ಮೈಸೂರು | ರಾಮಾಯಣ ಭಾರತೀಯರ ಜೀವನ ಚರಿತ್ರೆ, ಸಂಸ್ಕೃತಿ ಪ್ರತಿಬಿಂಬಿಸುವ ಮಹಾಕಾವ್ಯ: ಸಚಿವ ಮಹದೇವಪ್ಪ

Date:

Advertisements

ರಾಮಾಯಣ ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ ಎಂದು ಸಚಿವ ಡಾ ಎಚ್‌ ಸಿ ಮಹದೇವಪ್ಪ ತಿಳಿಸಿದರು.

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಮೈಸೂರು ನಗರ ಮತ್ತು ತಾಲೂಕು ನಾಯಕ ಜನಾಂಗದ ಸಂಘಗಳ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕಲಾಮಂದಿರದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಈ ಬಾರಿ ಮೈಸೂರಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರತಿಮೆ ನಿರ್ಮಿಸಲು ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಿರುವುದು ಸಂತಸವಾಗಿದೆ. ವಾಲ್ಮೀಕಿ ಕವಿ ಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ” ಎಂದರು.

Advertisements

“ರಾಮಾಯಣ, ಮಹಾಭಾರತದಂತಹ ಮಹಾಕಾವ್ಯಗಳು ಭಾರತೀಯರ ಜೀವನಚರಿತ್ರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದ್ದು, ಪ್ರಪಂಚದಲ್ಲಿರುವ ಎಲ್ಲ ದೇಶಗಳಲ್ಲೂ ಮಹಾಕಾವ್ಯಗಳು ಸೃಷ್ಟಿಯಾಗಿಲ್ಲ. ಗ್ರೀಕ್, ರೋಮ್ ಬಿಟ್ಟರೆ ನಮ್ಮ ದೇಶದಲ್ಲಿ ಮಾತ್ರ ಮಹಾಕಾವ್ಯಗಳು ಕಾಣಿಸಿಕೊಳ್ಳಲು ಸಾಧ್ಯ. ರಾಮಾಯಣ, ಮಹಾಭಾರತ ಕಾವ್ಯಗಳು ಕಟ್ಟಿಕೊಡುವ ದೃಷ್ಟಿಕೋನಗಳೇ ಬೇರೆ. ಈ ಮಹಾಕಾವ್ಯಗಳು ಸಾರ್ವಕಾಲಿಕ ಮೌಲ್ಯಗಳನ್ನು ಪ್ರತಿನಿಧಿಸುವ ಕೃತಿಗಳಾಗಿವೆ” ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿರುವಂತೆ ನಮ್ಮ ಸಮಸ್ಯೆಗಳ ಬೀಗದ ಕೈ ಇರುವುದು ರಾಜಕೀಯದಲ್ಲಿ. ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಇಂದು ಶೇ.7ರಷ್ಟು ಜನರಿಗೆ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ₹9,000 ಕೋಟಿಯನ್ನು ಮೀಸಲಿಡಲಾಗಿದೆ” ಎಂದರು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಮಾತನಾಡಿ, “ಬೇಡರ ಕುಲಕ್ಕೆ ಸೇರಿದ ಮಹರ್ಷಿ ವಾಲ್ಮೀಕಿ ರಾಮಾಯಣ ಎಂಬ ಉತ್ಕೃಷ್ಟ ಮಹಾಕಾವ್ಯವನ್ನೇ ಬರೆದರು. ರಾಮನಾಮ ಉಚ್ಚಾರಣೆಯೇ ಬಾರದ ವಾಲ್ಮೀಕಿಯವರು ರಾಮಾಯಣವನ್ನೇ ರಚಿಸಿದರು. ರಾಮಾಯಣದಲ್ಲಿ 24,253 ಶ್ಲೋಕಗಳಿದ್ದು, ಏಳು ಕಾಂಡಗಳಿರುವ ಈ ಕೃತಿಯು ಇಡೀ ಪ್ರಪಂಚಕ್ಕೆ ಅನ್ವಯವಾಗುತ್ತದೆ. ಸಂಸ್ಕೃತದಲ್ಲಿ ರಚಿಸಲಾಗಿರುವ ರಾಮಾಯಣ ಮಹಾಕಾವ್ಯವು ಅನೇಕ ಶ್ಲೋಕಗಳನ್ನು ಹೊಂದಿದೆ” ಎಂದರು.

“ಎಲ್ಲಿಯವರೆಗೆ ಭೂಮಿಯಲ್ಲಿ ಪರ್ವತ, ಸಮುದ್ರ, ನದಿಗಳಿರುತ್ತವೆಯೋ ಅಲ್ಲಿಯವರೆಗೂ ರಾಮಾಯಣ ಕಾವ್ಯ ಲೋಕದಲ್ಲಿ ಪ್ರಚಲಿತದಲ್ಲಿರುತ್ತದೆ. ಆದ್ದರಿಂದ ಸೂರ್ಯಚಂದ್ರರಿರುವರೆಗೂ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಅಮರಕಾವ್ಯವಾಗಿರುತ್ತದೆ ಮತ್ತು ಇದನ್ನು ರಚಿಸಿರುವ ಮಹರ್ಷಿ ವಾಲ್ಮೀಕಿಯು ಅಮರ ಕವಿಯಾಗಿರುತ್ತಾರೆ” ಎಂದರು.

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಮತ್ತು ಪ್ರಾಧ್ಯಾಪಕಿ ಎನ್ ಕೆ ಲೋಲಾಕ್ಷಿ ಮಾತನಾಡಿ, “ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೋಭವ, ಪಿತೃದೇವೋಭವ, ಆಚಾರ್ಯದೇವೋಭವ, ಅತಿಥಿ ದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ. ಇಂತಹ ಅನನ್ಯವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯನ್ನು ‘ಕವಿಗಳ ಕವಿ’ ಎಂದು ಮಹಾಕವಿ ಕಾಳಿದಾಸರು ಗೌರವಿಸಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ವರದಿಯ ಬಳಿಕ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಿದ ಸಮಾಜ ಕಲ್ಯಾಣ ಇಲಾಖೆ

ಕಾರ್ಯಕ್ರಮದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಹರೀಶ್ ಗೌಡ, ವಿಧಾನ ಪರಿಷತ್ ಶಾಸಕ ಸಿ ಎನ್ ಮಂಜೇಗೌಡ, ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯತ್ರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎನ್, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಧಿಕಾರಿ ಎಂ ಕೆ ಮಲ್ಲೇಶ್, ಸಮಾಜ ಕಲ್ಯಾಣ ಇಲಾಖೆಯೆ ಜಂಟಿ ನಿರ್ದೇಶಕ ಬಿ ರಂಗೇಗೌಡ, ಸಮಾಜದ ಮುಖಂಡರುಗಳು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X