ಮೈಸೂರು | ಸಾರ್ವಜನಿಕರ ಕುಂದು ಕೊರತೆ ಸಭೆ; ಸಮಸ್ಯೆ ಪರಿಹಾರಕ್ಕೆ ಮಾಜಿ ಶಾಸಕ ಡಾ. ಯತೀಂದ್ರ ಭರವಸೆ

Date:

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಏಚಗಳ್ಳಿ ಗ್ರಾಮದಲ್ಲಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿಯ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯನವರು ಗ್ರಾಮದಲ್ಲಿ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆ ಸಮಸ್ಯೆಗಳನ್ನು ಆಲಿಸಿದರು.

- Advertisement -

ಸಭೆಯಲ್ಲಿ “ಭಾಗ್ಯ ಜ್ಯೋತಿಯ ಕರೆಂಟ್ ಬಿಲ್‌ ಬಾಕಿ ಇದೆಯೆಂದು ಕೆಇಬಿ ಅಧಿಕಾರಿಗಳು ನಮ್ಮ ಮನೆಯ ವಿದ್ಯುತ್‌ ಸಂಪರ್ಕ ಕಡಿತ ಮಾಡುತ್ತಿದ್ದಾರೆ. ದಯಮಾಡಿ ಭಾಗ್ಯ ಜ್ಯೋತಿಯ ಹಳೇ ಬಾಕಿಯನ್ನು ಸರ್ಕಾರದಿಂದ ಮನ್ನಾ ಮಾಡಿಸಿ, ವಿದ್ಯುತ್‌ ಸಂಪರ್ಕ ಕಡಿತಗೊಳಿಸದಂತೆ ಕೆಇಬಿ ಅಧಿಕಾರಿಗಳಿಗೆ ಸೂಚನೆ ನೀಡಬೇಕು” ಎಂದು ಸಾರ್ವಜನಿಕರು ಹಾಗೂ ಭಾಗ್ಯ ಜ್ಯೋತಿಯ ಫಲಾನುಭವಿಗಳು ಯತೀಂದ್ರ ಅವರಲ್ಲಿ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮನವಿ ಸ್ವೀಕರಿಸಿದ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯನವರು ಸ್ಥಳದಲ್ಲಿ ಇದ್ದ ಕೆಇಬಿ ಅಧಿಕಾರಿ ಜೊತೆ ಮಾತನಾಡಿ, “ಈಗಾಗಲೇ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೃಹ ಜ್ಯೋತಿ ಯೋಜನೆಯಲ್ಲಿ ಎಲ್ಲರಿಗೂ ಉಚಿತ ವಿದ್ಯುತ್ ನೀಡಲಾಗುತ್ತಿದ್ದು‌, ಭಾಗ್ಯಜ್ಯೋತಿಯ ಫಲಾನುಭವಿಗಳು ಹಳೆಯ ವಿದ್ಯುತ್ ಬಿಲ್ ಪಾವತಿಸಿಲ್ಲವೆಂದು ಅವರ ಮನೆಯ ವಿದ್ಯುತ್‌ ಸಂಪರ್ಕ ಕಡಿತಗೊಳಿಸಬೇಡಿ. ಈ ಬಗ್ಗೆ ಸಂಬಂಧಪಟ್ಟ ಮಂತ್ರಿಗಳು ಮತ್ತು ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಒಂದು ವೇಳೆ ಮತ್ತೆ ನೀವು ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದರೆ ನಿಮ್ಮ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಅನಿಷ್ಠ ಪದ್ಧತಿಗಳ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ

“ಗ್ರಾಮದಲ್ಲಿ ಹಲವಾರು ಸಮಸ್ಯೆಗಳನ್ನು ಪರಿಹರಿಸಿ ಮೂಲ ಸೌಲಭ್ಯಗಳನ್ನು ದೊರಕಿಸಿ ಕೊಡುವಂತೆ ನನ್ನ ಗಮನಕ್ಕೆ ತಂದಿದ್ದೀರಿ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಜೊತೆ ಮಾತನಾಡಿ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಕೆಪಿಸಿಸಿ ಕಾರ್ಯದರ್ಶಿ ಎಸ್ ಸಿ ಬಸವರಾಜು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಬಿ ಎಂ ರಾಮು‌, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ರೇವಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹದೇವಮ್ಮ, ಕಾಂಗ್ರೆಸ್ ಮುಖಂಡ ದಕ್ಷಿಣ ಮೂರ್ತಿ ದೊರೆಸ್ವಾಮಿ, ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೈ ಕೆ ಮಹದೇವಪ್ಪ, ತಾಂಡವಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಬಿ ಶಿವಣ್ಣ, ಮಾಜಿ ಅಧ್ಯಕ್ಷ ಕಾಮರಾಜು ಬಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...