ಮೈಸೂರು | ಮನರೇಗಾ ಯೋಜನೆಯಡಿ ಪ್ರಗತಿ ಸಾಧಿಸಿ : ಸಿಇಓ ಎಸ್. ಯುಕೇಶ್ ಕುಮಾರ್

Date:

Advertisements

ಮೈಸೂರು ಜಿಲ್ಲೆ, ತಿ. ನರಸೀಪುರ ತಾಲ್ಲೂಕು ಗರ್ಗೆಶ್ವರಿ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಎಸ್. ಯುಕೇಶ್ ಕುಮಾರ್ ರವರು ಪ್ರಗತಿ ಪರಿಶೀಲನೆ ಸಭೆ ನಡೆಸಿ ಮನರೇಗಾ ಯೋಜನೆಗಳಲ್ಲಿ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

” ಮನರೇಗಾ ಯೋಜನೆಯಡಿ ಅನುಷ್ಠಾನ ಇಲಾಖೆಗಳಿಗೆ ಹಾಗೂ ಗ್ರಾಮ ಪಂಚಾಯಿತಿಗಳಿಗೆ ನೀಡಿರುವ ಗುರಿಯನ್ನು ನಿಗಧಿತ ಸಮಯದೊಳಗೆ ಪೂರ್ಣಗೊಳಿಸಿ ಹೆಚ್ಚು ಪ್ರಗತಿಯನ್ನು ಸಾಧಿಸಬೇಕು. ಮಾನವ ದಿನಗಳನ್ನು ಸೃಜಿಸದೆ ಇರುವ ಗ್ರಾಮ ಪಂಚಾಯಿತಿಗಳು ಕಡ್ಡಾಯವಾಗಿ ಎನ್ಎಂಆರ್ ಗಳನ್ನು ತೆರೆದು ಶೀಘ್ರದಲ್ಲಿ ಮಾನವ ದಿನಗಳನ್ನು ಸೃಜಿಸಬೇಕು.
ಅಪೂರ್ಣಗೊಂಡಿರುವ ಜೆಜೆಎಂ ಯೋಜನೆಯ ಮೊದಲ ಹಂತದ ನಳ ಸಂಪರ್ಕಗಳ ಕಾಮಗಾರಿಗಳು, ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮೇಜರ್ ಟ್ಯಾಂಕ್ ಗಳನ್ನು ನಿರ್ಮಾಣ ಮಾಡುವ ಸಲುವಾಗಿ ಸರ್ಕಾರಿ ಸ್ಥಳವನ್ನು ಪಿಡಿಒಗಳು ಗುರುತಿಸಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ನೀಡಬೇಕು. ಮೇಜರ್ ಟ್ಯಾಂಕ್ ಗಳ ದುರಸ್ಥಿ ಕಾರ್ಯಗಳನ್ನು ಕಾಲಕಾಲಕ್ಕೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಗ್ರಾಮ ಪಂಚಾಯಿತಿಗೆ ಶೀಘ್ರವೇ ಹಸ್ತಾಂತರಿಸಬೇಕು ” ಎಂದರು.

” ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ಶೀಘ್ರದಲ್ಲೇ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು ಪಿಆರ್ಇಡಿ ಇಲಾಖೆಯ ಎಇಇ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ರವರಿಗೆ ಸೂಚನೆ ನೀಡಿದರು. ಗ್ರಾಮಗಳಲ್ಲಿನ ಕೆರೆಗಳಲ್ಲಿ ಮೀನು ಸಾಕಣೆ ಮಾಡುವ ಕುರಿತು ಹರಾಜು ಪ್ರಕ್ರಿಯೆಯನ್ನು ಜೂನ್ ತಿಂಗಳ ಒಳಗಾಗಿ ನಡೆಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು. ಕೂಸಿನ ಮನೆ, ಸ್ವಚ್ಛ ಭಾರತ್ ಮಿಷನ್ ಅಡಿಯ ಐ ಹೆಚ್ ಹೆಚ್ ಎಲ್, ಘನ ತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆ, ಕಸ ಸಂಗ್ರಹಣೆ, ಬೂದು ನೀರು ನಿರ್ವಹಣೆ ಕಾಮಗಾರಿಗಳು, ವಸತಿ ಯೋಜನೆಯಡಿಯ ಮನೆಗಳ ಪ್ರಗತಿ, ಕರ ವಸೂಲಾತಿ, ಸಕಾಲ, ಮಹಿಳಾ ಗ್ರಾಮ ಸಭೆ ಹಾಗೂ ಇತರೆ ಯೋಜನೆಗಳ ಪ್ರಗತಿಯನ್ನು ಸಾಧಿಸುವಂತೆ ” ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಕುಲ ಶಾಸ್ತ್ರೀಯ ಅಧ್ಯಯನ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವಂತೆ ಮನವಿ

ಸಭೆಯಲ್ಲಿ ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ಅನಂತರಾಜು. ಪಿ. ಎಸ್, ಸಹಾಯಕ ನಿರ್ದೇಶಕ, ತಾಲ್ಲೂಕು ಯೋಜನಾಧಿಕಾರಿ ಡಾ. ಕೆ. ರಂಗಸ್ವಾಮಿ, ಪಿಆರ್ಇಡಿ ಎಇಇ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ, ಆರ್ ಎಫ್ ಓ, ಸಿಡಿಪಿಓ, ಬಿಇಓ, ಅನುಷ್ಠಾನ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಪಿಡಿಒಗಳು, ತಾ.ಪಂ.ಯ ತಾಂತ್ರಿಕ ಸಿಬಂದಿಗಳು, ತಾಲ್ಲೂಕು ಐಇಸಿ ಸಂಯೋಜಕರು ಹಾಗೂ ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X