ಮೈಸೂರು | ಆರೋಗ್ಯ ಅಭಿಯಾನ ವಿಶೇಷ ಗ್ರಾಮ ಸಭೆಗೆ ಯಾರಿಗೂ ಆಹ್ವಾನವಿಲ್ಲ; ಪಂಚಾಯಿತಿ ಸದಸ್ಯರದ್ದೇ ದರ್ಬಾರ್

Date:

ಆರೋಗ್ಯ ಅಭಿಯಾನ ವಿಶೇಷ ಗ್ರಾಮ ಸಭೆಗೆ ಯಾರಿಗೂ ಆಹ್ವಾನ ನೀಡದೆ ಕೆಲವೇ ಕೆಲವು ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ನಡೆಸುತ್ತಿರುವ ಸಭಾ ನಡಾವಳಿಗೆ ಜನ ಸಂಗ್ರಾಮ್ ಪರಿಷತ್ ರಾಜ್ಯಾಧ್ಯಕ್ಷ ನಗರ್ಲೆ ವಿಜಯ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

- Advertisement -

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮದ ಡಾ ಬಿ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗ್ರಾಮ ಆರೋಗ್ಯ ಅಭಿಯಾನ ವಿಶೇಷ ಸಭೆ ಕುರಿತು ಆಕ್ಷೇಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಸಭೆಗೆ ಗ್ರಾಮ ಪಂಚಾಯಿತಿ ನಿಯಮದಂತೆ ಹಾಗೂ ಸಾರ್ವಜನಿಕ ಹಿತಾಸಕ್ತಿ ಕಾರ್ಯಕ್ರಮವಾಗಿರುವುದರಿಂದ ಯಾವುದೇ ಸಾರ್ವಜನಿಕರಿಗೆ, ಆಶಾ ಕಾರ್ಯಕರ್ತರಿಗೆ, ಅಂಗನವಾಡಿ ಕಾರ್ಯಕರ್ತರಿಗೆ, ಸ್ವಸಹಾಯ ಸಂಘಗಳ ಮಹಿಳೆಯರಿಗೆ ಆಹ್ವಾನ ನೀಡದೆ, ಕೆಲವೇ ಕೆಲವು ಗ್ರಾಮ ಪಂಚಾಯಿರಿ ಸದಸ್ಯರು, ಅಧಿಕಾರಿಗಳೇ ದರ್ಬಾರ್‌ ನಡೆಸಿದ್ದಾರೆ” ಎಂದು ಆರೋಪಿಸಿದರು.

“ಸಾರ್ವಜನಿಕ ವಿಶೇಷ ಸಭೆ ನಿಗದಿಯಾಗಿ, ಪ್ರಕಟಣೆ ಹೊರಡಿಸಿ ಸಾರ್ವಜನಿಕರೇ ಇಲ್ಲದಂತೆ ಸಭೆ ನಡೆಸಿದ್ದು ಖಂಡನೀಯ, ಗ್ರಾಮದ ಸಭೆಯಲ್ಲಿ ಎಲ್ಲರೂ ಭಾಗಿಯಾಗಬೇಕಿದ್ದ ಸಭೆ ಕೇವಲ ಪಂಚಾಯಿತಿ ಸದಸ್ಯರ ಹಾಗೂ ಅಧಿಕಾರಿಗಳ ಸಭೆಯಾಗಿದ್ದು ಸರಿಯಾದ ಕ್ರಮವಲ್ಲ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಭ್ರಷ್ಟ ಅಧಿಕಾರಿಯ ಮನೆಯಲ್ಲಿ ಚಿನ್ನ, ಬೆಳ್ಳಿಗಳ ರಾಶಿ: ಬೆಚ್ಚಿಬಿದ್ದ ಲೋಕಾಯುಕ್ತ ಅಧಿಕಾರಿಗಳು!

“ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾರಿಗೂ ಆಹ್ವಾನ ಕೊಟ್ಟಿಲ್ಲ, ಯಾರಿಗೂ ತಿಳಿಸದೆ ಗ್ರಾಮ ಸಭೆಯನ್ನು ಪಂಚಾಯ್ತಿ ಸಭೆಯಂತೆ ನಡೆಸುತ್ತಿದ್ದಾರೆ. ಗ್ರಾಮ ಆರೋಗ್ಯ ವಿಚಾರವಾಗಿ ಸಾರ್ವಜನಿಕರು ಇಲ್ಲದೆ ಯಾವ ವಿಚಾರ ಚರ್ಚೆ ಮಾಡುತ್ತಾರೆ,
ಯಾವ ಸಮಸ್ಯೆಗಳನ್ನು ಆಲಿಸುತ್ತಾರೆ. ಜನ ಸಾಮಾನ್ಯರ ಅಹವಾಲು ತಿಳಿಯದೆ ಸಭೆಗಳನ್ನು ಹತ್ತಿಕ್ಕಿ ತಮಗೆ ಇಸ್ಟ ಬಂದ ಹಾಗೆ ನಡೆಸುವ ಪ್ರವೃತ್ತಿ ಬೆಳೆಸಿಕೊಂಡಿರುವುದು ನಿಜಕ್ಕೂ ವಿಷಾದನೀಯ ಸಂಗತಿ. ಇಂತಹ ಧೋರಣೆ ಎಂದಿಗೂ ಮುಂದುವರೆಯಕೂಡದು” ಎಂದು ನಗರ್ಲೆ ವಿಜಯಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...