ಮೈಸೂರು | ಚುನಾವಣಾ ಆಯೋಗದ ನಡೆ ಖಂಡಿಸಿ ಕಪ್ಪು ತೋಳುಪಟ್ಟಿ ಧರಿಸಿ ಮೌನ ಪ್ರತಿಭಟನೆ

Date:

ಜನವಿರೋಧಿ ಎಂದು ಆರೋಪಿಸಲಾಗುತ್ತಿರುವ ಎಸ್‌ಐಆರ್ (Special Intensive Revision) ಪ್ರಕ್ರಿಯೆಯನ್ನು ವಿರೋಧಿಸಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ನಾಗರಿಕ ಸಮಾಜದ ವಿವಿಧ ಸಂಘಟನೆಗಳ ಸದಸ್ಯರು ಕಪ್ಪು ಧ್ವಜ ಹಾಗೂ ಕಪ್ಪು ತೋಳುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನಾಕಾರರು ಕಪ್ಪು ತೋಳುಪಟ್ಟಿ ಧರಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಹುಲ್ಲುಹಾಸಿನ ಮೇಲೆ ಮೌನ ಧರಣಿ ನಡೆಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಜ್ಞಾಪಕ ಪತ್ರ ಸಲ್ಲಿಸಿದ ಪ್ರತಿಭಟನಾಕಾರರು, ಎಸ್‌ಐಆರ್ ಪ್ರಕ್ರಿಯೆಯನ್ನು ಪ್ರಜಾತಾಂತ್ರಿಕಗೊಳಿಸುವ ಸಂಬಂಧ ನಾಗರಿಕ ಸಮಾಜ ಮುಂದಿಟ್ಟಿರುವ ನಾಲ್ಕು ಪ್ರಮುಖ ಹಕ್ಕೊತ್ತಾಯಗಳಿಗೆ ಸ್ಪಂದಿಸಿ ಉತ್ತರ ನೀಡುವಂತೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಜ್ಞಾಪಕ ಪತ್ರದಲ್ಲಿ, ಮೇ 30ರಂದು ರಾಜ್ಯದ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಇದೇ ಬೇಡಿಕೆಗಳೊಂದಿಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿತ್ತು. ಅದರ ನಂತರವೂ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಲಾಯಿತು.

ಅದೇ ರೀತಿ, ಎಸ್‌ಐಆರ್ ವಿರೋಧಿ ಒಕ್ಕೂಟದ ವತಿಯಿಂದ ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿರೋಧ ಸಮಾವೇಶಕ್ಕೆ ಚುನಾವಣಾ ಆಯೋಗದ ಅಧಿಕಾರಿಗಳನ್ನು ಆಹ್ವಾನಿಸಿ, ನಾಗರಿಕ ಸಮಾಜದ ಪ್ರಶ್ನೆಗಳಿಗೆ ಉತ್ತರಿಸುವಂತೆ ಮನವಿ ಮಾಡಲಾಗಿತ್ತು. ರಾಜ್ಯದ ಹೆಸರಾಂತ ಸಾಹಿತಿಗಳು, ಚಿಂತಕರು, ಕಲಾವಿದರು ಹಾಗೂ ರಂಗಕರ್ಮಿಗಳು ಕೂಡ ಬಹಿರಂಗ ಪತ್ರ ಬರೆದು ಆಯೋಗಕ್ಕೆ ಮನವಿ ಸಲ್ಲಿಸಿದ್ದರು. ರಾಜ್ಯ ಸರ್ಕಾರದಿಂದ ಕಳುಹಿಸಲಾದ ಪತ್ರಕ್ಕೂ ಸಹ ಆಯೋಗ ಉತ್ತರ ನೀಡಿಲ್ಲ ಎಂಬುದು ತಿಳಿದು ಬಂದಿದೆ ಎಂದು ಪ್ರತಿಭಟನಾಕಾರರು ದೂರಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಸಂಸ್ಥೆಗಳು ಜನರ ಪ್ರಶ್ನೆಗಳಿಗೆ ಉತ್ತರಿಸುವುದು ಮೂಲಭೂತ ಕರ್ತವ್ಯವಾಗಿದೆ. ಆದರೆ ಚುನಾವಣಾ ಆಯೋಗ ಯಾವುದೇ ಮನವಿ ಅಥವಾ ಪ್ರಶ್ನೆಗೆ ಸ್ಪಂದಿಸದೆ ಮೌನ ವಹಿಸಿರುವುದು ಪ್ರಜಾತಾಂತ್ರಿಕ ಮೌಲ್ಯಗಳಿಗೆ ವಿರುದ್ಧವಾಗಿದೆ. ಆಯೋಗದ ಈ ನಡೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ತರುತ್ತಿದೆ ಎಂದು ಜ್ಞಾಪಕ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಜೂನ್ 30ರಂದು ಕಪ್ಪು ಧ್ವಜ, ಕಪ್ಪು ತೋಳುಪಟ್ಟಿ ಹಾಗೂ ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಮೌನ ಪ್ರತಿಭಟನೆ ನಡೆಸಲಾಗುತ್ತಿದೆ. ಇದು ಚುನಾವಣಾ ಆಯೋಗದ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸುವ ಹಾಗೂ ಸಂವಿಧಾನ ವಿರೋಧಿ ಎಂದು ಆರೋಪಿಸಲಾಗುತ್ತಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ವಿರೋಧಿಸುವ ಸಾಂಕೇತಿಕ ಪ್ರತಿಭಟನೆಯಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಇನ್ನಾದರೂ ನಾಗರಿಕ ಸಮಾಜದ ಹಕ್ಕೊತ್ತಾಯಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಚುನಾವಣಾ ಆಯೋಗ ಇದೇ ಧೋರಣೆಯನ್ನು ಮುಂದುವರಿಸಿ, ಲಾಜಿಕಲ್ ಡಿಪೆನ್ಸಿ ಸಾಫ್ಟ್‌ವೇರ್ ಬಳಸಿ ಲಕ್ಷಾಂತರ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವ ಕ್ರಮ ಕೈಗೊಂಡರೆ ಹಾಗೂ ಅಪೀಲು ಸಲ್ಲಿಸಲು ಸಮರ್ಪಕ ಅವಕಾಶ ನೀಡದಿದ್ದರೆ ರಾಜ್ಯಾದ್ಯಂತ ಬೃಹತ್ ಜನಾಂದೋಲನ ರೂಪುಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ?ಮಂಡ್ಯ | ಚುನಾವಣಾ ಆಯೋಗದ ನಡೆ ಖಂಡಿಸಿ ನಾಗರಿಕ ಸಮಾಜದ ಆಕ್ರೋಶ

ಪ್ರತಿಭಟನೆಯಲ್ಲಿ ಪಿಯುಸಿಎಲ್ ಅಧ್ಯಕ್ಷ ಕಮಲ್ ಗೋಪಿನಾಥ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ಡಾ. ರತಿ ರಾವ್, ಒಂದಾಗೋಣ ಕೈಜೋಡಿಸಿ ಸಂಘಟನೆಯ ಡಾ. ಮ.ಪು. ಪೂರ್ಣಾನಂದ, ಪ್ರೊ. ಕಾಳಚೆನ್ನೇಗೌಡ, ಪ್ರೊ. ಮಹೇಶ್ ದಳಪತಿ, ಜೀವಿಕ ಸಂಘಟನೆಯ ಬಸವರಾಜು, ಉಮೇಶ್, ರೂಪರಾವ್, ಭೂಮಿಗೌಡ, ಕಾಂಗ್ರೆಸ್ ಮುಖಂಡ ಎಸ್.ಎ.ಬಿ. ಅಬ್ದುಲ್, ಸಿಪಿಐ(ಎಂಎಲ್) ಮುಖಂಡರಾದ ಜವರಯ್ಯ, ವರದಯ್ಯ, ಕುಪ್ಪೆ ನಾಗರಾಜು, ಪುಟ್ಟಮಾದಯ್ಯ, ದೊಡ್ಡಣ್ಣ ಸೇರಿದಂತೆ ವಿವಿಧ ನಾಗರಿಕ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...