ತುಮಕೂರು ನಗರದಲ್ಲಿ ಅ. 22 ರಿಂದ ಮೈಸೂರು ಸ್ಯಾಂಡಲ್ ಸಾಬೂನು ಮೇಳ : ಕೆ. ಎಸ್. ಗಂಗಪ್ಪ

Date:

Advertisements

ಬೆಂಗಳೂರಿನ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವತಿಯಿಂದ ಅಕ್ಟೋಬರ್ 22 ರಿಂದ 31ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ನಗರದ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಮೈಸೂರು ಸ್ಯಾಂಡಲ್ ಸಾಬೂನು ಮೇಳವನ್ನು ಆಯೋಜಿಸಲಾಗಿದೆ ಎಂದು ಮಾರುಕಟ್ಟೆ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಗಂಗಪ್ಪ ತಿಳಿಸಿದರು.

ತುಮಕೂರು ನಗರದ ಪತ್ರಿಕಾಭವನದಲ್ಲಿಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಸ್ಯಾಂಡಲ್ ಸಾಬೂನು ವಿಶ್ವ ವಿಖ್ಯಾತಿ ಪಡೆದಿದ್ದು, ನಮ್ಮ ಸಂಸ್ಥೆಯು ಕೇಂದ್ರ ಸರ್ಕಾರದಿಂದ ಭೌಗೋಳಿಕ ಸ್ವಾಮ್ಯ ಪ್ರಮಾಣ ಪತ್ರವನ್ನು ಪಡೆದು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

ಬಹುರಾಷ್ಟೀಯ ಸಂಸ್ಥೆಗಳ ತೀವ್ರ ಪೈಪೋಟಿಯ ನಡುವೆಯೂ ನಮ್ಮ ಸಂಸ್ಥೆ ಹೆಚ್ಚಿನ ವಹಿವಾಟು ಹೊಂದಿದ್ದು, 2023-24 ಸಾಲಿನಲ್ಲಿ 1570 ಕೋಟಿ ರೂ. ವಹಿವಾಟು ನಡೆಸಿ ಅಂದಾಜು ನಿವ್ವಳ 362 ಕೋಟಿ ರೂ.ಗಳ ಲಾಭ ಗಳಿಸಿದೆ. ಪ್ರಸ್ತುತ ಆರ್ಥಿಕ ವರ್ಷ 2024-25ರಲ್ಲಿ ನಮ್ಮ ಉತ್ಪನ್ನಗಳ ಮಾರಾಟದಲ್ಲಿ ಎಲ್ಲಾ ರಾಜ್ಯಗಳಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಸೆಪ್ಟೆಂಬರ್ 24ರವರೆಗಿನ ಮಾರಾಟದಲ್ಲಿ 901.39 ಕೋಟಿ ರೂ.ಗಳ ವಹಿವಾಟು ನಡೆದಿದೆ ಎಂದರು.

Advertisements

ನಮ್ಮ ಸಂಸ್ಥೆಯ 19 ಉತ್ಪನ್ನಗಳು ಮೂರು ಸಲ ಸಿಎಂ ರತ್ನ ಪ್ರಶಸ್ತಿಗೆ ಭಾಜನವಾಗಿದ್ದು, ಪರಿಸರ ಸ್ನೇಹಿ ಉದ್ಯಮ ಪ್ರಶಸ್ತಿಯನ್ನು ಪಡೆದಿದೆ. ಅಲ್ಲದೆ ನಮ್ಮ ಉತ್ಪನ್ನಗಳು 20 ರಾಷ್ಟçಗಳಿಗೆ ರಫ್ತಾಗುತ್ತಿದೆ. ನಗರದಲ್ಲಿ 10 ದಿನಗಳ ಕಾಲ ನಡೆಯುವ ಸಾಬೂನು ಮೇಳದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮನವಿ ಮಾಡಿದರು.ಭಾರತದಲ್ಲಿ 6 ಕಡೆ ನಮ್ಮ ಶಾಖಾ ಕಚೇರಿಗಳಿದ್ದು, ನಮ್ಮ ಸಂಸ್ಥೆ ರಾಜ್ಯದ 900 ರೈತರೊಂದಿಗೆ ಒಡಂಬಡಿಕೆ ಮಾಡಿ ಕೊಂಡಿದೆಯಲ್ಲದೆ, 3308 ಹೆಕ್ಟೇರ್ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಬೆಳೆಸಲು ಪ್ರೋತ್ಸಾಹ ನೀಡಲು ನಮ್ಮ ಸಂಸ್ಥೆ ವತಿಯಿಂದ ಸಸಿಗಳನ್ನು ವಿತರಿಸಿ ಅವುಗಳನ್ನು ಬೆಳೆಸಲು ಮಾರ್ಗದರ್ಶನ, ದರ ನಿಗಧಿ, ಇತ್ಯಾದಿ ಸೇವೆಯನ್ನು ಒದಗಿಸಲಾಗುತ್ತಿದೆ ಎಂದರು.

ಶ್ರೀಗಂಧದ ಸಸಿಯನ್ನು 10 ರಿಂದ 15 ವರ್ಷಗಳ ನಂತರ ಕಟಾವಿಗೆ ಬರುತ್ತವೆ. ಅರಣ್ಯ ಇಲಾಖೆ ನಿರ್ದೇಶನದಂತೆ ಮರದ ಕಾಂಡ, ರೆಂಬೆ, ಬೇರುಗಳು ಹೀಗೆ ವಿವಿಧ ಭಾಗಕ್ಕೆ ದರ ನಿಗಧಿ ಮಾಡಲಾಗುವುದು ಎಂದರು.

ಮೈಸೂರು ಸ್ಯಾಂಡಲ್ ಸೋಪ್ ಮೇಳದಲ್ಲಿ ಏನೆಲ್ಲಾ ಇರಲಿದೆ : ಮೇಳದಲ್ಲಿ ಮೈಸೂರ್ ಸ್ಯಾಂಡಲ್ ಸೋಪ್, ಗೋಲ್ಡ್, ಮೈಸೂರ್ ಸ್ಯಾಂಡಲ್ ಮಿಲೇನಿಯಂ, ಬಾಡಿವಾಷ್, ಮೈಸೂರ್ ರೋಜ್, ಬೇಬಿ ಸೋಪ್, ಗೋಲ್ಡ್ ಸಿಕ್ಸರ್, ವೇವ್ ಟರ್ಮರಿಕ್ ಸೋಪ್, ಟಾಲ್ಕ್, ಕ್ಲೀನಾಲ್, ಅಗರಬತ್ತಿಗಳು, ಧೂಪ್, ಡಿಟರ್ಜೆಂಟ್ ಪೌಡರ್, ಪಾಯಿಂಟ್ ಅಡ್ವಾನ್ಸ್ಡ್ ಲಿಕ್ವಿಡ್ ಡಿಟರ್ಜೆಂಟ್, ಹ್ಯಾಂಡ್ ವಾಶ್, ಆಯಿಲ್, ಡಿಟರ್ಜೆಂಟ್ ಕೇಕ್, ವಾಷಿಂಗ್ ಬಾರ್ ಸೋಪ್ ಮತ್ತಿತರ ಉತ್ಪನ್ನಗಳ ಪ್ರದರ್ಶನ ಇರಲಿದೆ.

ಸಹಾಯಕ ಪ್ರಧಾನ ವ್ಯವಸ್ಥಾಪಕ ಗುರುಪ್ರಸಾದ್ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X