ಮೈಸೂರು | ಚುನಾವಣೆ ಹಿನ್ನೆಲೆ ಪೊಲೀಸ್‌ ಕಾರ್ಯಾಚರಣೆ ಆರಂಭ

Date:

  • ಕಾರ್ಯಾಚರಣೆ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವುದಿಲ್ಲ
  • ಅಪರಾಧ ಎಸಗಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ

ಮೈಸೂರು ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜಿಲ್ಲಾ ಪೊಲೀಸರು ಚುನಾವಣೆಗೆ ಮುಂಚಿತವಾಗಿ ಎಲ್ಲೆಡೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕರ್ನಾಟಕ ಪೊಲೀಸ್ ಕಾಯಿದೆ 1963 ಸೇರಿದಂತೆ ಕಾನೂನಿನ ಹಲವು ನಿಬಂಧನೆಗಳ ಅಡಿಯಲ್ಲಿ ಅಪರಾಧ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಇತರರಿಗೆ ತೊಂದರೆ ನೀಡುವವರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದಾರೆ.

ಅಂಗಡಿಗಳು, ಬಾರ್‌ಗಳು, ಜಾಯಿಂಟ್‌ಗಳು ಮತ್ತು ಸುತ್ತಮುತ್ತಲಿನ ಚಹಾ ಅಂಗಡಿಗಳು ಸೇರಿದಂತೆ ಹೆಚ್ಚಿನ ಜನರು ಸೇರುವ ಸ್ಥಳಗಳಲ್ಲಿ ಪೊಲೀಸರು ತಮ್ಮ ವಿಶೇಷ ಅಭಿಯಾನ ಆರಂಭಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 176 ಸ್ಥಳಗಳಿಗೆ ಪೊಲೀಸರು ಭೇಟಿ ನೀಡಿದ್ದಾರೆ. ಎಲ್ಲ ಜನಪ್ರಿಯ ಸ್ಥಳಗಳ ಮೇಲೆ ದಾಳಿ ನಡೆಸಿ, ಗುಂಪು ಸೇರುವವರನ್ನು ಪರಿಶೀಲಿಸುತ್ತಿರುವುದರಿಂದ ಅಭಿಯಾನದ ಪರಿಣಾಮ ಗೋಚರಿಸುತ್ತಿದೆ.

“ಯಾವುದೇ ಸ್ಪಷ್ಟ ಕಾರಣವಿಲ್ಲದೆ ನಡುರಾತ್ರಿವರೆಗೆ ಹೆಚ್ಚು ಸಮಯ ಕಳೆಯುತ್ತಿರುವುದು ಕಂಡುಬಂದಿದೆ. ಹಾಗಾಗಿ, ಕೆಲವು ಬೀದಿ ಅಪರಾಧಗಳನ್ನು ಪರಿಶೀಲಿಸುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಇತರರಿಗೆ ತೊಂದರೆ ನೀಡದಂತೆ ಎಚ್ಚರಿಕೆ ನೀಡುವುದು ಈ ಅಭಿಯಾನದ ಉದ್ದೇಶವಾಗಿದೆ” ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದ್ದಾರೆ.

“ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಪ್ರದೇಶ ಪ್ರಾಬಲ್ಯ ಅಭಿಯಾನವನ್ನು ಯೋಜಿಸಿದ್ದೇವೆ. ಕೆಲವು ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ, ಗುಂಪಿನ ಸದಸ್ಯರನ್ನು ವಿಚಾರಿಸುತ್ತಾರೆ. ಗುಂಪು ಸೇರಿದ್ದರ ಉದ್ದೇಶವನ್ನು ಪರಿಶೀಲಿಸುತ್ತಾರೆ” ಎಂದು ಹೇಳಿದ್ದಾರೆ.

“ಕುಡಿದು ವಾಹನ ಚಲಾಯಿಸುವುದು, ಅಸಭ್ಯ ಭಾಷೆ ಬಳಸುವುದು ಮತ್ತು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ಬಹುತೇಕ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕಳೆದ ಒಂದೂವರೆ ತಿಂಗಳಲ್ಲಿ ಭಾರತೀಯ ಮೋಟಾರು ವಾಹನ ಕಾಯಿದೆ, ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯಿದೆ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದಾರೆ? ಕೊಪ್ಪಳ | ವಿವಿಧ ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾ ಪಂಚಾಯತ್ ಸಿಇಓ ಭೇಟಿ; ತಪಾಸಣೆ

“ರೆಸಾರ್ಟ್‌, ಡಾಬಾ, ವಸತಿ ಪ್ರದೇಶ, ಹೊರವಲಯ, ಮಾರುಕಟ್ಟೆ, ಮದ್ಯದಂಗಡಿಗಳು ಮತ್ತು ಬಯಲು ಪ್ರದೇಶಗಳಂಥ  ಸ್ಥಳಗಳಲ್ಲಿ ದಿನದ 24 ಗಂಟೆಯೂ ನಡೆಯುವ ಈ ಅಭಿಯಾನಕ್ಕೆ ಆಯಾ ಸ್ಥಳೀಯ ಪೊಲೀಸ್ ಠಾಣೆಗಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂಥ ಸ್ಥಳಗಳಲ್ಲಿ ದುಷ್ಕರ್ಮಿಗಳು ಕ್ರಿಮಿನಲ್ ಯೋಜನೆಗಳನ್ನು ರೂಪಿಸಲು ಹೊಂಚಾಕುತ್ತಾರೆ” ಎಂದು ಲಾಟ್ಕರ್ ವಿವರಿಸಿದರು.

“ಮೈಸೂರು ಜಿಲ್ಲೆಯಲ್ಲಿ 22 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದೆ. ಕಾರ್ಯಾಚರಣೆ ವೇಳೆ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವುದಿಲ್ಲ. ಅನುಮಾನಾಸ್ಪದ ರೀತಿಯಲ್ಲಿ ವರ್ತಿಸುವ ಜನರನ್ನು ಮಾತ್ರ ವಿಚಾರಣೆಗೆ ಒಳಪಡಿಸಲಾಗುತ್ತದೆ. ಯಾರಾದರೂ ತಪ್ಪು ಮಾಡಿದ್ದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ” ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು...

ಶಾಸಕ ಪ್ರದೀಪ್ ಈಶ್ವರ್ ಸಹಾಯ ಅರಸಿ ಬಂದ ವೃದ್ಧೆ; ಬರಿಗೈನಲ್ಲೇ ವಾಪಸ್

ಸದ್ಯ ರಾಜ್ಯ ರಾಜಕಾರಣದಲ್ಲಿ ತೆಲುಗು-ಕನ್ನಡ ಮಿಶ್ರಿತ ಡೈಲಾಗ್‌ಗಳಿಂದ ಅಬ್ಬರಿಸಿ ಬೊಬ್ಬಿರಿಯುತ್ತಿರುವವರು ಶಾಸಕ...

ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ಚುರುಕುಗೊಳಿಸಿ ಅಂತಹವರ ವಿರುದ್ಧ...