ಮೈಸೂರು | ಜು.15ರಂದು ಬೃಹತ್‌ ಪ್ರತಿಭಟನೆ

Date:

ಮೂಲಸೌಕರ್ಯ ಕೋರಿ ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳುವುದಾಗಿ ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದಿಂದ ಪೂರ್ವಭಾವಿ ಸಭೆ ನಡೆಸಿದರು.

- Advertisement -

ದಶಕಗಳಿಂದ ಸಮಸ್ಯೆ ನಡುವೆ ಜೀವನ ಸಾಗಿಸುತ್ತಿರುವ ಖಾಸಗಿ ಬಡಾವಣೆ ನಿವಾಸಿಗಳ ಕೂಗಿಗೆ ಮೈಸೂರು ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ಸ್ಪಂದಿಸದಿರುವುದನ್ನು ಖಂಡಿಸಿ ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದ ಆಶ್ರಯದಲ್ಲಿ ಜುಲೈ 15ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಹಲವು ಬಡಾವಣೆಗಳ ಸಂಘಟನೆಗಳ ಪ್ರಮುಖರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಸಭೆಯ ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷ ಎ ಎಂ ಬಾಬು ಮಾತನಾಡಿ, “ಲೇಔಟ್ ಡೆವಲಪರ್‌ಗಳಿಂದ ಒಂದಷ್ಟು ಸಮಸ್ಯೆ ಸೃಷ್ಟಿಯಾದರೆ, ಅಧಿಕಾರಿಗಳಿಂದ ಒಂದಷ್ಟು ಸಮಸ್ಯೆ ಸೃಷ್ಟಿಯಾಗಿದೆ. ಇದರ ಕೆಟ್ಟ ಫಲ ಅನುಭವಿಸುತ್ತಿರುವವರು ಬಡಾವಣೆಯ ನಿವಾಸಿಗಳು. ಮುಂದಿನ ಮಕ್ಕಳಿಗೆ ನಾವು ಉತ್ತಮ ವಾತಾವರಣ ಬಿಟ್ಟುಕೊಡದಿದ್ದಲ್ಲಿ ಅವರು ನಮಗೆ ಶಾಪ ಹಾಕುತ್ತಾರೆ. ನಾವು ಮೌನವಾಗಿದ್ದಷ್ಟು ಸರ್ಕಾರಿ ವ್ಯವಸ್ಥೆ ನಮ್ಮ ಮೇಲೆ ಸವಾರಿ ಮಾಡುತ್ತದೆ. ನಾವು ಕೂಡಲೇ ಎಚ್ಚೆತ್ತುಕೊಳ್ಳಬೇಕು” ಎಂದು ಕರೆ ನೀಡಿದರು.

ನೀರಿನ ಮಲಿನತೆಯಿಂದ ಜನರ ಆರೋಗ್ಯ ಹಾಳಾಗುತ್ತಿದೆ. ಒಳಚರಂಡಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. 250 ಟಿಎಂಸಿ ನೀರು ಇದ್ದರೂ, ಕುಡಿಯುವ ನೀರಿಗಾಗಿ ಮೈಸೂರಿನ ಜನ ಪರದಾಡುವಂತಾಗಿದೆ. ವ್ಯವಸ್ಥಿತ ನೀರಿನ ಜಾಲ ಇಲ್ಲ. ಮೈಸೂರಿನ ಜನರ ನೀರಿನ‌ ದಾಹ ತಣಿಸಲು ಕೇವಲ ಎರಡು ಟಿಎಂಸಿ ನೀರು ಸಾಕು. ಆದರೆ, ರಿಂಗ್ ರಸ್ತೆ ಆಚೆಗೆ ನೀರಿಲ್ಲ. ನಮ್ಮ ನೀರನ್ನು ಬೆಂಗಳೂರಿನ ಜನ ಎಂಜಾಯ್ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ‌ ಅವರು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುವುದು ಅನಿವಾರ್ಯ” ಎಂದರು.

“ಮುಡಾದವರು ಒಳಚರಂಡಿ ವ್ಯವಸ್ಥೆಯನ್ನು ಒಂದಕ್ಕೊಂದು ಲಿಂಕ್ ಮಾಡಿ, ಅದನ್ನು ಶುದ್ದೀಕರಣ ಮಾಡಿ ಮರುಬಳಕೆ ಮಾಡುವ ಯೋಜನೆ ಮಾಡಿದಲ್ಲಿ ಸಮಸ್ಯೆ ಭಾಗಶಃ ನಿವಾರಣೆ ಆಗಲಿದೆ. ಈ ಮೂಲಕ ಮಲಿನಗೊಂಡಿರುವ ಕೆರೆ ಕಟ್ಟೆಗಳನ್ನು ಶುಚಿಯಾಗಿ ಇಟ್ಟುಕೊಳ್ಳಬಹುದು‌” ಎಂದು ಹೇಳಿದರು.

“ಎಲ್ಲರಿಗೂ ಸಾಮಾಜಿಕ ಜವಾಬ್ದಾರಿ ಬೇಕು. ಮುಂದಿನ ಪೀಳಿಗೆಗಾಗಿ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು. ಕುಡಿಯುವ ನೀರು ಹಾಗೂ ಒಳಚರಂಡಿ ಸಮಸ್ಯೆ ನಿವಾರಣೆ ತಕ್ಷಣದ ಆದ್ಯತೆ ಆಗಬೇಕು. ಮಗು ಅಳದಿದ್ದರೆ ತಾಯಿ ಹಾಲು ಕುಡಿಸುವುದಿಲ್ಲ. ಇದನ್ನು ಅರಿತು ನಾವು ಎಚ್ಚರಿಕೆಯಿಂದ ಹೆಜ್ಜೆ ಇಡದಿದ್ದರೆ ಅಧಿಕಾರಿಗಳು ಕೆಲಸ ಮಾಡುವುದಿಲ್ಲ” ಎಂದು ತಿಳಿಸಿದರು.

“ಒಕ್ಕೂಟದ ಅಡಿಯಲ್ಲಿನ 27 ಬಡಾವಣೆಗಳಲ್ಲಿ ವಿದ್ಯುತ್ ಸಮಸ್ಯೆಯೂ ಮಿತಿಮೀರಿದೆ. ಸಾರಿಗೆ ಬಸ್ ವ್ಯವಸ್ಥೆ ಅದ್ವಾನ ಹೇಳತೀರದಾಗಿದೆ. ನೀರಿನ ಗಡಸುತನ ಮೇರೆ ಮೀರಿದ್ದು, ಕೆಲವೇ ದಿನಗಳ ಅಂತರದಲ್ಲಿ ಇಡೀ ಜನತೆ ಎಲ್ಲ ಖಾಯಿಲೆಗಳಿಂದ ಬಳಲುವುದು ನಿಚ್ಚಳವಾಗಿದೆ. ಬಡಾವಣೆಯಲ್ಲಿರುವ ಅವೈಜ್ಞಾನಿಕ ರಸ್ತೆಯಿಂದಾಗಿ ಅಪಘಾತಗಳು ಹೆಚ್ಚಾಗಿವೆ. ಈ ಬಗ್ಗೆ ಪೊಲೀಸ್ ಇಲಾಖೆಯ ಗಮನ ಸೆಳೆಯಬೇಕು” ಎಂದರು.

“ಡಿಸಿ, ನೀರಾವರಿ, ಮುಡಾ, ಜಿಲ್ಲಾ ಪಂಚಾಯತ್, ಪಟ್ಟಣ ಪಂಚಾಯತ್, ಸಣ್ಣ ನೀರಾವರಿ, ಚೆಸ್ಕಾಂ, ವಿದ್ಯುತ್, ರಸ್ತೆ ಸಾರಿಗೆ ಸೇರಿದಂತೆ ಎಲ್ಲ ಇಲಾಖೆಗೂ ಪತ್ರ ಬರೆದು ಗಮನ ಸೆಳೆಯಲಾಗಿದೆ. ಅವರ ಮೇಲೆ ಮತ್ತಷ್ಟು ಒತ್ತಡ ಹೇರಬೇಕಾದ ಅನಿವಾರ್ಯತೆ ಇದೆ. ನಾವು ತೆರಿಗೆದಾರರು, ನಮ್ಮ ಮೂಲಸೌಕರ್ಯ ಕೇಳುವುದು ನಮ್ಮ ಹಕ್ಕು” ಎಂದು ಪ್ರತಿಪಾದಿಸಿದರು.

“ಈ ಹೋರಾಟ ಒಂದು ಐತಿಹಾಸಿಕ ಹೋರಾಟವಾಗಬೇಕು. ಪಾದಯಾತ್ರೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನ ಭಾಗವಹಿಸುವಂತೆ ಮಾಡಬೇಕು. ಬಡಾವಣೆಯಲ್ಲಿನ ಸಮಸ್ಯೆಗಳ ಬಗ್ಗೆ ಅವರಿಗೆ ಅರಿವಿದ್ದರೂ, ಮತ್ತೊಮ್ಮೆ ಮಗದೊಮ್ಮೆ ಎಲ್ಲರಿಗೂ ಅರಿವು ಮೂಡಿಸುವ ಮೂಲಕ ಹೋರಾಟದಲ್ಲಿ ಭಾಗಿಯಾಗುವಂತೆ ಪ್ರೇರೇಪಿಸಬೇಕು‌” ಎಂದು ಸಲಹೆ ನೀಡಿದರು.

ನಗರ ಹೊರವರ್ತುಲ ರಸ್ತೆಯಿಂದ ಪೂರ್ವಭಾಗದಲ್ಲಿರುವ 27 ಖಾಸಗಿ ಬಡಾವಣೆಗಳ ಸಂಘಟನೆಗಳು ಒಟ್ಟಾಗಿ ಸೇರಿ ರಚಿಸಲಾಗಿರುವ ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದ ಆಶ್ರಯದಲ್ಲಿ ಶನಿವಾರ ಮಾನಸಿನಗರ ಬಡಾವಣೆಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಎಲ್ಲ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುವ ನಿರ್ಧಾರಕ್ಕೆ ಸಹಮತ ಸೂಚಿಸಿದವು. ಸಭೆಯ ಆರಂಭದಲ್ಲಿ ಪ್ರತಿ ಬಡಾವಣೆಯಿಂದ ಸಲಹೆ ಸ್ವೀಕರಿಸಿದರು.

ಪ್ರತಿ ಮನೆಗೆ ಒಬ್ಬರಂತೆ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ಮಹಿಳೆಯರಿಂದ ಖಾಲಿ ಕೊಡಗಳ ಪ್ರದರ್ಶನ ಆಗಬೇಕು. ಆಯಾ ಬಡಾವಣೆಗಳ ಸಮೀಪವೇ ಪ್ರಮುಖ ರಸ್ತೆಯಲ್ಲಿ ಅಲ್ಲಲ್ಲಿ ರಸ್ತೆ ತಡೆ ಮಾಡುವುದು. ಪ್ರತಿಯೊಬ್ಬರೂ ತಮ್ಮೊಂದಿಗೆ ಕನಿಷ್ಟ ಇಬ್ಬರನ್ನು ಕರೆತರಬೇಕು. ಪ್ರತಿಭಟನೆ ವೇಳೆ ಭಿತ್ತಿಪತ್ರದ ಪ್ರದರ್ಶನ ಆಗಬೇಕು. ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು. ಸಮಸ್ಯೆ ಕುರಿತು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಬಡಾವಣೆಗಳಿಗೆ ಅಧಿಕಾರಿಗಳನ್ನು ಕರೆಸುವ ಕೆಲಸ ಆಗಬೇಕು” ಎಂಬುದು ಸೇರಿದಂತೆ ಹಲವಾರು ಅಭಿಪ್ರಾಯ ಹಾಗೂ ಸಲಹೆಗಳು ಕೇಳಿಬಂದವು.

ಒಕ್ಕೂಟದ ಅಡಿಯಲ್ಲಿರುವ ಪೂರ್ವ ವಲಯದ 27 ಬಡಾವಣೆಗಳಲ್ಲಿ, ರಸ್ತೆ, ಕುಡಿಯಲು ಕಾವೇರಿ ನೀರು, ಒಳಚರಂಡಿ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಕ್ಕಾಗಿ ಪ್ರಬಲವಾಗಿ ಒತ್ತಡ ಹೇರಬೇಕು ಎಂಬ ಸೂಚನೆ ಒಕ್ಕೂಟದ ಎಲ್ಲ ಸದಸ್ಯರಿಂದ ವ್ಯಕ್ತವಾಯಿತು. ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದ ಬಳಿಕ ಅಂತಿಮವಾಗಿ ಜುಲೈ 15ರಂದು ಬೆಳಿಗ್ಗೆ 9.30ಕ್ಕೆ ದೇವೇಗೌಡ ವೃತ್ತದ ಸಮೀಪವಿರುವ ಕೆಎಂಎಫ್ ಬಡಾವಣೆಯ ಉದ್ಯಾನವನದಲ್ಲಿ ಜಮಾಯಿಸಿ ನಂತರ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಮೂಲಕ ಜಾಥಾದಲ್ಲಿ ತೆರಳಲು ನಿರ್ಧರಿಸಿದರು.

ಪ್ರತಿಭಟನೆಯಲ್ಲಿ 27 ಬಡಾವಣೆಗಳ ಸಂಘಟನೆಗಳ ನೇತೃತ್ವದಲ್ಲಿ ಐದು ಸಾವಿರಕ್ಕೂ ಅಧಿಕ ಮಂದಿ ಸೇರಿಸಲು ನಿರ್ಧಾರ ಕೈಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮೊರಾರ್ಜಿ ಶಾಲೆಯಲ್ಲಿ ಉಪಹಾರ ಸೇವಿಸಿ 17 ವಿದ್ಯಾರ್ಥಿಗಳು ಅಸ್ವಸ್ಥ

ಸಭೆಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಉಪಾಧ್ಯಕ್ಷ ಎಂ ಎಚ್ ಚೆಲುವೇಗೌಡ, ಕಾರ್ಯದರ್ಶಿ ಎಲ್ ಪ್ರಕಾಶ್, ಸಹಕಾರ್ಯದರ್ಶಿ ಎಂ ಎಲ್ ಅರುಣ್, ಸಂಘಟನಾ ಕಾರ್ಯದರ್ಶಿ ಬೊಮ್ಮೇಗೌಡ, ಸಹ ಸಂಘಟನಾ ಕಾರ್ಯದರ್ಶಿ ಡಿ ಕೃಷ್ಣೇಗೌಡ, ಖಜಾಂಚಿ ನರಸಿಂಹೇಗೌಡ, ಮಾಧ್ಯಮ‌ ಕಾರ್ಯದರ್ಶಿ ಎಚ್ ಎಸ್ ರಾಘವೇಂದ್ರ ಭಟ್ ಸೇರಿದಂತೆ ಒಕ್ಕೂಟದ ನಿರ್ದೇಶಕರು, 27 ಖಾಸಗಿ ಬಡಾವಣೆಗಳ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...