ಮೈಸೂರು | ಪತ್ರಿಕಾ ವಿತರಕರ ವೃತ್ತಿ ಶ್ರೇಷ್ಠವಾದದ್ದು : ಜಿ ಲಕ್ಷ್ಮಿಕಾಂತ್ ರೆಡ್ಡಿ

Date:

ಮೈಸೂರು ನಗರದ ದೇವರಾಜ ಮಾರುಕಟ್ಟೆ ಮುಂಭಾಗದಲ್ಲಿರುವ ಚಿಕ್ಕ ಗಡಿಯಾರದ ಬಳಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ‘ವಿಶ್ವ ಪತ್ರಿಕಾ ವಿತರಕರ ದಿನಾಚರಣೆ‘ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿಯವರು ‘ಪತ್ರಿಕಾ ವಿತರಕರ ವೃತ್ತಿ ಶ್ರೇಷ್ಠವಾದದ್ದು’ ಎಂದರು.

- Advertisement -

“ಪ್ರತಿನಿತ್ಯ ಮುಂಜಾನೆ ಪತ್ರಿಕಾ ವಿತರಣೆ ಮಾಡುವ ಮೂಲಕ ಶ್ರೇಷ್ಠ ಕಾಯಕ ಮಾಡುತ್ತಿದ್ದಾರೆ. ಕೆಲವರಿಗೆ ನಿತ್ಯದ ದಿನಚರಿ ಆರಂಭವಾಗುವುದೇ ಪತ್ರಿಕೆಗಳನ್ನು ಓದುವುದರ ಮುಖಾಂತರ. ಹಾಗಾಗಿ, ಮುಂಜಾನೆ ತಪ್ಪದೆ ಓದುಗರಿಗೆ ಪತ್ರಿಕೆ ವಿತರಿಸುವುದು ಶ್ಲಾಘನೀಯ ಕಾರ್ಯ. ತಮ್ಮೆಲ್ಲರಿಗೂ ವಿಶ್ವ ಪತ್ರಿಕಾ ವಿತರಕರ ದಿನದ ಶುಭಾಷಯಗಳು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಮಾತನಾಡಿ, ‘ಈ ದಿನಮಾನದಲ್ಲಿ ಸಾಮಾಜಿಕ‌ ಜಾಲತಾಣಗಳು ಎಷ್ಟೇ ಪ್ರಬಲವಾಗಿದ್ದರೂ, ಇಂದಿಗೂ ಸಹ ಪತ್ರಿಕೆಗಳು ಮಹತ್ವ ಉಳಿಸಿಕೊಂಡಿವೆ. ಮುದ್ರಣ ಮಾಧ್ಯಮದ ನಂಬಿಕೆ ಮತ್ತು ವಿಶ್ವಾಸಾರ್ಹತೆ ಉಳಿಸಿಕೊಂಡಿರುವುದೇ ಇದಕ್ಕೆ ಕಾರಣ’ ಎಂದು ಹೇಳಿದರು.

ನಗರಪಾಲಿಕೆ ಆಯುಕ್ತರಾದ ಶೇಖ್ ತನ್ವೀರ್ ಆಸಿಫ್ ಮಾತನಾಡಿ, “ಮುಂಜಾನೆ ಪಕ್ಷಿಗಳ ಕಲರವದಷ್ಟೇ ವೇಗವಾಗಿ ಪತ್ರಿಕಾ ವಿತರಕರು ತಮ್ಮ ವಿತರಣಾ ಕಾರ್ಯವನ್ನು ಪೂರ್ಣಗೊಳಿಸಿ ಸಮಾಜಕ್ಕ ವಿಶಿಷ್ಠ ಸೇವೆ ಸಲ್ಲಿಸುತ್ತಿದ್ದಾರೆ. ದೇಶದ ರಾಷ್ಟ್ರಪತಿಯಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರು ಸಹ ಚಿಕ್ಕಂದಿನಲ್ಲಿ ಪತ್ರಿಕೆಗಳನ್ನು ಮನೆ ಮನೆಗೆ ವಿತರಣೆ ಮಾಡುತ್ತಾ ದೇಶದ ಅತ್ಯುನ್ನತ ಸ್ಥಾನಕ್ಕೇರಿದರು. ಹಾಗಾಗಿ, ಪತ್ರಿಕಾ ವಿತರಕರ ಸೇವೆ ಅನನ್ಯವಾದದ್ದು” ಎಂದು ಹೇಳಿದರು.

ಜಿಲ್ಲಾ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಎಸ್. ಟಿ. ರವಿಕುಮಾರ್ ಮಾತನಾಡಿ, ‘ಪತ್ರಿಕಾ ವಿತರಕರು ಇತ್ತೀಚೆಗಷ್ಟೆ ನಗರದಲ್ಲಿ ರಾಜ್ಯಮಟ್ಟದ ಸಮ್ಮೇಳನ ನಡೆಸಿ ತಮ್ಮ ದು:ಖ ದುಮ್ಮಾನವನ್ನು ಸರ್ಕಾರದೆದುರು ತೆರೆದಿಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಸರಕಾರ ಈಡೇರಿಸುವ ಭರವಸೆ ಇದೆ’ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ತೆಂಗು ಬೆಳೆ ಮೌಲ್ಯವರ್ಧನೆಗೆ ತಜ್ಞರ ಚಿಂತನೆಗಳನ್ನು ಅಳವಡಿಸಿಕೊಳ್ಳಿ : ಶಿಲ್ಪಾ ನಾಗ್

ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಣ ಜೆ. ಎಸ್. ಹೋಮದೇವ, ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾರಾಯಣ ವಿ. ಹೆಗಡೆ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ, ಕೆಯುಡಬ್ಲುಜೆ ರಾಜ್ಯ ಸಮಿತಿ ಸದಸ್ಯ ಬಿ. ರಾಘವೇಂದ್ರ, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಎಂ. ನಾಗರಾಜು, ಪ್ರಧಾನ ಕಾರ್ಯದರ್ಶಿ ಸಿ. ಶಿವಣ್ಣ, ಸಹ ಕಾರ್ಯದರ್ಶಿ ಎಸ್. ಚಿನ್ನರಾಜು, ಖಜಾಂಚಿ ಸಿ. ಡಿ. ಹರೀಶ್, ಸಂಘಟನಾ ಕಾರ್ಯದರ್ಶಿ ಆರ್. ಶಿವಕುಮಾರ್, ಕಾರ್ಯದರ್ಶಿ ಶ್ರೀಕಾಂತ್, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿತರಕ ಜವರಪ್ಪ, ನಿರ್ದೇಶಕರಾದ ಪಿ.ಕೆ. ಸತೀಶ್ ಬಾಬು, ಎ. ಆರ್. ಪ್ರಭಾಕರ್ ರಾವ್, ಡಿ. ಹೇಮಂತ್ ಕುಮಾರ್, ಎಂ. ಶಿವಲಿಂಗ, ಎನ್. ನಂಜುಂಡಯ್ಯ ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...