ. ರಾಜಶೇಖರ್ ಮತ್ತು ಶಾಲೆ ಮುಖ್ಯ ಶಿಕ್ಷಕರಾದ ಸಂಗೀತ ಹಾಗೂ ಇತರೆ ಗಣ್ಯರು ಲೀಲಾ ಪ್ರಸಾದ್ ಮತ್ತು ಜಯಪ್ಪ ಹೊನ್ನಾಳಿ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ರಾಜಶೇಖರ್ ಮಾತನಾಡಿ, ರಾಷ್ಟ್ರಕಂಡ ಅಪ್ರತಿಮ ಕವಿಗಳಾದ ಕುವೆಂಪು ಅವರ ಜನ್ಮದಿನೋತ್ಸವದ ಅಂಗವಾಗಿ ನಮ್ಮ ವೇದಿಕೆಯಿಂದ ಈ ವರ್ಷ ವಿಶ್ವಮಾನವ ಪ್ರಶಸ್ತಿ ನೀಡುವ ಬಗ್ಗೆ ಚಿಂತನೆ ಮಾಡಿ, ಅದಕ್ಕಾಗಿ ಪ್ರಶಸ್ತಿಯ ಘನತೆಗೆ ತಕ್ಕ ಸಾಧಕರನ್ನು ಆಯ್ಕೆ ಮಾಡುವಾಗ ನಮ್ಮವರೇ ಆದ ಹೆಸರಾಂತ ಕವಿ, ಸಾಹಿತಿ, ವಾಗ್ಮಿ ಡಾ. ಜಯಪ್ಪ ಹೊನ್ನಾಳಿ ಮತ್ತು ಡಾ. ಲೀಲಾ ಪ್ರಸಾದ್ ಅವರನ್ನು ಅಂತಿಮವಾಗಿ ಆಯ್ಕೆ ಮಾಡಿದ್ದೇವೆ.

ಮಂತ್ರಮಾಂಗಲ್ಯದ ಮೂಲಕ ಆಡಂಬರದ ವಿವಾಹಗಳಿಗೆ ಕಡಿವಾಣ ಹಾಕಿದ ಕುವೆಂಪು ಅವರು ನಿಜವಾದ ಸಮಾಜ ಸುಧಾರಕರಾಗಿದ್ದಾರೆ. ಅವರ ಸಾಹಿತ್ಯ, ಲೇಖನ, ಕೃತಿಗಳು ವಿಶ್ವಮಾನವರಾಗಲು ಪ್ರೇರಣೆ ನೀಡುತ್ತವೆ. ಈ ನಿಟ್ಟಿನಲ್ಲಿ ಮಕ್ಕಳು ಈಗಿನಿಂದಲೇ ಕುವೆಂಪು ಅವರ ಸಾಹಿತ್ಯವನ್ನು ಓದುವ ಮೂಲಕ ವಿಶ್ವಮಾನವರಾಗಿ ಬೆಳೆಯಬೇಕು ಎಂದು ಹೇಳಿದರು.

ಡಾ.ಜಯಪ್ಪ ಹೊನ್ನಾಳಿ ಮಾತನಾಡಿ, “ರಸಋಷಿ, ಮಹಾ ದಾರ್ಶನಿಕರು ಮತ್ತು ಸ್ವತಃ ವಿಶ್ವಮಾನವರಾಗಿ ಬದುಕಿದ ರಾಷ್ಟ್ರಕವಿ ಕುವೆಂಪು ಅವರ ಹೆಸರಿನಲ್ಲಿ ವಿಶ್ವ ಮಾನವ ಪ್ರಶಸ್ತಿ ನೀಡುವ ಮೂಲಕ ಕನ್ನಡಾಂಬೆ ರಕ್ಷಣಾ ವೇದಿಕೆ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ಕುವೆಂಪು ಅವರು ತಮ್ಮ ಸಾಹಿತ್ಯದ ಮೂಲಕ ಭಾರತದ ಯಾವ ಭಾಷೆಗೂ ಸಿಗದ ಗೌರವವನ್ನು ಕನ್ನಡ ಭಾಷೆಗೆ ದೊರಕಿಸಿಕೊಟ್ಟಿದ್ದಾರೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ವೆನೆಜುವೆಲಾ ಅಧ್ಯಕ್ಷರ ಅಪಹರಣ ಪ್ರಕರಣ; ಎಸ್‌ಯುಸಿಐ(ಸಿ)ನಿಂದ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆಯ ಪದಾಧಿಕಾರಿಗಳಾದ ಶಿವಕುಮಾರ್, ಹೂಟಗಳ್ಳಿ ಗ್ರಾಪಂ ಸದಸ್ಯ ನಾಗೇಶ್, ಲೂಯಿಸ್, ಹುಣಸೂರು ಪರಮೇಶ, ವತ್ಸಲ, ಲೋಕೇಶ, ವಿಷ್ಣು, ಮಂಜುಳ, ನೇಹ, ರಶ್ಮಿಸಿಂಗ್, ತಾರ, ಭಾಗ್ಯ, ಜಯಲಕ್ಷ್ಮಿ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...