ಮೈಸೂರು | ರೇಡಿಯಾಲಜಿ ಸೌಲಭ್ಯಗಳು ಬಡವರಿಗೆ ನಿಲುಕಬೇಕು: ಡಾ. ಬಿ. ದಿನೇಶ್‌

Date:

ರೇಡಿಯಾಲಜಿ ಕ್ಷೇತ್ರದಲ್ಲಿ ಆಗಿರುವ ತಾಂತ್ರಿಕ ಪ್ರಗತಿಯ ಫಲ ಬಡ ಹಾಗೂ ಮಧ್ಯಮ ವರ್ಗದ ಜನರಿಗೂ ಸಮಾನವಾಗಿ ದೊರೆಯಬೇಕಿದೆ ಎಂದು ಡಾ. ಬಿ. ದಿನೇಶ್‌ ಅಭಿಪ್ರಾಯಪಟ್ಟರು.

- Advertisement -

ಭಾರತೀಯ ರೇಡಿಯಾಲಜಿ ಮತ್ತು ಇಮೇಜಿಂಗ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ‘ಡಾ. ಜ್ಞಾನ್‌ ಪಿ. ಲಾಲ್‌ ಸಿಎಂಇ 2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಆಧುನಿಕ ವೈದ್ಯಕೀಯ ಕ್ಷೇತ್ರದಲ್ಲಿ ರೇಡಿಯಾಲಜಿಯು ವೈದ್ಯರ ಕಣ್ಣುಗಳಂತೆ ಕಾರ್ಯನಿರ್ವಹಿಸುತ್ತಿದ್ದು, ಚಿಕಿತ್ಸೆಗಳನ್ನು ಹೆಚ್ಚು ಸುರಕ್ಷಿತ ಹಾಗೂ ಪರಿಣಾಮಕಾರಿಯಾಗಿಸಿದೆ ಎಂದು ಹೇಳಿದರು. ಕ್ಷ-ಕಿರಣ, ಸಿಟಿ ಸ್ಕ್ಯಾನ್‌ ಮತ್ತು ಎಂಆರ್‌ಐ ತಂತ್ರಜ್ಞಾನಗಳ ಮೂಲಕ ಮೂಳೆ ಮುರಿತ, ಗೆಡ್ಡೆಗಳು ಹಾಗೂ ಆಂತರಿಕ ಗಾಯಗಳನ್ನು ಅತ್ಯಂತ ನಿಖರವಾಗಿ ಪತ್ತೆಹಚ್ಚಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿದೆ ಎಂದರು.

ಆದರೆ ಈ ಸೇವೆಗಳ ವೆಚ್ಚ ದುಬಾರಿಯಾಗಿರುವುದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಲಭ್ಯವಾಗುವಂತೆ ಸರ್ಕಾರ ಮತ್ತು ಆರೋಗ್ಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.

ವೈದ್ಯಕೀಯ ಕ್ಷೇತ್ರವು ಕೃತಕ ಬುದ್ಧಿಮತ್ತೆ ಮತ್ತು ಅತ್ಯಾಧುನಿಕ ಇಮೇಜಿಂಗ್‌ ತಂತ್ರಜ್ಞಾನಗಳ ಯುಗವನ್ನು ಪ್ರವೇಶಿಸಿರುವುದಾಗಿ ಹೇಳಿದ ಅವರು, ಗ್ರಾಮೀಣ ಹಾಗೂ ಗಡಿ ಭಾಗಗಳ ಜನರಿಗೆ ಇನ್ನೂ ಸಮರ್ಪಕ ರೇಡಿಯಾಲಜಿ ಸೌಲಭ್ಯಗಳು ತಲುಪಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಈ ಸೇವೆಗಳು ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸಬೇಕಿದೆ ಎಂದರು.

ರೇಡಿಯಾಲಜಿ ತಂತ್ರಜ್ಞಾನದಿಂದ ನಿಖರವಾದ ರೋಗ ಪತ್ತೆ, ಶಸ್ತ್ರಚಿಕಿತ್ಸೆಯ ಅಗತ್ಯತೆಯನ್ನು ಕಡಿಮೆ ಮಾಡುವುದು, ಸಕಾಲದಲ್ಲಿ ಚಿಕಿತ್ಸೆ ದೊರಕಿಸುವುದು ಹಾಗೂ ಚಿಕಿತ್ಸೆಯ ಪರಿಣಾಮಕಾರಿತ್ವವನ್ನು ಅಳೆಯುವುದು ಸಾಧ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರೇಡಿಯಾಲಜಿ ವೈದ್ಯಕೀಯ ಕ್ಷೇತ್ರದ ಪ್ರಮುಖ ವಿಭಾಗವಾಗಿ ಬೆಳೆಯಲಿದೆ ಎಂದು ಹೇಳಿದರು.

ಭಾರತದಲ್ಲಿ ಪ್ರಸ್ತುತ ಸುಮಾರು 20 ಸಾವಿರ ನೋಂದಾಯಿತ ರೇಡಿಯಾಲಜಿಸ್ಟ್‌ಗಳಿದ್ದು, 150 ಕೋಟಿಗೂ ಅಧಿಕ ಜನಸಂಖ್ಯೆಗೆ ಇದು ಸಾಕಾಗುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು. ಕಾರ್ಡಿಯಾಲಜಿ, ಗ್ಯಾಸ್ಟ್ರೋಎಂಟರಾಲಜಿ ಸೇರಿದಂತೆ ಹಲವು ವಿಶೇಷ ವೈದ್ಯಕೀಯ ವಿಭಾಗಗಳಿಗೆ ಇಮೇಜಿಂಗ್‌ ಬೆಂಬಲ ಅತ್ಯಗತ್ಯವಾಗಿದೆ ಎಂದರು.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಪ್ರಸ್ತುತ 8 ರೇಡಿಯಾಲಜಿಸ್ಟ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಆಧುನಿಕ ಎಂಆರ್‌ಐ, ಸಿಟಿ ಹಾಗೂ ಅಲ್ಟ್ರಾಸೌಂಡ್‌ ಸೌಲಭ್ಯಗಳಿವೆ ಎಂದು ಮಾಹಿತಿ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ ಪ್ರತಿದಿನ ಸುಮಾರು 2 ಸಾವಿರ ರೋಗಿಗಳು ಆಸ್ಪತ್ರೆಗೆ ಆಗಮಿಸುತ್ತಿದ್ದು, ಪ್ರತಿದಿನ 30 ಓಪನ್‌ ಹಾರ್ಟ್‌ ಶಸ್ತ್ರಚಿಕಿತ್ಸೆಗಳು ಹಾಗೂ 200ಕ್ಕೂ ಹೆಚ್ಚು ಕ್ಯಾಥೆಟರ್‌ ಆಧಾರಿತ ಚಿಕಿತ್ಸೆಗಳು ನಡೆಯುತ್ತಿವೆ ಎಂದು ಹೇಳಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಶೋಷಿತರ ಗಟ್ಟಿ ಧ್ವನಿ ಎನ್ ರಾಚಯ್ಯ ‘ಸಮಾನತೆಯ ಸಮಾಜʼದ ಕನಸುಗಾರ….

ಕಾರ್ಯಕ್ರಮದಲ್ಲಿ ಉಮೇಶ್‌ ಕೃಷ್ಣಮೂರ್ತಿ, ಅಮರನಾಥ್‌, ಸೂರ್‌ ಕಾಳೆ, ಸಿ.ಪಿ. ನಂಜರಾಜ್‌, ಎಂವಿಕೆ ರಾವ್‌, ನಟೇಶ ಗುಪ್ತಾ, ವಿಜಯ ಸಾರಥಿ ಹಾಗೂ ಶಿವಪ್ರಸಾದ್‌ ಸೇರಿದಂತೆ ಹಲವು ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...