ಮೈಸೂರು | ನ.15 ರಿಂದ 25ರವರೆಗೆ ರೈತ, ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಬಡಗಲಪುರ ನಾಗೇಂದ್ರ

Date:

Advertisements

ಒಕ್ಕೂಟ ಸರ್ಕಾರವು ನಿರ್ಲಜ್ಜತನದಿಂದ ಕಾರ್ಪೋರೇಟ್ ಕಂಪನಿಗಳ ಜೊತೆ ಕೈ ಮಿಲಾಯಿಸಿ, ದುಡಿಯುವವರ ಅನ್ನವನ್ನು ಕಸಿದುಕೊಳ್ಳಲು ಹೊರಟಿದೆ. ನಮ್ಮ ಭೂಮಿ, ಬೆಳೆ, ಶ್ರಮ ಮತ್ತು ಬದುಕನ್ನು ಬಂಡವಾಳ ಶಾಹಿಗಳ ಪಾದತಳಕ್ಕೆ ಒಪ್ಪಿಸಲು ಹೊರಟಿದೆ ಎಂದು ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಜಲದರ್ಶಿನಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಪ್ರಗತಿಪರ ಮುಖಂಡರ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯ ಸರ್ಕಾರ ನಾವು ಈ ನೀತಿಗಳನ್ನೆಲ್ಲಾ ವಿರೋಧಿಸುತ್ತೇವೆ ಎಂದು ಬಾಯಿ ಮಾತಿಗೆ ಹೇಳುತ್ತಿದೆ. ತನ್ನ ಪ್ರಣಾಳಿಕೆಯಲ್ಲು ಬರೆದುಕೊಂಡಿದೆ. ಅದು ಮಾತು ಭರವಸೆಯಾಗಿಯೇ ಉಳಿದಿದೆ ಎಂದು ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದರು.

ಬಿಜೆಪಿ ಸರ್ಕಾರ ತೆಗೆದುಕೊಂಡ ತೀರ್ಮಾನಗಳನ್ನೇ ಕಾಂಗ್ರೆಸ್ ಸಹ ಮುಂದುವರೆಸಿಕೊಂಡು ಹೋಗುತ್ತಿದೆ. ನಾವು ಈಗಲು ಎಚ್ಚೆತ್ತು ಕೊಳ್ಳದಿದರೆ, ನಮ್ಮ ಬದುಕಿನ ಮೇಲಾಗುತ್ತಿರುವ ಕಾರ್ಪೋರೇಟ್ ಶಕ್ತಿಗಳ ಆಕ್ರಮಣವನ್ನು ತಡೆಯದಿದ್ದರೆ, ಈ ಸಂಕಷ್ಟಗಳಿಂದ ನಮಗೆ ವಿಮೋಚನೆ ಇಲ್ಲದಂತಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

Advertisements
WhatsApp Image 2024 11 14 at 3.21.20 PM

ಇದಿಷ್ಟೇ ಅಲ್ಲದೇ, ನಮ್ಮ ಭವಿಷ್ಯದ ತಲೆಮಾರು ಸಂಪೂರ್ಣವಾಗಿ ಅನಾಥಗೊಳ್ಳುವುದು, ಹೊಸ ರೂಪದ ಗುಲಾಮಗಿರಿಗೆ ಒಳಗಾಗುವುದು ಖಚಿತ. ಇದನ್ನು ನಾವು ತಡೆಯಲೇಬೇಕು. ಈ ಉದ್ದೇಶದಿಂದ ಇಡೀ ದೇಶದ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ, ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟ ಜೆಸಿಟಿಯು ಹಾಗೂ ಇತರೆ ದುಡಿಯುವ ಜನರ ಸಂಘಟನೆಗಳು ದೇಶದ 500 ಜಿಲ್ಲೆಗಳಲ್ಲಿ ಎಚ್ಚರಿಕಾ ರ್‍ಯಾಲಿ ನಡೆಸಲು ಕರೆ ನೀಡಿವೆ ಎಂದು ಮಾಹಿತಿ ನೀಡಿದರು.

ದೇಶದ ಎಲ್ಲಾ ಜನಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ನವೆಂಬರ್ 15 ರಿಂದ 25 ರ ವರೆಗೆ ಎಲ್ಲಾ ಹಳ್ಳಿ, ನಗರ, ಪಟ್ಟಣಗಳಲ್ಲಿ ಪ್ರಚಾರಂದೋಲನ ನಡೆಯಲಿದೆ. ನವೆಂಬರ್ 26ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಎಚ್ಚರಿಕಾ ರ್‍ಯಾಲಿಗಳು ನಡೆಯಲಿವೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಬೆಂಗಳೂರು | ಸಿರಿಗೆರೆ ತರಳಬಾಳು ಕೇಂದ್ರದ ವಿರುದ್ಧ ನೈಜ ಹೋರಾಟಗಾರರ ವೇದಿಕೆಯಿಂದ ಲೋಕಾಯುಕ್ತಕ್ಕೆ ದೂರು

ಸರ್ಕಾರಗಳಿಗೆ ಮೂರು ತಿಂಗಳ ಗಡುವು, ಆದರೊಳಗೆ ನಮ್ಮ ಹಕ್ಕೊತ್ತಾಯಗಳಿಗೆ ಸ್ಪಂದಿಸದಿದ್ದರೆ ಕೇಂದ್ರೀಕೃತ ತೀವ್ರ ಸ್ವರೂಪದ ಹೋರಾಟಕ್ಕೆ ಮುಂದಾಗಲಿದ್ದೇವೆ. ಮುಂದೆ ತೀವ್ರವಾದ ಹೋರಾಟಕ್ಕೆ ಈ ದೇಶ ಸಾಕ್ಷಿಯಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ದೇವದಾಸ್, ಚಂದ್ರಶೇಖರ್ ಮೇಟಿ, ಜಗದೀಶ್ ಸೂರ್ಯ, ಉಗ್ರ ನರಸಿಂಹೆಗೌಡ, ಹೊಸಕೋಟೆ ಬಸವರಾಜು, ಪಿ ಮರಂಕಯ್ಯ, ಬಾಲಾಜಿ ರಾವ್, ಬೊಕ್ಕಳ್ಳಿ ನಂಜುಂಡ ಸ್ವಾಮಿ, ಕಾಮ್ರೇಡ್ ಜಗನ್ನಾಥ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X