ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

Date:

Advertisements

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಈ ಬಾರಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದರು.

ದಸರಾ ಅಕ್ಟೋಬರ್​ 15 ರ ಬೆಳಗ್ಗೆ 10.15 ರಿಂದ 10.30ಕ್ಕೆ ಸಲ್ಲುವ ಮುಹೂರ್ತದಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ.

Advertisements

ಮೈಸೂರಿನ 119 ವೃತ್ತಗಳಲ್ಲಿ ಅಂದರೆ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ ಆರ್ ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ ಮಾಡಲಾಗುತ್ತೆ. ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಈ ವೇಳೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ. ಮಹದೇವಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X