ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಮೈಸೂರು ಜಿಲ್ಲೆಯನ್ನು ಕುಷ್ಠರೋಗ ಮುಕ್ತವಾಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ತಿಳಿಸಿದ್ದಾರೆ.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2024ರ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಕುಷ್ಠರೋಗದ ಪ್ರಕರಣಗಳನ್ನು ಗುಣಪಡಿಸಲು ರೋಗಲಕ್ಷಣಗಳನ್ನು ಶೀಘ್ರವಾಗಿ ಪತ್ತೆಹಚ್ಚಬೇಕು. ಯಾರಿಗಾದರೂ ರೋಗಲಕ್ಷಣಗಳು ಕಂಡುಬಂದರೆ ಅವರನ್ನು ಹತ್ತಿರದ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಬೇಕು” ಎಂದು ಆರೋಗ್ಯ ಕಾರ್ಯಕರ್ತರಿಗೆ ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಆರ್ಥ್ರೋಸ್ಕೋಪಿಕ್ ಕಾರ್ಯವಿಧಾನ; ಕೀಲು ಶಸ್ತ್ರಚಿಕಿತ್ಸೆ ಯಶಸ್ವಿ
“ನಾವು ರೋಗಿಗಳ ವಿರುದ್ಧ ತಾರತಮ್ಯವನ್ನು ತೋರಿಸಬಾರದು. ಆರಂಭಿಕ ಹಂತದಲ್ಲಿ ಕುಷ್ಠರೋಗದ ರೋಗನಿರ್ಣಯ ಮತ್ತು ಸೂಕ್ತ ಚಿಕಿತ್ಸೆ ನೀಡುವುದರಿಂದ ಸೋಂಕಿತ ರೋಗಿಗಳಲ್ಲಿ ಉಂಟಾಗುವ ಅಂಗವೈಕಲ್ಯವನ್ನು ತಡೆಗಟ್ಟಬಹುದು” ಎಂದು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಪಿ ಸಿ ಕುಮಾರಸ್ವಾಮಿ ಸೇರಿದಂತೆ ಇತರರು ಇದ್ದರು.