ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪನವರು ಮಾವುತರು ಹಾಗೂ ಕಾವಾಡಿಗರ ಕುಟುಂಬದವರಿಗೆ ಉಪಾಹಾರ ಬಡಿಸಿ, ತಾವೂ ಕೂಡಾ ಅವರೊಟ್ಟಿಗೆ ಉಪಹಾರ ಸೇವಿಸಿದರು.
ಮೈಸೂರು ದಸರಾ ಅಂಗವಾಗಿ ಅರಮನೆ ಆವರಣದಲ್ಲಿ ನೆಲೆಸಿರುವ ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಟೆಂಟ್ ಶಾಲೆಗೆ ಚಾಲನೆ ನೀಡಿ, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ, ಅವರೊಂದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.
ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿ ಗಜಪಡೆಯ ಪಾಲನೆ, ಪೋಷಣೆ ಕುರಿತು ವಿಚಾರಿಸಿದ ಸಚಿವರು, ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿಸಿ ಅವರ ಯೋಗಕ್ಷೇಮ ವಿಚಾರಿಸಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಕೋ-ಆಪರೇಟೀವ್ ಕ್ರೆಡಿಟ್ ಬ್ಯಾಂಕ್ ವಂಚನೆ ಪ್ರಕರಣ; ʼಹಣ ಮರಳಿ ಕೊಡಿಸುವೆʼ ಎಂದ ರಮೇಶ್ ಜಾರಕಿಹೊಳಿ
ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ವೀಕ್ಷಿಸಿ, ಮಾವುತರು ಹಾಗೂ ಕಾವಾಡಿಗರನ್ನು ಕಾಲಕಾಲಕ್ಕೆ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಚಿವರೊಟ್ಟಿಗೆ ಶಾಸಕ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯತ್ರಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಶೀಲಾ ಸೇರಿದಂತೆ ಇತರರು ಇದ್ದರು.