ಮೈಸೂರು | ಮತದಾನ ಕೇಂದ್ರಗಳನ್ನು ಆಕರ್ಷಕವಾಗಿಸಿ; ಅಧಿಕಾರಿಗಳಿಗೆ ಡಿಸಿ ಸೂಚನೆ

Date:

ಮತದಾರರಿಗೆ ಮತದಾನ ಕೇಂದ್ರಗಳು ಆಕರ್ಷಣೀಯವಾಗಿ ಕಾಣುವಂತೆ ಅವುಗಳನ್ನು ಸಿದ್ಧಪಡಿಸಬೇಕು. ಇಂತಹ ಕ್ರಮಗಳು ಚುನಾವಣೆಯಲ್ಲಿ ಮತದಾನದ ಪ್ರಮಾಣವವನ್ನು ಹೆಚ್ಚು ಮಾಡುತ್ತದೆ” ಎಂದು ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅಧಿಕಾರಿಗಳಿಗೆ ತಿಳಿಸಿದರು.

- Advertisement -

ಪಂಚಾಯತ್ ಇಲಾಖೆ ಅಧಿಕಾರಿಗಳಿಗೆ ಆಯೋಜಿಸಿದ್ದ ಚುನಾವಣೆಗೆ ಸಂಬಂಧಿಸಿದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಲೋಕಸಭಾ ಚುನಾವಣೆ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಬಳಿಕ, ಅಧಿಕಾರಿಗಳು ಮತಗಟ್ಟೆಗಳನ್ನು ಸುಂದರಗೊಳಿಸಲು ಸಿದ್ಧತೆಗಳನ್ನು ಪ್ರಾರಂಭಿಸಬಹುದು” ಎಂದು ಹೇಳಿದರು.

“ವರ್ಣಚಿತ್ರಗಳು, ರೇಖಾಚಿತ್ರಗಳು, ರಂಗೋಲಿಗಳು, ಮಾವಿನ ಎಲೆಗಳು ಮತ್ತು ಹೂವುಗಳಿಂದ ಅಲಂಕರಿಸುವಂತಹ ವಿಶೇಷ ಆಕರ್ಷಣೆಗಳು ಮತದಾನದ ಸಮಯದಲ್ಲಿ ತಮ್ಮ ಮತಗಟ್ಟೆಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತವೆ” ಎಂದು ಹೇಳಿದರು.

“ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಾದ್ಯಂತ 2,915 ಮತಗಟ್ಟೆಗಳ ಪೈಕಿ ಗುರುತಿಸಲಾದ ಮೊದಲ ಮೂರು ಮತಗಟ್ಟೆಗಳಿಗೆ ನಗದು ಬಹುಮಾನಗಳನ್ನು ವಿತರಿಸಲಾಗುವುದು” ಎಂದು ಅಧಿಕಾರಿ ಹೇಳಿದರು.

“ಬೂತ್‌ಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದ್ದರೆ ಅವುಗಳನ್ನು ಗುರುತಿಸಿ ಸಣ್ಣ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು. ಎಲ್ಲ ಬೂತ್‌ಗಳಲ್ಲಿಯೂ ಮೂಲ ಸೌಕರ್ಯ ಒದಗಿಸಬೇಕು” ಎಂದು ಬೂತ್ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ತಮ್ಮ ವ್ಯಾಪ್ತಿಯಲ್ಲಿ ಗುರುತಿಸಲಾದ ಮತಗಟ್ಟೆಗಳನ್ನು ದುರಸ್ತಿ ಮಾಡಲು ವಿಫಲವಾದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು” ಎಂದು ಎಚ್ಚರಿಸಿದರು.

“ಎಲ್ಲ ಮತಗಟ್ಟೆ ಅಧಿಕಾರಿಗಳು ದಿನಕ್ಕೆ 14 ರಿಂದ 15 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಬೇಕಾಗಿರುವುದರಿಂದ ಗುಣಮಟ್ಟದ ಆಹಾರವನ್ನು ಪೂರೈಸಲು, ಅವರ ಸುರಕ್ಷತೆಗಾಗಿ ಇತರ ಎಲ್ಲ ವ್ಯವಸ್ಥೆಗಳನ್ನು ಮಾಡಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಚುನಾವಣಾ ನೀತಿ ಸಂಹಿತೆ ಘೋಷಣೆಯಾದ 24 ರಿಂದ 72 ಗಂಟೆಗಳ ಒಳಗೆ ಚುನಾವಣೆಗೆ ಸಂಬಂಧಿಸಿದ ಎಲ್ಲ ರಾಜಕೀಯ ಪಕ್ಷಗಳ ಪ್ರಚಾರ ಸಾಮಗ್ರಿಗಳನ್ನು ತೆಗೆದುಹಾಕಬೇಕು. ಸರ್ಕಾರ ಪ್ರಾರಂಭಿಸಿದ ಯೋಜನಾ ಕಾರ್ಯಗಳನ್ನು ಮಾತ್ರ ಮುಂದುವರಿಸಲು ಅಧಿಕಾರಿಗಳು ಅನುಮತಿಸಬಹುದು. ಒಬ್ಬ ಅಭ್ಯರ್ಥಿಯು ಚುನಾವಣಾ ವೆಚ್ಚಕ್ಕಾಗಿ ಕೇವಲ ₹95 ಲಕ್ಷ ಮಾತ್ರ ಖರ್ಚು ಮಾಡಲು ಅವಕಾಶವಿದೆ. ಈ ಕುರಿತು ಎಚ್ಚರ ವಹಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಶಕ್ತಿನಗರದ ಪಿಯು ಕಾಲೇಜಿಗಿಲ್ಲ ಸ್ವಂತ ಕಟ್ಟಡ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಮಾತನಾಡಿ, “ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸುವಾಗ ವ್ಯಕ್ತಿಯು ತನ್ನ ಜೇಬಿನಲ್ಲಿ ₹50,000ಕ್ಕಿಂತ ಹೆಚ್ಚಿನ ನಗದು ಮೊತ್ತ ಮತ್ತು ₹10,000 ಕ್ಕಿಂತ ಹೆಚ್ಚಿನ ಮೌಲ್ಯದ ಸರಕುಗಳನ್ನು ಕೊಂಡೊಯ್ಯುವಂತಿಲ್ಲ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...