ಮೈಸೂರು | ಪ್ರಗತಿಪರ ಚಿಂತಕ, ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಮಹೇಶ್ ಚಂದ್ರಗುರು ಇನ್ನಿಲ್ಲ

Date:

Advertisements

ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಬಿ ಪಿ ಮಹೇಶ ಚಂದ್ರಗುರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರಿಗೆ 68 ವರ್ಷ ವಯಸ್ಸಾಗಿತ್ತು. ಇಂದು ಸಂಜೆ(ಆಗಸ್ಟ್ 17) 7.30ರ ಸುಮಾರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತವಾಗಿರುವುದಾಗಿ ತಿಳಿದುಬಂದಿದೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ‌ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗ್ಯಾಂಗ್ರೀನ್‌ ಕಾರಣದಿಂದ ಕಾಲುನೋವಿನ ಸಮಸ್ಯೆ ಎದುರಿಸುತ್ತಿದ್ದ ಪ್ರೊ.ಮಹೇಶ್‌ ಚಂದ್ರ ಗುರು ಅವರಿಗೆ ಇಂದು ಸಂಜೆ 7.30 ರ ಸುಮಾರಿಗೆ ಹೃದಯಘಾತ ಸಂಭವಿಸಿ, ನಿಧನರಾಗಿರುವುದಾಗಿ ತಿಳಿದುಬಂದಿದೆ.

Advertisements

31 ಜನವರಿ 1957ರಲ್ಲಿ ಜನಿಸಿದ್ದ ಇವರು, 80ರ ದಶಕದಲ್ಲಿ ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಹುದ್ದೆ ಆರಂಭಿಸಿದ್ದರು. ಆ ಬಳಿಕ ಮಂಗಳೂರು ವಿವಿಯಲ್ಲಿ ಜರ್ನಲಿಸಂ ಪ್ರಾಧ್ಯಾಪಕರಾಗಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದರು. ಬಳಿಕ ಮೈಸೂರು ವಿವಿಗೆ ವರ್ಗಾವಣೆಗೊಂಡು 2019ರಲ್ಲಿ ಸೇವೆಯಿಂದ ನಿವೃತ್ತರಾದರು. ಭಾರತದಲ್ಲಿ ಮೊದಲ ದಲಿತ-ಬೌದ್ಧ ಮಾಧ್ಯಮ ಅಧ್ಯಯನ ಪ್ರಾಧ್ಯಾಪಕರಾಗಿ ಕೂಡ ಗುರುತಿಸಿಕೊಂಡಿದ್ದರು.

ನಿವೃತ್ತಿಯ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಗಣನೀಯವಾಗಿ ಗುರುತಿಸಿಕೊಂಡಿದ್ದ ಪ್ರೊ .ಮಹೇಶ್‌ ಚಂದ್ರ ಗುರು ಅವರು ಎಡಪಂಥೀಯ ವಾದವನ್ನು ಪ್ರತಿಪಾದಿಸುತ್ತಿದ್ದರು. ನಾಡ ಹಬ್ಬ ದಸರಾ ವೇಳೆ ಮಹಿಷಾ ದಸರಾ ಆಚರಣೆಗೊಳ್ಳಲು ಇವರು ಪ್ರಮುಖ ಪಾತ್ರ ವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X