ಮೈಸೂರು | ರಾಷ್ಟ್ರೀಯ ಮಾನವ ಕಳ್ಳಸಾಗಣೆ ಜಾಗೃತಿ ಜಾಥಾ

Date:

Advertisements

ಮಾನವ ಕಳ್ಳಸಾಗಣೆಯು ಬಹುದೊಡ್ಡ ಸಾಮಾಜಿಕ ಪಿಡುಗಾಗಿದ್ದು, ಮಕ್ಕಳು, ಮಹಿಳೆಯರು ಮತ್ತು ಅಪ್ರಾಪ್ತ ಹೆಣ್ಣುಮಕ್ಕಳು ಸೇರಿದಂತೆ ಶಿಕ್ಷಣದ ಕೊರತೆ, ಆರ್ಥಿಕವಾಗಿ ದುರ್ಬಲರಾಗಿರುವವರು ಸುಲಭವಾಗಿ ಮಾನವ ಕಳ್ಳಸಾಗಣೆಕೆಯ ಕೂಪಕ್ಕೆ ಬಲಿಯಾಗುತ್ತಿದ್ದಾರೆ. ಅಂಥವರ ರಕ್ಷಣೆಗಾಗಿ ಮತ್ತು ಸಮಾಜದಲ್ಲಿ ಮಾನವ ಕಳ್ಳಸಾಗಣಿಕೆಯನ್ನು ತಡೆಗಟ್ಟುವ ಸಲುವಾಗಿ ಜಾಗೃತಿ ಜಾಥಾ ಹಮ್ಮಿಕೊಂಡಿರುವುದು ಬಹಳ ಅರ್ಥಗರ್ಭಿತವಾಗಿದೆ ಎಂದು ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಜಿಲ್ಲಾ ಅಧ್ಯಕ್ಷೆ ಆಶಾಲತಾ ಪುಟ್ಟೇಗೌಡ ತಿಳಿಸಿದರು.

ಮೈಸೂರು ನಗರದ ಕಡಕೋಳದಲ್ಲಿರುವ ಶೇಷಾದ್ರಿಪುರಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎನ್ಎಸ್ಎಸ್ ಘಟಕ ಹಾಗೂ
ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ, ರೋಟರಿ ಶ್ರೀರಂಗಪಟ್ಟಣ, ಆಚೀವರ್ಸ್ ಅಕಾಡೆಮಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮಾನವ ಕಳ್ಳಸಾಗಣೆ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎನ್ಎಸ್ಎಸ್ ಅಧಿಕಾರಿ ಡಾ. ರಾಘವೇಂದ್ರ ಮಾತನಾಡಿ, “ಮಾನವ ಕಳ್ಳಸಾಗಾಣಿಕೆಯು ಆಧುನಿಕ ಯುಗದಲ್ಲಿನ ಗುಲಾಮಗಿರಿಯ ಒಂದು ರೂಪವಾಗಿದ್ದು, ಪ್ರತಿ ವರ್ಷ ಪ್ರಪಂಚದಲ್ಲಿನ ಲಕ್ಷಾಂತರ ಅಮಾಯಕ ಜನರು ಈ ಮಾನವ ಕಳ್ಳಸಾಗಾಣಿಕೆಯ ಕೂಪಕ್ಕೆ ಬಲಿಯಾಗಿತ್ತಿದ್ದಾರೆ ಮತ್ತು ಗುಲಾಮಗಿರಿಯ ಸರಪಳಿಯಲ್ಲಿ ಬಂಧಿಯಾಗುತ್ತಿದ್ದಾರೆ” ಎಂದು ಹೇಳಿದರು.

Advertisements

“ಗುಲಾಮಗಿರಿಯಿಂದ ಜಗತ್ತನ್ನು ಮುಕ್ತಗೊಳಿಸಲು ಮಾನವ ಕಳ್ಳಸಾಗಾಣಿಕೆ ವಿರುದ್ಧದ ಜಾಗೃತಿ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವಿಶೇಷ ದಿನವು ಕಳ್ಳಸಾಗಾಣಿಕೆ ನಡೆಯದಂತೆ ರಾಷ್ಟ್ರಗಳ ಭದ್ರತಾ ಕ್ರಮಗಳನ್ನು ಹೆಚ್ಚಿಸುವಲ್ಲಿ ಮತ್ತು ಮಾನವ ಕಳ್ಳಸಾಗಾಣಿಕೆಯನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ ಈ ವಿಶೇಷ ದಿನದಂದು ಮಾನವ ಕಳ್ಳಸಾಗಾಣಿಕೆಯ ವಿರುದ್ಧ ಜಾಗೃತಿ ಜಾಥಾವನ್ನು ಹಮ್ಮಿಕೊಂಡಿದ್ದೇವೆ. ಈ ಜಾಥಕೆ ಮಂಡ್ಯ ಪೊಲೀಸ್ ಕಾಲೋನಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಸಾಥ್ ನೀಡಿದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ತಲಾ ಇಬ್ಬರು ಡಿವೈಎಸ್‌ಪಿ, ಪೊಲೀಸ್ ಇನ್‌ಸ್ಪೆಕ್ಟರ್‌ ವರ್ಗಾವಣೆ; ಒಬ್ಬರಿಗೆ ಪಿಐ ಬಡ್ತಿ

ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಜಿಲ್ಲಾ ಅಧ್ಯಕ್ಷೆ ಆಶಾಲತಾ ಪುಟ್ಟೇಗೌಡ, ರಾಜ್ಯಾಧ್ಯಕ್ಷ ವಿಜಯ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸರಸ್ವತಿ, ಎನ್‌ಎಸ್‌ಎಸ್ ಅಧಿಕಾರಿ ಡಾ.ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸಿ ಹಸಿರು ನಿಶಾನೆ ತೋರಿಸುವ ಮುಖಾಂತರ ಈ ಜಾಥಾಕ್ಕೆ ಚಾಲನೆ ನೀಡಿದರು.‌

ಇದೇ ಸಂದರ್ಭದಲ್ಲಿ ಮಂಡ್ಯ ಪೊಲೀಸ್ ಕಾಲೋನಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಡಾ. ಶಬಾನಾ ಕೆ, ರೋಟರಿಯ ನಿರ್ದೇಶಕರಾದ ನಾಗೇಂದ್ರ, ಗಾಯಿತ್ರಿ, ಅಚೀವರ್ಸ್ ಅಕಾಡೆಮಿಯ ನಿರ್ದೇಶಕ ಗುರುಪ್ರಸಾದ್ ದೇವರಾಜ್, ಮಧುರ, ಶಿಕ್ಷಕರು, ಪೊಲೀಸ್ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಾದ ಮುರುಳಿ, ದುಷ್ಯಂತ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X