ಮೈಸೂರು | ಮಕ್ಕಳ ದಸರಾ ಕಲಾಥಾನ್‌ಗೆ ಸಚಿವ ಹೆಚ್ ಸಿ ಮಹದೇವಪ್ಪ ಚಾಲನೆ

Date:

ಮೈಸೂರು ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಶಾಲೆಗಳಿಂದ ಸಾವಿರಕ್ಕಿಂತ ಹೆಚ್ಚು ಮಕ್ಕಳು ಸೇರಿ ಇದೇ ಮೊದಲ ಬಾರಿಗೆ ಮಕ್ಕಳ ದಸರಾ ಕಲಾಥಾನ್ ನಡೆಸಲಾಗುತ್ತಿದೆ. ಮಕ್ಕಳ ಸಾಂಸ್ಕೃತಿಕ ಅಭಿರುಚಿಯನ್ನು ಅಭಿವ್ಯಕ್ತ ಮಾಡಲಾಗುತ್ತಿದೆ. ಇದರಿಂದ ಮಕ್ಕಳು ಸಾಂಸ್ಕೃತಿಕ ನಾಯಕತ್ವ ಹಾಗೂ ಬಹುತ್ವವನ್ನು ಅರ್ಥಮಾಡಿಕೊಳ್ಳಲು ಈ ಕಾರ್ಯಕ್ರಮ ನೆರವಾಗಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿದರು.

- Advertisement -
ಮಕ್ಕಳ ದಸರಾ ಕಲಾಥಾನ್‌ 3

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ, ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯಿಂದ ಇಂದು ಆಯೋಜಿಸಿದ್ದ ಮಕ್ಕಳ ದಸರಾ ಕಲಾಥಾನ್‌ಗೆ ಚಾಲನೆ ನೀಡಿ ಸುದ್ದಿಗಾರರೊಡನೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
ಮಕ್ಕಳ ದಸರಾ ಕಲಾಥಾನ್‌ 5

“ದಸರಾ ಮಹೋತ್ಸವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ಮೈಸೂರಿಗೆ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ. ಅದಕ್ಕೆ ತಕ್ಕಂತೆ ನಗರಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೂ ಕೂಡ ಅಚ್ಚುಕಟ್ಟಾಗಿ ಜರುಗುತ್ತಿವೆ. ವಸ್ತು ಪ್ರದರ್ಶನದಲ್ಲಿ ಬಹುತೇಕ ಮಳಿಗೆಗಳು ಪೂರ್ಣಗೊಂಡಿದ್ದು, ಜಿಲ್ಲಾಡಳಿವು ವ್ಯವಸ್ಥಿತವಾಗಿ ಕ್ರಮ ಕೈಗೊಂಡಿದೆ” ಎಂದರು.

ಮಕ್ಕಳ ದಸರಾ ಕಲಾಥಾನ್‌‌ 1

“ದಸರಾ ಆಚರಣೆಗೆ ಜನಪ್ರತಿನಿಧಿಗಳು ಒಟ್ಟಾಗಿ ಕೈಜೋಡಿಸಿ ಅಗತ್ಯ ಸಹಕಾರ ನೀಡಿದ್ದಾರೆ. ಈ ದಸರಾ ಆಚರಣೆಯ ಸಂದೇಶವನ್ನು ರಾಷ್ಟ್ರವ್ಯಾಪಿ ಪಸರಿಸಲಿದ್ದೇವೆ. ನಮ್ಮ ಸಂಸ್ಕೃತಿ, ಬಹುತ್ವ, ಆಚಾರ, ವಿಚಾರವನ್ನು ಈ ಮೂಲಕ ಸಾರಲಿದ್ದೇವೆ” ಎಂದು ಹೇಳಿದರು.

ಮಕ್ಕಳ ದಸರಾ ಕಲಾಥಾನ್‌ 2

ಬಸವಣ್ಣ, ರಾಣಿ ಚೆನ್ನಮ್ಮ, ಒನಕೆ ಓಬವ್ವ, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂದೀಜಿ, ಡಾ ಬಿ ಆರ್ ಅಂಬೇಡ್ಕರ್ ಸೇರಿದಂತೆ ಕರ್ನಾಟಕದ ಐತಿಹಾಸಿಕ ವ್ಯಕ್ತಿಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷ ಧರಿಸಿದ್ದ ಮಕ್ಕಳು ಕಾರ್ಯಕ್ರಮಕ್ಕೆ ಮೆರಗು ನೀಡಿದರು.

ಮಕ್ಕಳ ದಸರಾ ಕಲಾಥಾನ್‌ 4

ಪೂಜಾ ಕುಣಿತ, ಡೊಳ್ಳು ಕುಣಿತ, ಜಾನಪದ ನೃತ್ಯ, ಕಂಸಾಳೆ ನೃತ್ಯ, ಗಾರುಡಿ ಗೊಂಬೆ, ಹುಲಿವೇಷ, ವೀರಗಾಸೆ, ಬ್ಯಾಂಡ್‌ಸೆಟ್, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ, ಪರಿಸರ ಸಂರಕ್ಷಣೆ ವಿಷಯಗಳನ್ನೊಳಗೊಂಡ ವೈವಿಧ್ಯಮಯ ವೇಷಭೂಷಣದಲ್ಲಿ ಹಾಡುತ್ತ, ಕುಣಿಯುತ್ತ ಸಂಭ್ರಮಿಸುವ ಮೂಲಕ ಮೆರವಣಿಗೆಯಲ್ಲಿ ಸಾಗಿದರು. ಸಚಿವರೂ ಕೂಡ ಮಕ್ಕಳೊಂದಿಗೆ ಹೆಜ್ಜೆ ಹಾಕಿದರು. ಈ ವೇಳೆ ಶಾಸಕ ಶ್ರೀವತ್ಸ ಸೇರಿದಂತೆ ಇತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...