ಮೈಸೂರು | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮತ್ತು ಶುಲ್ಕ ಸಮಸ್ಯೆ ಪರಿಹರಿಸಲು ಆಗ್ರಹ

Date:

ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರ ವಿದ್ಯಾರ್ಥಿ ವೇತನ ಸಮಸ್ಯೆ ಮತ್ತು ಶುಲ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಮುಖಂಡರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಪ್ರತಿಭಟನಾಕಾರರು ಕಾಲೇಜಿನ ಪ್ರಾಂಶುಪಾಲರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಎಸ್‌ಸಿ , ಎಸ್‌ಟಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದ ಬಗ್ಗೆ ಯಾವುದೇ ಸಂಪೂರ್ಣ ಮಾಹಿತಿ ಇಲ್ಲ. ವಿದ್ಯಾರ್ಥಿಗಳು ಕಾಲೇಜಿಗೆ ಸೇರಬೇಕಾದರೆ 600 ರೂ.ಗಳನ್ನು ತೆಗೆದುಕೊಂಡು ದಾಖಲಾತಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಸಂಪೂರ್ಣ ವಿದ್ಯಾರ್ಥಿ ವೇತನ ಬಂದಿಲ್ಲ. ಪ್ರಥಮ ಮತ್ತು ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕ್ರಮವಾಗಿ 2000, 4000 ರೂ. ಮಾತ್ರವೇ ನೀಡಲಾಗಿದೆ. ಅಲ್ಲದೆ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ 11,000 ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ 19,498 ದಿಢೀರನೆ ಕಾಲೇಜಿಗೆ ಶುಲ್ಕವನ್ನು ಕಟ್ಟಬೇಕೆಂದು ಒತ್ತಾಯಿಸಲಾಗಿದೆ. ಈ ಕ್ರಮ ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ದ್ವಿತೀಯ ವರ್ಷದ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಒಂದನೇ ಸೆಮಿಸ್ಟರ್ ಮತ್ತು ಎರಡನೇ ಸೆಮಿಸ್ಟರ್ ಹಾಗೂ ಮೂರನೇ ಸೆಮಿಸ್ಟರ್ ಓದುವಾಗ ಯಾವುದೇ ರೀತಿ ಪರೀಕ್ಷಾ ಶುಲ್ಕವನ್ನು ಕಟ್ಟಿಸಿಕೊಂಡಿಲ್ಲ. ಆದರೆ, ಈಗ ಏಕಾಏಕಿ ಮೂರು ಸೆಮಿಸ್ಟರ್‌ಗಳ ಪರೀಕ್ಷಾ ಶುಲ್ಕವನ್ನು ಕಟ್ಟಬೇಕೆಂದು ಒತ್ತಾಯಿಸಲಾಗಿದೆ. ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಯುಯುಸಿಎಂಎಸ್‌ ಪೋರ್ಟಲ್‌ನಲ್ಲಿ ಪರೀಕ್ಷಾ ಶುಲ್ಕವನ್ನು ಕಟ್ಟುವಂತೆ ತೋರಿಸುತ್ತಿಲ್ಲ. ಇದು ವಿದ್ಯಾರ್ಥಿಗಳಲ್ಲಿ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ” ಎಂದು ಕಿಡಿಕಾರಿದ್ದಾರೆ.

ಪ್ರತಿಭಟನೆಯಲ್ಲಿ ಚಂದ್ರಕಲಾ, ನಿತಿನ್, ಸ್ವಾತಿ ಹಾಗೂ ಮಹಾರಾಣಿ ಸ್ನಾತಕೋತ್ತರ ಕಲಾ ವಿಭಾಗದ ನೂರಾರು ವಿದ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...