ಮೈಸೂರು | ಸಮಾಜಘಾತುಕ ಚಟುವಟಿಕೆ ತಡೆಗೆ ರೂಟ್ ಮಾರ್ಚ್‌

Date:

ಲೋಕಸಭಾ ಚುನಾವಣೆ ಮತ್ತು ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಮಾಜಘಾತುಕ ಚಟುವಟಿಕೆಗಳು ನಡೆಯದಂತೆ ತಡೆಯಲು ಮತ್ತು ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ತುಂಬಲು ಬಿಗಿ ಪೊಲೀಸ್ ಪಡೆ ಶುಕ್ರವಾರ ಮೈಸೂರು ನಗರದ ಪ್ರಮುಖ ಬೀದಿಗಳಲ್ಲಿ ರೂಟ್ ಮಾರ್ಚ್‌ ನಡೆಸಿತು.

ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎಂ ಮುತ್ತುರಾಜ ಅವರ ನೇತೃತ್ವದಲ್ಲಿ ನರಸಿಂಹರಾಜ ಉಪವಿಭಾಗದ ಪೊಲೀಸ್ ಅಧಿಕಾರಿಗಳು ಮೈಸೂರಿನ ಈಶಾನ್ಯ ಭಾಗದಲ್ಲಿ ತಮ್ಮ ಸಂಪೂರ್ಣ ಪಡೆಗಳ ಮೆರವಣಿಗೆ ನಡೆಸಿದ್ದು, ಮೆರವಣಿಗೆಯ ಮೇಲ್ವಿಚಾರಣೆಯನ್ನು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ವಹಿಸಿದ್ದರು.

ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಡಿವಿಎನ್ ವೃತ್ತದಿಂದ ನಾಯ್ಡು ನಗರ ಬಸ್ ನಿಲ್ದಾಣದವರೆಗೆ ಎಸಿಪಿ ಸುಧಾಕರ್, ಇನ್ಸ್‌ಪೆಕ್ಟರ್‌, ಸಬ್ಇನ್ಸ್‌ಪೆಕ್ಟರ್‌, ಸಹಾಯಕ ಸಬ್ ಇನ್ಸ್‌ಪೆಕ್ಟರ್‌, ಹೆಡ್ ಕಾನ್ಸ್‌ಟೆಬಲ್‌ ಮತ್ತು ಕಾನ್ಸ್‌ಟೆಬಲ್‌ಗಳನ್ನೊಳಗೊಂಡ ಪೊಲೀಸ್ ತಂಡವು ಬೀದಿಗಳಲ್ಲಿ ಮೆರವಣಿಗೆ ನಡೆಸಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಗದಗ | ಅಕ್ರಮವಾಗಿ ಮರಳು ಗಣಿಗಾರಿಕೆ; ಕ್ರಮ ಕೈಗೊಳ್ಳದ ಅಧಿಕಾರಿಗಳು

ಲೋಕಸಭಾ ಚುನಾವಣೆ ಮತ್ತು ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಶಾಂತಿ ಕಾಪಾಡಲು ಮತ್ತು ಕಾನೂನು ಜಾರಿ ಸಂಸ್ಥೆಯೊಂದಿಗೆ ಸಹಕರಿಸುವಂತೆ ಸಾರ್ವಜನಿಕರನ್ನು ಒತ್ತಾಯಿಸಲು ರೂಟ್ ಮಾರ್ಚ್‌ ಆಯೋಜಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ‘ಸೊಳ್ಳೆ ಉತ್ಪಾದನಾ ಕೇಂದ್ರ’ವಾದ ವೈದ್ಯಕೀಯ ಕಾಲೇಜು; ಕಣ್ಮುಚ್ಚಿ ಕುಳಿತ ಅಧಿಕಾರಿಗಳು!

ಇಡೀ ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಾ ಇರುವಾಗ ನೈರ್ಮಲ್ಯ ಕಾಪಾಡಿ, ನೀರು...

ವಿಜಯಪುರ | ಎನ್‌ಎಸ್‌ಎಸ್ ಸ್ವಯಂ ಸೇವಕರಲ್ಲಿ ತಾಳ್ಮೆ, ಶಿಸ್ತಿನ ಜೊತೆಗೆ ಧೈರ್ಯ ತುಂಬುತ್ತದೆ: ಡಾ.ಪ್ರತಾಪ್ ಲಿಂಗಯ್ಯ

"ಎನ್‌ಎಸ್‌ಎಸ್ ಎಂಬುದು ಮನುಷ್ಯನಲ್ಲಿ ಸಹನೆ, ತಾಳ್ಮೆ ಹಾಗೂ ಶಿಸ್ತಿನ ಜೊತೆಗೆ ಧೈರ್ಯವನ್ನು...

ವಿಜಯಪುರ | ನೂತನ ವಸತಿ ನಿಲಯ ಮಂಜೂರು ಮಾಡುವಂತೆ ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ವಿಜಯಪುರ ನಗರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳ ಮತ್ತು...

ಚಿಕ್ಕಬಳ್ಳಾಪುರ | ಶಾಶ್ವತ ನೀರಾವರಿ ಯೋಜನೆಗಾಗಿ ಪ್ರಧಾನಿ ಭೇಟಿ : ಶಾಸಕ ಸಮೃದ್ಧಿ ಮಂಜುನಾಥ್‌ ವಾಗ್ದಾನ

"ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ತರುವ ಕುರಿತು ಪ್ರಧಾನಿ ಮೋದಿ ಭೇಟಿಗೆ...