ಮೈಸೂರು | ತನ್ನ ಪ್ರೇಯಸಿಗೆ ಸಂದೇಶ ಕಳುಹಿಸಿದ ಕಾರಣಕ್ಕೆ ಗೆಳೆಯನಿಗೆ ಮಾರಕಾಸ್ತ್ರದಿಂದ ಇರಿತ

Date:

Advertisements

ತನ್ನ ಪ್ರಿಯತಮೆಗೆ ಸಂದೇಶ ಕಳುಹಿಸಿದನೆಂದು ಯುವಕನೊಬ್ಬ ತನ್ನ ರೂಮ್‌ಮೇಟ್‌ಗೆ ಮಾರಕಾಸ್ತ್ರದಿಂದ ಇರಿದಿರುವ ಘಟನೆ ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ.

ಆರೋಪಿ ಶ್ರೇಯಸ್ ಹಾಗೂ ಶಿವಕುಮಾರ್ ಇಬ್ಬರೂ ಸ್ನೇಹಿತರಾಗಿದ್ದು, ಜನತಾನಗರದಲ್ಲಿ ಒಂದೇ ರೂಮಿನಲ್ಲಿ ವಾಸವಾಗಿದ್ದರು. ಸ್ನೇಹಿತ ಹಾಗೂ ರೂಮ್‌ಮೇಟ್ ಆಗಿರುವ ಶಿವಕುಮಾರ್ ಶ್ರೇಯಸ್ ಪ್ರೀತಿಸುತ್ತಿದ್ದ ಯುವತಿಯನ್ನು ಕಾಂಟಾಕ್ಟ್ ಮಾಡಿದ್ದು, ಮೆಸೇಜ್ ಮಾಡುತ್ತಿದ್ದನು. ಅಲ್ಲದೇ ತನ್ನ ಸ್ನೇಹಿತನ ಪ್ರಿಯತಮೆ ಜತೆ ನಿರಂತರ ಸಂಪರ್ಕದಲ್ಲಿದ್ದನು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ

Advertisements

ವಿಚಾರ ಶ್ರೇಯಸ್‌ ಗಮನಕ್ಕೆ ಬಂದಿದ್ದು, ಇಬ್ಬರ ನಡುವೆ ವಾಗ್ವಾದಗಳು ನಡೆದಿವೆ. ಜತೆಗೆ ತನ್ನ ಪ್ರೇಯಸಿಗೆ ಮೆಸೇಜ್ ಮಾಡಬೇಡ ಎಂದು ಶ್ರೇಯಸ್ ಎಚ್ಚರಿಕೆ ನೀಡಿದ್ದನು. ಆದರೂ ಶಿವಕುಮಾರ್ ಆಗಾಗ ಯುವತಿಗೆ ಮೆಸೇಜ್ ಮಾಡುತ್ತಿದ್ದನು. ಈ ವಿಚಾರವಾಗಿ ನಂಜನಗೂಡು ರಿಂಗ್ ರಸ್ತೆ ಬಳಿ ಇಬ್ಬರ ನಡುವೆ ದೊಡ್ಡ ಗಲಾಟೆ ನಡೆದಿದ್ದು, ಜಗಳ ತಾರಕಕ್ಕೇರಿದ್ದು, ಶ್ರೇಯಸ್, ಶಿವಕುಮಾರ್‌ಗೆ ಮಾರಕಾಸ್ತ್ರದಿಂದ ಇರಿದಿದ್ದಾನೆ.

ಶಿವಕುಮಾರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಾಸಕರಿಂದ ಸೌಹಾರ್ದತೆಗೆ ದಕ್ಕೆ ತರುವ ಹೇಳಿಕೆ, ಕಾನೂನು ಕ್ರಮ ಕೈಗೊಳ್ಳಿ – ಎಸ್ ಡಿ ಪಿ ಐ

ಮೈಸೂರು ಸಂಸ್ಥಾನದ ಇತಿಹಾಸದ ಗಂಧಗಾಳಿ ತಿಳಿಯದ ಮತ್ತು ಸದಾ ಹಿಂದುತ್ವದ ಅಮಲಿನಲ್ಲಿರುವ...

ವಿಜಯಪುರ | ಸರ್ಕಾರ ದಲಿತರಿಗೆ ರಾಜಕೀಯದಲ್ಲೂ ಮೀಸಲಾತಿ ಕಲ್ಪಿಸಲಿ: ದಸಂಸ ಸಂಚಾಲಕ ಮಯೂರ

ಪರಿಶಿಷ್ಟ ಸಮುದಾಯಗಳಿಗೆ ಶೈಕ್ಷಣಿಕ, ಆರ್ಥಿಕ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ...

ಬಳ್ಳಾರಿ | ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕತೆಗೆ ಹಿನ್ನೆಡೆ: ಎಐಡಿಎಸ್ಒ ಆಕ್ರೋಶ

ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ...

ಬಳ್ಳಾರಿ | ಬಗ‌ರ್ ಹುಕುಂ ಸಾಗುವಳಿದಾರರಿಗೆ ವಸತಿ ಹಕ್ಕು ಮಾನ್ಯ ಮಾಡಲು ಆಗ್ರಹ

ಒನ್ ಟೈಮ್ ಸೆಟಲ್‌ಮೆಂಟ್ ಮೂಲಕ ಅರಣ್ಯ-ಬಗ‌ರ್ ಹುಕುಂ ಸಾಗುವಳಿದಾರರಿಗೆ ಭೂಮಿ-ವಸತಿ ಹಕ್ಕು...

Download Eedina App Android / iOS

X