ಮೈಸೂರು | ಮಾದಕ ವಸ್ತುಗಳ ದುರುಪಯೋಗ, ಕಳ್ಳ ಸಾಗಣಿಕೆ ವಿರುದ್ಧ ಜಾಗೃತಿ ಅಭಿಯಾನದ ಪ್ರತಿಜ್ಞೆ ಸ್ವೀಕಾರ

Date:

ಮಕ್ಕಳಲ್ಲಿ ಮಾದಕ ವಸ್ತುಗಳ ಅರಿವು ಮೂಡಬೇಕು. ಸ್ವಾಸ್ಥ್ಯ ಸಮಾಜಕ್ಕೆ ಕೊಡುಗೆಯಾಗುವ ನಿಟ್ಟಿನಲ್ಲಿ ಮಕ್ಕಳು ಬೆಳೆಯಬೇಕು ಎಂದು ಅಂಕಣಕಾರ ಡಾ ವಿ ರಂಗನಾಥ್ ಹೇಳಿದರು.

- Advertisement -

ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಪುಷ್ಪಾಂಜಲಿ ಸೇವಾ ಸಂಸ್ಥೆ ಮತ್ತು ಅಗರ್ವಾಲ್ ಸಮಾಜದ ಸಂಯುಕ್ತ ಆಶ್ರಯದಲ್ಲಿ ‘ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳ ಸಾಗಣೆ’ ವಿರೋಧದ ಅಂತರರಾಷ್ಟ್ರೀಯ ದಿನ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರತಿಜ್ಞೆ ಬೋಧಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಾದಕ ವಸ್ತುಗಳ ಅರಿವು

“ಮಕ್ಕಳಲ್ಲಿ ಮಾದಕ ವಸ್ತುಗಳ ಬಗೆಗಿನ ಕುತೂಹಲ ಮೂಡದಂತೆ ಹಾಗೂ ಮಾದಕ ವಸ್ತುಗಳ ವ್ಯಸನಿಗಳಾಗದಂತೆ ನೋಡಿಕೊಳ್ಳಬೇಕು. ಮಕ್ಕಳು ಆರೋಗ್ಯದ ಕಡೆ ಗಮನ ಹರಿಸಿ ಶಿಕ್ಷಣದ ಕಡೆಗೆ ಗಮನ ಕೊಡಬೇಕು. ಯಾವುದೇ ಸಾಮಾಜಿಕ ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು. ಅಂತಹ ಘಟನೆಗಳು ಕಂಡುಬಂದಲ್ಲಿ ಖಂಡಿಸಿ, ಸಂಬಂಧಪಟ್ಟವರ ಗಮನಕ್ಕೆ ತರುವಂತಹ ಕೆಲಸವಾಗಬೇಕು” ಎಂದರು.

ಮಾದಕ ವಸ್ತುಗಳ ಅರಿವು

ಕಾರ್ಯಕ್ರಮಕ್ಕೂ ಮುನ್ನ ಎನ್‌ಸಿಸಿ ಕೆಡೆಟ್‌ಗಳು, ಮಹಾವೀರ ವಿದ್ಯಾಸಂಸ್ಥೆ, ಗೋಪಾಲಸ್ವಾಮಿ ಕಾಲೇಜು, ವಾಗ್ದೇವಿ ವಿದ್ಯಾಲಯ, ಗೀತಾ ಶಿಶು ಶಿಕ್ಷಣ ಸಂಸ್ಥೆ ಸೇರಿದಂತೆ ಇತರ ಕಾಲೇಜಿನ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಾನವ ಸರಪಳಿಯಲ್ಲಿ ಭಾಗಿಯಾಗಿ ಪ್ರತಿಜ್ಞೆ ಸ್ವೀಕರಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬೃಹತ್‌ ಗುಂಡಿಗಳಿಂದ ರಾರಾಜಿಸುತ್ತಿರುವ ರಸ್ತೆ; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಾಹನ ಸವಾರರು ಹೈರಾಣು

ಕಾರ್ಯಕ್ರಮದಲ್ಲಿ ಅಗರ್ವಾಲ್ ಸಂಸ್ಥೆಯ ಮುಖ್ಯಸ್ಥ ಡಾ ಎಸ್ ಕೆ ಮಿತ್ತಲ್ , ಚೇತನ್ ಗಿರಿ ಮಹಾರಾಜ್ ಸ್ವಾಮೀಜಿ, ಎನ್ ಸಿ ಸಿ ಗ್ರೂಪ್ ಕಮಾಂಡರ್ ಕರ್ನಲ್ ರೋಹಿತ್ ಠಾಕೂರ್, ಉಚ್ಛ ಶಿಕ್ಷಣಾಧಿಕಾರಿ ಅರುಣ್ ಕುಮಾರ್, ಗೋಪಾಲಸ್ವಾಮಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮಂಜುನಾಥ್, ಜೀವದಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ದತ್ತಾತ್ರೇಯ ಸಿಂಧೆ, ನವೀನ ಗುಪ್ತ, ಹರಿ ಸಿಂಗ್ ಲಂಬ, ಅಜಯ್ ಶಾಸ್ತ್ರಿ ಸೇರಿದಂತೆ ಇತರ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...