ಮೈಸೂರು | ಪ್ರತಾಪ್ ಸಿಂಹ ಇತಿಹಾಸ ಗೊತ್ತಿರದ ಮೂರ್ಖ ವ್ಯಕ್ತಿ : ಅಬ್ದುಲ್ ಮಜೀದ್

Date:

ಮೈಸೂರಿನ ಮಹದೇವಪುರ ರಸ್ತೆಯಲ್ಲಿರುವ ಎಸ್‌ಡಿಪಿಐ ಕಚೇರಿಯಲ್ಲಿ ಬುಧವಾರ ಮದ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರತಾಪ್ ಸಿಂಹ ಇತಿಹಾಸ ಗೊತ್ತಿರದ ಮೂರ್ಖ ವ್ಯಕ್ತಿ ಎಂದು ಕಿಡಿಕಾರಿದರು.

- Advertisement -

ಸತತ 25 ವರ್ಷಗಳಿಂದ ಬಿಜೆಪಿ ಆಡಳಿತವಿರುವ ಗುಜರಾತ್ ರಾಜ್ಯದಲ್ಲಿ ಮತ್ತು ಬಿಜೆಪಿ, ಜೆಡಿಯು ಸಮ್ಮಿಶ್ರ ಸರ್ಕಾರವಿರುವ ಬಿಹಾರ ರಾಜ್ಯದಲ್ಲಿ ಸತತವಾಗಿ ಕುಸಿಯುತ್ತಿರುವ ಸೇತುವೆಗಳ ಡಿಪಿಆರ್ ಮಾಡಿದವರು ಯಾರು? ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಅಡಿಗಲ್ಲು ಹಾಕಿದ್ದಾರೆ ಎಂಬ ಸಚಿವ ಹೆಚ್. ಸಿ. ಮಹದೇವಪ್ಪ ಹೇಳಿಕೆ ಕುರಿತು, ಯಾವ ಮುಲ್ಲ ಡಿಪಿಆರ್ ಮಾಡಿಸಿದ್ದು ಎಂದು ಪ್ರಶ್ನಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಾಂಗ್ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೆದ್ದಾರಿ ನಿರ್ಲಕ್ಷ್ಯಕ್ಕೆ ಆರಿ ಹೋದ ಅಲೆಮಾರಿ ಸಮುದಾಯದ ಜ್ಯೋತಿ.!

ಕಡು ಬಡತನ, ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೂ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಜಿಎನ್ಎಂ ನರ್ಸಿಂಗ್ ಪದವಿ ವ್ಯಾಸಂಗ ಮಾಡುತ್ತಿದ್ದಳು. ತನ್ನ ಸಮುದಾಯದಲ್ಲೇ ಅತಿ ಹೆಚ್ಚು ಶಿಕ್ಷಣ ಪಡೆದ ಬೆರಳೆಣಿಕೆಯ ವಿದ್ಯಾರ್ಥಿಗಳಲ್ಲಿ...

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ ಅಧಿಕಾರದ ಹಂಚಿಕೆ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯದ ಭವಿಷ್ಯವನ್ನು ನಿರ್ಧರಿಸುವ ಪ್ರಕ್ರಿಯೆ. ಕ್ಷೇತ್ರಗಳ ಗಡಿ ಬದಲಾವಣೆಯಿಂದ ದಲಿತ, ಆದಿವಾಸಿ,...

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ...

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಭೂದಾಖಲೆಗಳು ಬಾದಾಮಿ ತಹಸೀಲ್ದಾರ್ ಕಚೇರಿ ಮತ್ತು ಗದಗ ರಸ್ತೆಯ ಎಪಿಎಂಸಿ ಸಮೀಪದ ಕಚೇರಿಯಲ್ಲಿ ಸಂಗ್ರಹವಾಗಿವೆ....

ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ಕೆಆರ್‌ಎಸ್ ಜಲಾಶಯವನ್ನು ಟಿಪ್ಪು ಸುಲ್ತಾನ್ ಕಟ್ಟಿಸಿದ್ದು ಎಂದು ಎಲ್ಲೂ ಹೇಳಿಲ್ಲ. ಕಾವೇರಿ ನದಿಗೆ ಅಣೆಕಟ್ಟೆ ಕಟ್ಟುವ ಯೋಜನೆ ರೂಪಿಸಿ ಅದಕ್ಕೆ ಮೊದಲು ಅಡಿಗಲ್ಲು ಹಾಕಿಸಿದ್ದು ಟಿಪ್ಪು ಎಂದು ಹೇಳಿದ್ದಾರೆ ಅಷ್ಟೇ. ಈ ಶಾಸನವನ್ನು ಕೆಆರ್‌ಎಸ್ ಜಲಾಶಯ ಕಟ್ಟಿಸಿದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೇ ಜಲಾಶಯದ ಬಳಿ ಟಿಪ್ಪು ಪರ್ಶಿಯನ್ ಭಾಷೆಯಲ್ಲಿ ಬರೆಸಿದ್ದ ಶಾಸನವನ್ನು ಕನ್ನಡದಲ್ಲಿ ಬರೆಸಿ ಜಲಾಶಯದ ಬಳಿಯೇ ಹಾಕಿಸುವ ಮೂಲಕ ತಮ್ಮ ದೊಡ್ಡತನವನ್ನು ಮೆರೆದಿದ್ದಾರೆ.

ಆದರೇ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ಮಾತ್ರ ತಮ್ಮ ಬೌದ್ಧಿಕ ದಿವಾಳಿತನವನ್ನು ಪ್ರದರ್ಶಿಸಿದ್ದಾರೆ. ಗುಜರಾತ್ ರಾಜ್ಯದಲ್ಲಿ ಕಳೆದ 25 ವರ್ಷಗಳಿಂದಲೂ ಬಿಜೆಪಿ ಸರ್ಕಾರದ ಆಡಳಿತವೇ ಇದೆ. ಪ್ರಧಾನಿ ಮೋದಿಯವರು ಮೊದಲು ಗುಜರಾತ್ ಮುಖ್ಯಮಂತ್ರಿ ಆಗಿದ್ದವರು, ಆ ರಾಜ್ಯದಲ್ಲಿ ಎಷ್ಟು ಸೇತುವೆಗಳು ಕುಸಿದಿವೆ, ಎಷ್ಟೋಂದು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಅದೇ ರೀತಿ ಬಿಜೆಪಿ ಮತ್ತು ಜೆಡಿಯು ಸಮ್ಮಿಶ್ರ ಸರ್ಕಾರವಿರುವ ಬಿಹಾರದಲ್ಲಿಯೂ ಹತ್ತಾರು ಸೇತುವೆಗಳು ಕುಸಿದಿವೆ, ಅವುಗಳ ಡಿಪಿಆರ್ ಮಾಡಿದವರು ಯಾರು ಹೇಳಿ ನೋಡೋಣ? ಎಂದು ಖಾರವಾಗಿ ಪ್ರಶ್ನಿಸಿದರು.

ವಿಶ್ವವಿಖ್ಯಾತ ಆಗ್ರಾದ ತಾಜ್‌ಮಹಲ್, ದೆಹಲಿಯ ಕೆಂಪುಕೋಟೆ, ಕುತುಬ್ ಮಿನಾರ್, ಅಷ್ಟೇ ಏಕೆ ಕರ್ನಾಟಕದಲ್ಲಿರುವ ಗೋಲ್‌ಗುಂಬಜ್ ಕಟ್ಟಡಗಳ ಡಿಪಿಆರ್ ಮಾಡಿದವರು ಯಾರು? ಎಂಬುದು ನಿಮಗೆ ಗೊತ್ತಿದೆಯಾ? ನೀವೊಬ್ಬ ಮೂರ್ಖ ನಿಮ್ಮಂತ ಮೂರ್ಖರು ಮಾತ್ರ ನಿಮ್ಮ ಮಾತಿಗೆ ಶಹಬ್ಬಾಸ್ ಹೇಳುತ್ತಾರೆ, ಬುದ್ಧಿವಂತರು ನಿಮ್ಮ ಮಾತಿಗೆ ಉಗಿಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಿಪ್ಪು ಸುಲ್ತಾನ್ ಮತ್ತು ಹೈದರ್ ಅಲಿಖಾನ್ ಅವರು ಈ ನಾಡಿನ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಯಾರೂ ಮರೆಯಲು ಸಾಧ್ಯವಿಲ್ಲ. ನೀರಾವರಿ ಇಲ್ಲದ ಸಂದರ್ಭದಲ್ಲಿ ಚೀನಾದಿಂದ ರೇಷ್ಮೆ ಬೆಳೆಯನ್ನು ತರಿಸಿ ತನ್ನ ರಾಜ್ಯದಲ್ಲಿ ಅಭಿವೃದ್ಧಿಪಡಿಸಿದರು. ವಾಣಿಜ್ಯ ಬೆಳೆಗಳಿಗೆ ಪ್ರೋತ್ಸಾಹ ನೀಡಿದರು. 1782 ರಲ್ಲಿ ಟಿಪ್ಪು ಸುಲ್ತಾನ್ ಅವರು, ಕಾವೇರಿ ನದಿಗೆ 70 ಅಡಿ ಎತ್ತರದ ಅಣೆಕಟ್ಟೆ ಕಟ್ಟುವ ಮೂಲಕ ರೈತರ ಬದುಕು ಹಸನು ಮಾಡಲು ಯತ್ನಿಸಿ ಅದಕ್ಕೆ ಹಣಕಾಸು ಹೊಂದಿಸಿದ್ದರು, ಆದರೇ, 3ನೇ ಮೈಸೂರು ಆಂಗ್ಲೋ ಯುದ್ಧದಲ್ಲಿ ಟಿಪ್ಪು ಬ್ರಿಟೀಷರ ವಿರುದ್ಧ ಸೋಲು ಅನುಭವಿಸಿ ಯುದ್ಧದ ಖರ್ಚು 3 ಕೋಟಿ ಹಣವನ್ನು ಬ್ರಿಟಿಷರಿಗೆ ಕೊಡಲಾಗದೆ ತಮ್ಮ ಮಕ್ಕಳನ್ನು ಒತ್ತೆ ಇಟ್ಟಿದ್ದು ಯಾರೂ ಮರೆಯಲು ಸಾಧ್ಯವಿಲ್ಲ. ಬಳಿಕ ನಾಲ್ಕನೇ ಮೈಸೂರು-ಆಂಗ್ಲೋ ಯುದ್ಧದಲ್ಲಿ ಟಿಪ್ಪು ವೀರ ಮರಣ ಹೊಂದಿದಾಗ ಅಣೆಕಟ್ಟೆ ಕಟ್ಟಲು ಆಗುವುದಿಲ್ಲ. ಆದರೇ, ರಾಜರ್ಷಿ ನಾಲ್ವಡಿ ಕೃಷ್ಣರಾಯ ಒಡೆಯರ್ ಅವರು ಕೆಆರ್‌ಎಸ್ ಜಲಾಶಯ ಕಟ್ಟುವ ಸಂದರ್ಭದಲ್ಲಿ ಸಿಕ್ಕ ಶಾಸನವನ್ನು ಅದೇ ಜಾಗದಲ್ಲಿ ಇರಿಸಿದ್ದರು. ನಿಮ್ಮಂತಹವರು ಏನಾದರೂ ಆಗ ಇದ್ದಿದ್ದರೆ ಆ ಶಾಸನವನ್ನು ಒಡೆದುಹಾಕುತ್ತಿದ್ದರು ಎಂದು ವ್ಯಂಗ್ಯವಾಡಿದರು.

ಟಿಪ್ಪು ಸುಲ್ತಾನ್ ತನ್ನ ರಾಜ್ಯದ ಒಟ್ಟು ಭೂಮಿಯ ಶೇ.30 ರಷ್ಟು ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಿದ್ದರು, ಅವರು ತಮ್ಮ ರಾಜ್ಯದಲ್ಲಿ 40 ಸಾವಿರ ಕೆರೆ, ಕಟ್ಟೆಗಳನ್ನು ಕಟ್ಟಿಸಿದ್ದರು, ನೀವು 10 ವರ್ಷ ಎಂಪಿ ಆಗಿ ಎಷ್ಟು ಕೆರೆಗಳನ್ನು ಕಟ್ಟಿಸಿದ್ದೀರಿ? ಅಥವಾ, ಎಷ್ಟು ಕೆರೆಗಳ ಹೂಳು ಎತ್ತಿಸಿದ್ದೀರಿ ಹೇಳಿ. ಟಿಪ್ಪು ಸುಲ್ತಾನರ ಬಗ್ಗೆ ವ್ಯಂಗ್ಯವಾಗಿ ಮಾತನಾಡುವ ನೀವು ಮೈಸೂರು-ಕೊಡಗು ಜಿಲ್ಲೆಯಲ್ಲಿ 40 – 50 ವರ್ಷಗಳಿಂದ ಉಳುಮೆ ಮಾಡುತ್ತಿರುವ ಭೂ ರಹಿತರು ಅರ್ಜಿ ನಮೂನೆ 50, 53, 57 ರಲ್ಲಿ ತಮಗೆ ಭೂ ಒಡೆತನ ನೀಡುವಂತೆ ಸರ್ಕಾರಕ್ಕೆ 10 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿ ತಾಲ್ಲೂಕು ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.

ಎಷ್ಟು ಜನರಿಗೆ ನೀವು ಭೂಮಿ ಕೊಡಿಸಿದ್ದೀರಿ ಹೇಳಿ?. ಟಿಪ್ಪು ಸುಲ್ತಾನರು ತಮ್ಮ ಆಳ್ವಿಕೆಯಲ್ಲೇ ಭೂ ರಹಿತ ದಲಿತರಿಗೆ, ಇತರರಿಗೆ ಭೂಮಿ ಒಡೆತನ ನೀಡಿದ್ದರು ಎನ್ನುವುದು ನಿಮಗೆ ಗೊತ್ತಿಲ್ಲದಿದ್ದರೆ, ಇತಿಹಾಸ ಓದಿ. 1340 ರಲ್ಲಿ ಹೊಯ್ಸಳರ ಕಾಲದಲ್ಲಿ ಮುಡುಕುತೋರೆ ಬಳಿ ಅಣೆಕಟ್ಟೆ ಕಟ್ಟಲಾಗಿತ್ತು. ಅದಕ್ಕೂ ಮುನ್ನ ಗಂಗರು ಪಾಂಡವಪುರದ ಬಳಿ ಅಣೆಕಟ್ಟೆ ಕಟ್ಟಿದ್ದಾರೆ. ಅದರ ಡಿಪಿಆರ್ ಕೇಳಲು ನಿಮಗೆ ಆಗುತ್ತದೆಯಾ? ಪದೇ ಪದೇ ಟಿಪ್ಪು ಸುಲ್ತಾನರ ಅವಹೇಳನ ಸಲ್ಲದು, ಟಿಪ್ಪು ಒಬ್ಬ ಮುಸ್ಲಿಂ ದೊರೆ ಎಂದು ಬಿಜೆಪಿಯವರು ಅವರ ಅಭಿವೃದ್ಧಿ ಕಾರ್ಯಗಳನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ. ಆದರೇ, ಇತಿಹಾಸವನ್ನು ಬದಲಾಯಿಸಲು ಅಸಾಧ್ಯ ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸರಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ ವಿಶ್ವ ಸ್ತನ್ಯಪಾನ ಸಪ್ತಾಹ ‘

ಸುದ್ದಿಗೋಷ್ಠಿಯಲ್ಲಿ ಮೈಸೂರು ಮಹಾನಗರಪಾಲಿಕೆ ಮಾಜಿ ಸದಸ್ಯ ಸ್ವಾಮಿ, ಮೈಸೂರು ಜಿಲ್ಲಾ ಎಸ್‌ಡಿಪಿಐ ಅಧ್ಯಕ್ಷ ರಫತ್ ಖಾನ್, ಫಿರ್ದೋಸ್, ಸಫಿಯುಲ್ಲಾ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ – 2026 | ನಮ್ಮ ನಡುವೆ ಇರುವ ಫ್ಯಾಸಿಸ್ಟರ ಬಗ್ಗೆ ಸದಾ ಜಾಗೃತರಾಗಿರಬೇಕು : ಟಿ. ಎಲ್‌. ಕೃಷ್ಣೇಗೌಡ

ಫ್ಯಾಸಿಸ್ಟರು ನಮ್ಮ ನಡುವೆಯೇ ಸಾಮಾನ್ಯರಂತೆ, ಅತ್ಯಂತ ಅಮಾಯಕರಂತೆ ಇರುತ್ತಾರೆ. ಇಂತಹ ಅಮಾಯಕ...

ಮಲೆನಾಡಿನ ಉಳಿವಿಗೆ ಬಂದೂಕು ಹಿಡಿದವರಿಗೆ ನಕ್ಸಲ್ ಎಂದರು! ಎಸ್ಟೇಟ್ ಮಾಲೀಕನ ಕೃತ್ಯಕ್ಕೆ ಏನೇಳಬೇಕು?

ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದ ಬಸಗೋಡು ವ್ಯಾಪ್ತಿಯ ಬ್ರಹ್ಮಗಿರಿ ಕಾಫಿ ಎಸ್ಟೇಟ್...

ರಾಯಚೂರು | ಕೆಲಸದ ಒತ್ತಡದ ನಡುವೆಯೂ ವ್ಯಾಯಾಮ, ಕ್ರೀಡೆಗೆ ಆದ್ಯತೆ ನೀಡಿ: ನ್ಯಾಯಾಧೀಶ ಬಿ.ಬಿ. ಜಕಾತಿ

ಕೆಲಸದ ಒತ್ತಡದ ನಡುವೆಯೂ ಪ್ರತಿಯೊಬ್ಬರೂ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ...

ರಾಯಚೂರು | ಎಐ ತಂತ್ರಜ್ಞಾನ ಬಳಕೆಯಲ್ಲಿ ಎಚ್ಚರಿಕೆ ಇರಲಿ, ಸತ್ಯಶೋಧನೆ ಪತ್ರಕರ್ತರ ಆದ್ಯತೆಯಾಗಲಿ: ಶಿವಾನಂದ ತಗಡೂರು

ಕೃತಕ ಬುದ್ಧಿಮತ್ತೆ (ಎಐ) ಮತ್ತು ಡಿಜಿಟಲ್ ತಂತ್ರಜ್ಞಾನಗಳು ಪತ್ರಿಕೋದ್ಯಮದಲ್ಲಿ ಹೊಸ ಸಾಧ್ಯತೆಗಳನ್ನು...