ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಕೆ ವಿ ಆರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ಕೆಎಂಪಿಕೆ ಟ್ರಸ್ಟ್ ನ 18ನೇ ವಾರ್ಷಿಕೋತ್ಸವದ ಅಂಗವಾಗಿ, ಸಂಘಟನೆ ಹಾಗೂ ಧಾರ್ಮಿಕ ಸೇವೆಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಹಾಗೂ ಕಲ್ಯಾಣ ಮಂಟಪ ಮಾಲೀಕರ ಸಂಘದ ಅಧ್ಯಕ್ಷ ಕೆ ಆರ್ ಸತ್ಯನಾರಾಯಣ್ ಅವರಿಗೆ ‘ಚಾಣಕ್ಯ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ ಆರ್ ಸತ್ಯನಾರಾಯಣ್ ಉಳ್ಳವರು, ಸಮಾಜದಲ್ಲಿ ಸದೃಢರಾಗಿರುವವರು ಸ್ವ ಇಚ್ಛೆಯಿಂದ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬಡವರಿಗೆ ಸಹಾಯ, ನೆರವಿನ ಸೇವೆ ಮಾಡುವುದರೊಂದಿಗೆ ಸಮಾಜಕ್ಕೆ ತಮ್ಮ ಕೊಡುಗೆ ನೀಡಬೇಕು. ಎಲ್ಲವನ್ನೂ ಕೊಟ್ಟಿರುವ ಸಮಾಜಕ್ಕೆ ನಮ್ಮಿಂದ ಸಮಾಜಕ್ಕಾಗಿ ಸೇವೆ ಸಲ್ಲಿಸುವ ಅಗತ್ಯವಿದೆ ಎಂದರು.
ಸರ್ವ ಧರ್ಮೀಯರ ಸಮಾಜ ನಮ್ಮನ್ನ ಬೆಳೆಸಿದ ಮೇಲೆ ಸಮಾಜದ ಋಣ ನಮ್ಮ ಮೇಲಿರುತ್ತದೆ. ಹಾಗಾಗಿ ಬಡವರಿಗೆ, ನೊಂದವರಿಗೆ ನೆರವಾಗಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ, ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಬೆಳೆಸಬೇಕಿದೆ ಎಂದರು.
ಇದನ್ನು ಓದಿದ್ದೀರಾ? ಯಾದಗಿರಿ | ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬಡಿದ ಸಿಡಿಲು: ನಾಲ್ವರ ಸಾವು
ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ರಾಕೇಶ್ ಭಟ್,ಎಂ ಆರ್ ಬಾಲಕೃಷ್ಣ, ನಾಗರಾಜ್, ಕಡಕೋಳ ಜಗದೀಶ್, ಹೊಯ್ಸಳ ಕರ್ನಾಟಕ ಸಂಘದ ನಿರ್ದೇಶಕ ಜಯಸಿಂಹ, ವಿಜಯ್ ಕುಮಾರ್, ಚಕ್ರಪಾಣಿ, ಲತಾ ಬಾಲಕೃಷ್ಣ, ನಾಗಶ್ರೀ ಸುಚಿಂದ್ರ, ವಿಜಯ ಮಂಜುನಾಥ್, ಗುರುರಾಜ್, ಹಾಗೂ ಇನ್ನಿತರರಿದ್ದರು.
