ಯದುವೀರ್ ಹೆಸರನ್ನು ʼಯಮರಾಜ್‌ ಒಡಿಯರ್‌ʼ ಎಂದ ಮೋದಿ: ಪ್ರಧಾನಿ ಪ್ರಮಾದಕ್ಕೆ ಕಾಲೆಳೆದ ನೆಟ್ಟಿಗರು

Date:

Advertisements

ಮೈಸೂರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಹೆಸರನ್ನು ʼಯಮರಾಜ್‌ ಒಡಿಯರ್‌ʼ ಎಂದು ಉಚ್ಚರಿಸಿ ಮುಜುಗರಕ್ಕೀಡಾಗಿದ್ದಾರೆ.

2024ರ ಲೋಕಸಭೆ ಚುನಾವಣಾ ಪ್ರಯುಕ್ತ ಎನ್‌ಡಿಎ ಅಭ್ಯರ್ಥಿಗಳ ಪರ ಮತಯಾಚನೆ ಮಾಡುವ ವೇಳೆ ಈ ಪ್ರಮಾದ ನಡೆದಿದೆ.

ಪ್ರಧಾನಿ ಅವರು ತಮ್ಮ ಭಾಷಣದ ಕೊನೆಯಲ್ಲಿ, “ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕು. ಮೈಸೂರಿನ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್, ಮಂಡ್ಯದ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ, ಚಾಮರಾಜನಗರದ ಅಭ್ಯರ್ಥಿ ಬಾಲರಾಜ್ ಮತ್ತು ಹಾಸನದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸಬೇಕು” ಎಂದು ಮತದಾರರಿಗೆ ಮನವಿ ಮಾಡಿದರು.

Advertisements

ಮತದಾರರಲ್ಲಿ ಮನವಿ ಮಾಡಿಕೊಳ್ಳುವ ವೇಳೆ ಮೈಸೂರು ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹೆಸರನ್ನು ತಪ್ಪಾಗಿ ಉಚ್ಚರಿಸಿದ ಪ್ರಧಾನಿ ಮುಜುಗರಕ್ಕೀಡಾಗಿದ್ದಾರೆ.

”ಮೈಸೂರಿನ ಎನ್‌ಡಿಎ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಯಮರಾಜ ಒಡಿಯರ್‌” ಎಂದು ಹೇಳಿದ ಪ್ರಧಾನಿ ಮೋದಿ ತಕ್ಷಣ ಸಾವರಿಸಿಕೊಂಡು “ಚಾಮರಾಜ ಒಡೆಯರ್” ಎಂದು ಪುನರುಚ್ಚರಿಸಿದ್ದಾರೆ.

ಈ ವಿಡಿಯೋ ತುಣುಕನ್ನು ವೈರಲ್‌ ಮಾಡಿರುವ ನೆಟ್ಟಿಗರು ಪ್ರಧಾನಿ ಮೋದಿ ಅವರ ಬದಲು ಬೇರೆ ಯಾರಾದರೂ ರಾಜವಂಶದ ಹೆಸರನ್ನು ತಪ್ಪಾಗಿ ಉಚ್ಚರಿಸಿದ್ದರೆ ಮಾಧ್ಯಮಗಳು ಅದನ್ನೇ ದೊಡ್ಡ ಸುದ್ದಿಯಾಗಿ ಮಾಡುತ್ತಿದ್ದವು ಎಂದು ಕಾಲೆಳೆದಿದ್ದಾರೆ

”ನರೇಂದ್ರ ಮೋದಿಯ ಬದಲು ಇತರ ರಾಜಕಾರಣಿಗಳು ‘ಚಾಮರಾಜ ಒಡೆಯರ್’ ಅವರನ್ನು ‘ಯಮರಾಜ್ ಒಡಿಯರ್’ ಎಂದು ಉಲ್ಲೇಖಿಸಿದ್ದರೆ ವ್ಯಕ್ತವಾಗುತ್ತಿದ್ದ ಆಕ್ರೋಶವನ್ನು ಊಹಿಸಿ. ರಾಷ್ಟ್ರೀಯ ಮಾಧ್ಯಮಗಳು ಇದೇ ವಿಡಿಯೋ ಕ್ಲಿಪ್ ಇಟ್ಟುಕೊಂಡು ದಿನದ 24 ಗಂಟೆಯಂತೆ ಇಡೀ ವಾರ(24/7) ಪ್ರಸಾರ ಮಾಡುತ್ತಿದ್ದವು” ಎಂದು ಫ್ಯಾಕ್ಟ್‌ ಚೆಕರ್‌ ಮಹಮ್ಮದ್‌ ಝುಬೈರ್‌ ಟ್ವೀಟ್‌ ಮಾಡಿದ್ದಾರೆ.

ನರೇಂದ್ರ ಮೋದಿ ಬೆಂಬಲಿಗರು ಮೋದಿ ಪರವಾಗಿ ಪ್ರತಿಕ್ರಿಯಿಸಿದ್ದು, “ಯಮರಾಜ ಹಿಂದೂಗಳ ದೇವರು. ಯಮರಾಜನ ಹೆಸರು ತಪ್ಪಿ ಹೇಳಿದ್ದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ. ಅಲ್ಲದೆ, ಪ್ರಧಾನಿ ಅವರು ಎರಡೇ ಸೆಕೆಂಡಿನಲ್ಲಿ ತಮ್ಮ ತಪ್ಪನ್ನು ತಿದ್ದಿಕೊಂಡಿದ್ದಾರೆ” ಎಂದು ಬರೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ‌ವಿಜಯಪುರ | ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳಿಗಾಗಿ ಮತ ನೀಡಿ: ಎಂ ಬಿ ಪಾಟೀಲ್

ಈ ಹಿಂದೆ, ಸರ್‌ ಎಂ ವಿಶ್ವೇಶ್ವರಯ್ಯ ಅವರ ಹೆಸರನ್ನು ರಾಹುಲ್‌ ಗಾಂಧಿ ತಪ್ಪಾಗಿ ಉಚ್ಚ ರಿಸಿದ್ದಕ್ಕೆ, ಪ್ರಧಾನಿ ಮೋದಿ ಮಾಡಿರುವ ಟೀಕೆಯನ್ನೂ ಝುಬೈರ್‌ ಅವರು ಉಲ್ಲೇಖಿಸಿದ್ದಾರೆ. ಪ್ರಧಾನಿ ಮೋದಿ ಅವರು ವಿಶ್ವೇಶ್ವರಯ್ಯ ಅವರ ಹೆಸರನ್ನು ಐದು ಸಲ ಉಚ್ಚರಿಸುವಂತೆ ರಾಹುಲ್‌ ಗಾಂಧಿಗೆ ಸವಾಲು ಹಾಕಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X