ಮೈಸೂರು | ಕೇಂದ್ರ ಸರ್ಕಾರವು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಕಾಪಿ ಮಾಡುತ್ತಿದೆ:‌ ಪುಷ್ಪಾ ಅಮರನಾಥ್ ಆರೋಪ

Date:

Advertisements

ಕೇಂದ್ರ ಸರ್ಕಾರವು ನಮ್ಮ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕಾಪಿ ಮಾಡುತ್ತಿದೆ ಎಂದು ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು.

ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, “ಎರಡು ಅವಧಿಯಿಂದಲೂ ಅಧಿಕಾರದಲ್ಲಿದ್ದರು ಜನರಿಗೆ ಯಾವ ಅನುಕೂಲವನ್ನೂ ಬಿಜೆಪಿ ಸರ್ಕಾರ ಕಲ್ಪಿಸಲಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನೂ ತಡೆಯಲಿಲ್ಲ. ಇಂಧನ ಬೆಲೆಯೂ ಏರಿಕೆಯಾಗುತ್ತಲೇ ಹೋಯಿತು. ಇದೀಗ ಮೋದಿ ಗ್ಯಾರಂಟಿಗಳ ಹೆಸರಿನಲ್ಲಿ ಮತ ಕೇಳುತ್ತಿದೆ. ಕೇಂದ್ರ ಸರ್ಕಾರ ಕೇವಲ ಸುಳ್ಳಿನ‌ ಗ್ಯಾರಂಟಿ ಕೊಡುತ್ತಿದೆ” ಎಂದು ಟೀಕಿಸಿದರು.

“ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆ, ಅನುದಾನ ಹಾಗೂ ವಿವಿಧ ಪರಿಹಾರದಲ್ಲೂ ಕೇಂದ್ರ ಅನ್ಯಾಯ ಮಾಡಿದೆ. ಪ್ರಧಾನಿ ಮೋದಿ ಭರವಸೆಗಳು ಕೇವಲ ಭರವಸೆಗಳಾಗಿಯೇ ಉಳಿದಿವೆ. ನಮ್ಮ‌ ರಾಜ್ಯಕ್ಕೆ ಬರಬೇಕಿದ್ದ ಹಣವನ್ನು ಬೇರೆ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಜನರು, ಆ ಪಕ್ಷದ ನಾಯಕರ ಭರವಸೆಗಳನ್ನು ನಂಬಬಾರದು” ಎಂದು ಕೋರಿದರು.

“ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಪಂಚ ಗ್ಯಾರಂಟಿಗಳನ್ನೂ ಜಾರಿಗೆ ತಂದಿದೆ. ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದ್ದು, ಇದಕ್ಕೆ ಶಕ್ತಿ ತುಂಬಬೇಕು” ಎಂದು ಮನವಿ ಮಾಡಿದರು.

“ಬಿಜೆಪಿಯಲ್ಲಿ ಮಹಿಳೆಯರನ್ನು ಕಡೆಗಣಿಸಲಾಗುತ್ತಿತ್ತು. ಮಹಿಳಾ ಮೀಸಲಾತಿ ಆದಷ್ಟು ಬೇಗ ಜಾರಿಯಾಗಬೇಕು. ಅದು ಜಾರಿಯಾಗಿದ್ದರೆ ನಮ್ಮಂತಹ ಆಕಾಂಕ್ಷಿಗಳಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೇ ಟಿಕೆಟ್ ಸಿಗುತ್ತಿತ್ತು.  ಈಗಲೂ ನಾನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ” ಎಂದರು.

“ಮಹಿಳೆಯರ ಮೇಲಿನ ತಾರತಮ್ಯ ನಿಲ್ಲಬೇಕೆಂದರೆ, ಅವರಿಗೆ ಎಲ್ಲ ಕ್ಷೇತ್ರಗಳಲ್ಲೂ ಶೇ.50ರಷ್ಟು ಮೀಸಲಾತಿ ಜಾರಿಗೆ ಬರಬೇಕು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಐಸಿಸಿಯಿಂದ ನೀಡಲಾಗಿರುವ ‘ನಾರಿ ನ್ಯಾಯ’ ಐದು ಗ್ಯಾರಂಟಿ ಕಾರ್ಯಕ್ರಮಗಳು ಮಹಿಳಾ ಸ್ವಾವಲಂಬನೆಗೆ ಮತ್ತು ರಕ್ಷಣೆಗೆ ಒತ್ತು ನೀಡಲಿವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಾಬಾ ಸಾಹೇಬರು ಕೇವಲ ದಲಿತರ ಸ್ವತ್ತಲ್ಲ: ನಾಗಣ್ಣ

“10 ವರ್ಷಗಳ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ಒಮ್ಮೆಯೂ ಪತ್ರಿಕಾಗೋಷ್ಟಿ ನಡೆಸಲಿಲ್ಲ. ಪ್ರಶ್ನೆಗಳನ್ನು ಎದುರಿಸಲಾಗದೇ ಮನ್ ಕಿ ಬಾತ್‌ನಲ್ಲಿ ಮಾತನಾಡಿದರು. ಇದೀಗ ಚುನಾವಣಾ ಬಾಂಡ್ ಹಗರಣ ಬೆಳಕಿಗೆ ಬಂದಿದೆ, ಇಂಥದ್ದಕ್ಕೆ ಯಾರು ಉತ್ತರಿಸಬೇಕು” ಎಂದು ಪ್ರಶ್ನಿಸಿದರು.

ಪಕ್ಷದ ನಾಯಕಿಯರಾದ ಪುಷ್ಪಾಲತಾ ಚಿಕ್ಕಣ್ಣ, ಮೋದಾಮಣಿ, ಪುಷ್ಪವಲ್ಲಿ, ರಾಧಾಮಣಿ, ಸುಜಾತಾರಾವ್, ಲತಾ ಮೋಹನ್, ಸುಶೀಲಾ ಮರೀಗೌಡ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X