ಮೈಸೂರು ಎಸ್‌ಡಿಪಿಐ ಕಾರ್ಯಕರ್ತನ ಹತ್ಯೆ ಪ್ರಕರಣ | ಕೆಎಂಡಿಸಿ ಅಧ್ಯಕ್ಷನ ಸಹಿತ ಐವರ ಮೇಲೆ ಎಫ್‌ಐಆರ್

Date:

Advertisements

ಮೈಸೂರಿನ ಮಾಜಿ ಕಾರ್ಪೊರೇಟರ್ ಅಯಾಝ್ ಪಾಷಾ (ಪಂಡು) ಸಹೋದರ ಧಾರ್ಮಿಕ ಗುರು ಹಾಗೂ ಎಸ್‌ಡಿಪಿಐ ಕಾರ್ಯಕರ್ತ ಮುಹಮ್ಮದ್ ಅಕ್ಮಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟ‌ರ್ ಬಶೀರ್ ಅಹ್ಮದ್, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ.ಅಲ್ತಾಫ್ ಸೇರಿದಂತೆ 5 ಮಂದಿಯ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಾಜಿ ಕಾರ್ಪೊರೇಟರ್ ಬಶೀರ್ ಅಹ್ಮದ್, ಈತನ ಪುತ್ರ ಫೈಝಾನ್ ಅಹ್ಮದ್, ಅಲ್ತಾಫ್ ಖಾನ್, ಪರ್ವೀಝ್ ಹಾಗೂ ಇಬ್ರಾಹಿಂ ಎಂಬವರ ವಿರುದ್ಧ ಕೊಲೆ ಮಾಡಿಸಿರುತ್ತಾರೆ ಎಂದು ಆರೋಪಿಸಿ ಕೊಲೆಗೀಡಾದ ಅಕ್ಮಲ್‌ರವರ ಪತ್ನಿ ನಾಝಿಯಾ ಪ್ರಕರಣ ದಾಖಲಿಸಿದ್ದಾರೆ.

ಕಳೆದ ಮಾರ್ಚ್ 8 ರಂದು ರಾತ್ರಿ 8.30ರ ಸುಮಾರಿಗೆ ರಾಜೀವ್‌ ನಗರದ ಬೇಕರಿ ಬಳಿ ಮುಹಮ್ಮದ್ ಅಕ್ಮಲ್ ಅವರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿತ್ತು.

Advertisements

ಶಾಂತಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಪ್ಲೆಕ್ಸ್ ತೆರವುಗೊಳಿಸುವಂತೆ ಅಕ್ಮಲ್ ಅವರು ನಗರಪಾಲಿಕೆ ಆಯುಕ್ತರಿಗೆ ದೂರು ನೀಡಿದ್ದರು. ನಂತರ ರಾತ್ರಿ ಅಪಾರ್ಟ್ ಮೆಂಟ್ ನಲ್ಲಿ ಕೆಎಂಡಿಸಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಲ್ತಾಫ್ ಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಬಶೀ‌ರ್ ಹಾಗೂ ಅಲ್ತಾಫ್ ರವರು ಅಕ್ಮಲ್‌ರವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದರು ಎಂದು ಹೇಳಲಾಗಿದೆ. ಇದಕ್ಕೆ ಬಗ್ಗದ ಮುಹಮ್ಮದ್ ಅಕ್ಮಲ್ ಅವರು, ಬಶೀ‌ರ್ ಹಾಗೂ ಅಲ್ತಾಫ್ ವಿರುದ್ದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು ಎನ್ನಲಾಗಿದೆ.

ಅಲ್ಲದೆ ಬಶೀರ್ ಹಾಗೂ ಅಲ್ತಾಫ್ ಬೆದರಿಕೆ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಹೀಗಾಗಿ ತನ್ನ ಪತಿ ಮುಹಮ್ಮದ್ ಅಕ್ಮಲ್ ಅವರ ಕೊಲೆಯ ಹಿಂದೆ ಬಶೀರ್ ಅಹ್ಮದ್‌, ಅಲ್ತಾಫ್ ಖಾನ್, ಪರ್ವೀಝ್, ಇಬ್ರಾಹಿಂ ಹಾಗೂ ಫೈಝಾನ್ ಅಹ್ಮದ್ ಅವರ ಕೈವಾಡ ಇದೆ ಎಂದು ಆರೋಪಿಸಿ ನಾಝಿಯಾ ಉದಯಗಿರಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ಎಸ್‌ಡಿಪಿಐಯಿಂದ ಪ್ರತಿಭಟನೆ
ಅಕ್ಮಲ್ ರವರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕೊಡ್ಲಿಪೇಟೆ ನೇತೃತ್ವದಲ್ಲಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪತಿ ಅಂತ್ಯಕ್ರಿಯಲ್ಲಿ ಪತ್ನಿ ಸಾವು; ಸಾವಿನಲ್ಲೂ ಒಂದಾದ ದಂಪತಿ

ಪತಿ ಅಂತ್ಯಕ್ರಿಯೆ ವೇಳೆ ಪತ್ನಿಯೂ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ...

ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ : ಕೆ.ಎನ್ ರಾಜಣ್ಣ ಬೆಂಬಲಿಗರ ಭರ್ಜರಿ ಗೆಲುವು

ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನದ...

ಗದಗ | ಬೆಳೆ ಹಾನಿ ವೀಕ್ಷಣೆ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಹೆಚ್. ಕೆ. ಪಾಟೀಲ 

ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ...

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

Download Eedina App Android / iOS

X