ಮೈಸೂರು | ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Date:

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್‌ನನ್ನು ಬಂಧಿಸಬೇಕು. ಆತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ನೇತೃತ್ವದಲ್ಲಿ ಹಲವಾರು ಸಂಘಟನೆಗಳ ಮುಖಂಡರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಒಲಂಪಿಕ್ ಪದಕ ವಿಜೇತರು, ವಿಶ್ವ ಚಾಂಪಿಯನ್ ಕುಸ್ತಿ ಪಟುಗಳು ಸೇರಿದಂತೆ ದೇಶದ ಗೌರವಾನ್ವಿತ ಕ್ರೀಡಾಪಟುಗಳು ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದಾರೆ. ಅವರಿಗೆ ಕಿರುಕುಳ ನೀಡಿರುವ ಬಿಜೆಪಿ ಸಂಸದನನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, “ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಸುಪ್ರೀಕೋರ್ಟ್‌ ಮಧ್ಯ ಪ್ರವೇಶ ನಂತರ ಎಫ್ಐಆರ್‌ ದಾಖಲಿಸಲಾಗಿದೆ. ಪೋಕ್ಸೋ ಪ್ರಕರಣ ದಾಖಲಾಗಿದ್ದರೂ, ಇನ್ನೂ ಆತನನ್ನು ಬಂಧಿಸಲಾಗಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆಯಾಗಬೇಕು” ಎಂದು ಒತ್ತಾಯಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಬ್ರಿಜ್‌ ಭೂಷಣ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

“ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾದ ಕೇಂದ್ರ ಸರ್ಕಾರ, ತನ್ನ ಪೊಲೀಸ್ ಪಡೆಗಳನ್ನು ಬಳಸಿ ನ್ಯಾಯಕ್ಕಾಗಿ ಪ್ರತಿಭಟನೆ ನಿರತ ಕ್ರೀಡಾಪಟುಗಳ ಮೇಲೆ ಧಮನಕಾರಿ ನಡುವಳಿಕೆ ತೋರಿಸಿದೆ. ‘ಭೇಟಿ ಬಚಾವೋ; ಭೇಟಿ ಪಡಾವೋ’ ಎಂದು ಪ್ರಚಾರ ಮಾಡುವ ಪ್ರಧಾನಿ ಮೋದಿ ಅವರ ಸರ್ಕಾರ ಆರೋಪಿ ಬಿಜೆಪಿ ಸಂಸದನ ರಕ್ಷಣೆಗೆ ನಿಂತಿರುವುದು ನಾಚಿಕೇಡಿನ ಸಂಗತಿ” ಎಂದು ಕಿಡಿಕಾರಿದ್ದಾರೆ.

ಪ್ರತಿಭಟನೆಯಲ್ಲಿ ಹೊಸಕೋಟೆ ಬಸವರಾಜ್, ಪ್ರೊ ಭಗವಾನ್, ಪತ್ರಕರ್ತರಾದ ಟಿ ಗುರುರಾಜ್, ಪುನೀತ್ ಎಸ್, ಬಸವರಾಜು ಹೆಚ್ ಎಂ, ಬೆಳ್ಳಾಳೆ ಬೆಟ್ಟೆಗೌಡ, ಪಿ ಮರಂಕಯ್ಯ, ಮಹಾದೇವ ನಾಯಕ, ಬೆಂಕಿಪುರ ಚಿಕ್ಕಣ್ಣ, ವೆಂ ವನಜ,ಸೀಮಾ,ನೀತು,ಶಂಭುಲಿಂಗ ಸ್ವಾಮಿ, ಮಂಡಕಳ್ಳಿ ಮಹೇಶ್ ಸೇರಿದಂತೆ ಹಲವು ಹೋರಾಟಗಾರರು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...