ಮೈಸೂರು | ಬೈಕ್ ಓಡಿಸಿದ ಅಪ್ರಾಪ್ತ; 25 ವರ್ಷ ವಯಸ್ಸಿನವರೆಗೆ ಪರವಾನಗಿ ನೀಡದಂತೆ ನ್ಯಾಯಾಲಯ ಆದೇಶ

Date:

ಅಪ್ರಾಪ್ತನೊಬ್ಬ ಬೈಕ್‌ ಓಡಿಸಿದ ಹಿನ್ನೆಲೆಯಲ್ಲಿ ಆತನಿಗೆ 25 ವರ್ಷ ವಯಸ್ಸಿನವರೆಗೆ ಪರವಾನಗಿ ನೀಡದಂತೆ ಮೈಸೂರು ಜಿಲ್ಲೆಯ ಟಿ ನರಸೀಪುರ ಘನ ನ್ಯಾಯಾಲಯ ಆದೇಶ ನೀಡಿದೆ.

- Advertisement -

ಮೈಸೂರು ಜಿಲ್ಲೆಯ ಟಿ ನರಸೀಪುರದಲ್ಲಿ ಪೊಲೀಸರು ತಪಾಸಣೆ ನಡೆಸುವ ವೇಳೆ ಅಪ್ರಾಪ್ತನೊಬ್ಬ ಬೈಕ್ ಚಾಲನೆ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ. ಬಳಿಕ ಟಿ ನರಸೀಪುರ ಪೊಲೀಸರು ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವಾಹನ ಪರವಾನಗಿ ಇಲ್ಲದೆ, 18 ವರ್ಷ ತುಂಬದೆ ವಾಹನ ಚಾಲನೆ ಮಾಡುತ್ತಿರುವವರಿಗೆ ಟಿ ನರಸೀಪುರ ಘನ ನ್ಯಾಯಾಲಯ ಕಠಿಣ ತೀರ್ಪು ನೀಡುವುದರ ಮೂಲಕ ಬಿಸಿ ಮುಟ್ಟಿಸಿದೆ.

ಬಾಲಕನಿಗೆ ವಾಹನ ನೀಡಿದ ಟಿ ನರಸೀಪುರ ಟೌನ್ ತ್ರಿವೇಣಿ ನಗರದ ಮಹೇಶ್ ಎಂಬುವರಿಗೆ 27 ಸಾವಿರ ದಂಡ ವಿಧಿಸಿ, ಆರ್‌ಸಿ ಅಮಾನತು ಮಾಡಿದೆ. ಜತೆಗೆ ಬಾಲಕನಿಗೆ 25 ವರ್ಷ ತುಂಬುವವರೆಗೂ ಚಾಲನಾ ಪರವಾನಿಗೆ ನೀಡದಂತೆ ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

ಈ ವಿಶೇಷ ತೀರ್ಪಿನಿಂದಾಗಿ ಅಪ್ರಾಪ್ತರಿಗೆ ಬಿಸಿ ಮುಟ್ಟಿಸಿದ್ದು, ಪೋಷಕರು ಇನ್ಮುಂದೆ ಅಪ್ರಾಪ್ತರಿಗೆ ವಾಹನ ನೀಡದಂತೆ ಎಚ್ಚರಿಕೆಯ ಸಂದೇಶವಾಗಿದೆ.

ಅಪ್ರಾಪ್ತರು ಪರವಾನಗಿಯಿರದೆ ವೀಲಿಂಗ್ ಮಾಡುವುದು, ರಸ್ತೆ ನಿಯಮ ಪಾಲಿಸದೆ ಮನಬಂದಂತೆ ವಾಹನ ಚಾಲನೆ, ಹೆಲ್ಮೆಟ್ ಧರಿಸದೆ ಇರುವುದು ಕಂಡುಬರುತ್ತಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...