ಮೈಸೂರು | ಚರ್ಚೆಗೆ ಬಾರದೆ ತಲೆ ಮರೆಸಿಕೊಂಡಿರುವ ಸಂಸದ ಪ್ರತಾಪ್ ಸಿಂಹ: ಕಾಂಗ್ರೆಸ್ ಆರೋಪ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿರುವ ಅಭಿವೃದ್ಧಿ ಮತ್ತು ಸಾಧನೆಗಳ ಬಗ್ಗೆ ಚರ್ಚೆಗೆ ಬಾರದೆ ಸಂಸದ ಪ್ರತಾಪ್ ಸಿಂಹ ತಲೆ ಮರೆಸಿಕೊಂಡಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಸಾಧನೆಗಳ ಪಟ್ಟಿ ಕೊಡುತ್ತೇನೆ. ಅವರು ಚರ್ಚೆಗೆ ಬರಬೇಕು ಎಂದು ಕಾಂಗ್ರೆಸ್‌ ವಕ್ತಾರ ಎಂ ಲಕ್ಷ್ಮಣ್‌ ಹೇಳಿದ್ದಾರೆ.

- Advertisement -

ಇತ್ತೀಚೆಗೆ ಸಿದ್ದರಾಮಯ್ಯ ಅವರ ಕೊಡುಗೆಗಳ ಬಗ್ಗೆ ಪ್ರತಾಪ್‌ ಸಿಂಹ ಪ್ರಶ್ನೆ ಮಾಡಿದ್ದರು. ಅವರ ಪ್ರಶ್ನೆಗೆ ತಿರುಗೇಟು ನೀಡಿದ್ದ ಎಂ ಲಕ್ಷ್ಮಣ್, ‘ಸೆ.6ರಂದು ಪ್ರತಾಪ್‌ ಸಿಂಹ ಅವರ ಕಚೇರಿಯ ಎದುರೇ ದಾಖಲೆ ಬಿಡುಗಡೆ ಮಾಡುತ್ತೇವೆ’ ಎಂದು ಹೇಳಿದ್ದರು. ಅದರಂತೆ, ಇಂದು ಸಂಸದರ ಕಚೇರಿಗೆ ಲಕ್ಷ್ಮಣ್‌ ಮತ್ತು ಕಾಂಗ್ರೆಸ್‌ ಮುಖಂಡರು ದಾಖಲೆ ಸಮೇತ ತೆರಳಿದ್ದು, ಅವರನ್ನು ಪೊಲೀಸರು ಗೇಟ್‌ನಲ್ಲಿಯೇ ತಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕಾಂಗ್ರೆಸ್‌ ಮುಖಂಡರು ಕಚೇರಿ ಒಳ ಹೋಗಲು ಯತ್ನಿಸಿದರೂ, ಪೊಲೀಸರು ಅವರನ್ನು ಬಿಡಲಿಲ್ಲ. ಬಳಿಕ, ಗೇಟ್‌ನಲ್ಲಿ ಟೇಬಲ್‌ ಹಾಕಿ ಕುಳಿತ ಲಕ್ಷ್ಮಣ್‌, “ಕೇಂದ್ರದಲ್ಲಿ ಪ್ರತಾಪ್‌ ಸಿಂಹ ಅವರದ್ದೇ ಸರ್ಕಾರವಿದೆ. ರಾಜ್ಯದಲ್ಲಿಯೂ ಹಿಂದೆ ಅವರದ್ದೇ ಸರ್ಕಾರವಿತ್ತು. ಆದರೂ, ಮೈಸೂರಿಗೆ ಪ್ರತಾಪ್ ಸಿಂಹ ನಯಾಪೈಸೆ ಕೆಲಸ ಮಾಡಿಲ್ಲ. ರಿಂಗ್ ರೋಡ್ ಆಗಿದ್ದು ಎಡಿಬಿ ಸಾಲದಲ್ಲಿ. ಕಾರ್ಪೊರೇಟರ್ ಮಾಡಿದ್ದನ್ನು ನಾನು ಮಾಡಿದ್ದೇನೆ ಅಂತ ಪ್ರತಾಪ್‌ ಸಿಂಹ ಹೇಳಿಕೊಳ್ಳುತ್ತಾರೆ. ಮೈಸೂರಿಗೆ ಸಂಸದರಾಗಿ ಪ್ರತಾಪ್ ಸಿಂಹ ಏನು ಕೊಟ್ಟಿದ್ದಾರೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಂಸದರ ಕಚೇರಿಗೆ ದಾಖಲೆಗಳನ್ನು ಕೊಟ್ಟಿದ್ದೇವೆ. ಚರ್ಚೆಗೆ ಸಂಸದ ಪ್ರತಾಪ್‌ ಸಿಂಹ ನಿಗದಿಪಡಿಸುವ ಜಾಗಕ್ಕೆ ತೆರಳಲು ನಾವು ಸಿದ್ದರಿದ್ದೇವೆ. ಸಂಸದರ ಜಾಗ ನಿಗದಿ ಮಾಡಿ, ಚರ್ಚೆಗೆ ಬರಲಿ” ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ ಬಿ ಜೆ ವಿಜಯ್ ಕುಮಾರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...