ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಹೊನ್ನೂರು ಗ್ರಾಮದ ಸುರೇಶ್(40), ಪತ್ನಿ ಪಲ್ಲವಿ (28) ಜಮೀನಿನಲ್ಲಿರುವ ಹಳೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕೊಪ್ಪ ನಿವಾಸಿ ಜಯಣ್ಣ ಅವರ ಮಗನಾದ ಸುರೇಶ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಸ್ಥಳೀಯರ ಹೇಳಿಕೆಯ ಪ್ರಕಾರ ರಿಯಲ್ ಎಸ್ಟೇಟ್ ಮಾಫಿಯಾ ಒತ್ತಡ, ಉದ್ಯಮದಲ್ಲಿ ನಷ್ಟ,ಸಾಲಗಾರರ ಕಿರುಕುಳ ಆತ್ಮಹತ್ಯೆಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗುತ್ತಿದೆ.
ಈ ಸಂಬಂಧವಾಗಿ ಸುರೇಶ್ ಡೆತ್ ನೋಟ್ ಬರೆದಿಟ್ಟಿದ್ದು, ಸಾವಿಗೆ ಕೆಲವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರ ತನಿಖೆಯಿಂದ ಘಟನೆಗೆ ನಿಜವಾದ ಕಾರಣ ತಿಳಿದುಬರಬೇಕಿದೆ.
ಇದನ್ನು ಓದಿದ್ದೀರಾ? ಹಾವೇರಿ | ರಸ್ತೆ ಬದಿಯ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್‌ಗಳು ಪತ್ತೆ
ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದು, ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹಗಳನ್ನು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.
