ಮೈಸೂರು | ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆ; ಸಾರ್ವಜನಿಕರಿಗೆ ಉಚಿತ ಹೋಳಿಗೆ ಊಟ

Date:

Advertisements
  • ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಕೃಷ್ಣರಾಜ ಯುವ ಬಳಗದ ವತಿಯಿಂದ
  • ಮೈಸೂರಿನ ಗನ್‌ಹೌಸ್‌ನಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಹೋಳಿಗೆ ಊಟ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಕೃಷ್ಣರಾಜ ಯುವ ಬಳಗದ ವತಿಯಿಂದ ಮೈಸೂರಿನ ಗನ್‌ಹೌಸ್‌ನಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ 100ಕ್ಕೂ ಹೆಚ್ಚು ಸಾರ್ವಜನಿಕರಿಗೆ ಉಚಿತ ಹೋಳಿಗೆ ಊಟ ನೀಡುವ ಮೂಲಕ ಸಂಭ್ರಮಿಸಿದರು.

ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ಮಾಧ್ಯಮಗಳೊಂದಿಗೆ ಮಾತನಾಡಿ, “ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ, ಡಿ ಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದಕ್ಕೆ ತುಂಬಾ ಸಂತೋಷ ಆಗಿದೆ. ಇಬ್ಬರೂ ಪ್ರಭಾವಿ ಅನುಭವಿ ಹಾಗೂ ದಕ್ಷ ಆಡಳಿತಗಾರರು ಇವರ ನೇತೃತ್ವದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ” ಎಂದು ತಿಳಿಸಿದರು. 

“ಕಾಂಗ್ರೆಸ್‌ಗೆ ಅಧಿಕಾರ ಲಭಿಸುವಲ್ಲಿ ಸಿದ್ದರಾಮಯ್ಯ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅದನ್ನು ಮನಗಂಡು ಕಾಂಗ್ರೆಸ್‌ನ ವರಿಷ್ಠರು ಈಗ ಹಿರಿಯ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ.  ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ವರ್ಗದ ಜನಾಂಗದವರ ಏಳಿಗೆಗಾಗಿ ಹಗಲಿರಲು ಶ್ರಮವಹಿಸುತ್ತಾರೆ. ಅವರು ನೀಡಿರುವ ಗ್ಯಾರಂಟಿಗಳನ್ನು ಈಡೇರಿಸುವುದರ ಜೊತೆಗೆ ಸರ್ವ ಜನಾಂಗದ ಅಭಿವೃದ್ಧಿಯನ್ನು ಬಯಸುವಂತಹ ಮಹಾನ್ ನಾಯಕರು” ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ಸೌಲಭ್ಯಕ್ಕೆ ಡಿಜಿಸಿಎ ಅನುಮತಿ

“ಕಾಂಗ್ರೆಸ್‌ಗೆ ಬಲ ತುಂಬಿದ ಜೊತೆಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರಪಾಲಿಕೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸುವಲ್ಲಿ ಸಿದ್ದರಾಮಯ್ಯ ಅವರು ಪ್ರಮುಖ ಪಾತ್ರ ವಹಿಸುತ್ತಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡುವುದೇ ಅವರ ಗುರಿಯಾಗಿದೆ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಬೇಕೆಂಬುದು ಎಲ್ಲ ಜಾತಿ ಜನಾಂಗದವರ ಬೇಡಿಕೆಯಾಗಿತ್ತು. ಮುಂದಿನ ದಿನಗಳಲ್ಲಿಯೂ ನಾವೆಲ್ಲ ಅವರ ಜೊತೆಗೆ ಇರುತ್ತೇವೆ.  ವಿಶೇಷವಾಗಿ ಮೈಸೂರು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಾರೆಂಬ ವಿಶ್ವಾಸವಿದೆ” ಎಂದು ತಿಳಿಸಿದರು.

ಇದೇ ವೇಳೆ ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಎಸ್ ಎನ್ ರಾಜೇಶ್, ಮಂಜುನಾಥ್, ವಿಜಯ್ ಕುಮಾರ್, ಶಿವು, ರವಿಚಂದ್ರ, ಶಕ್ತಿಪ್ರಸಾದ್, ತೀರ್ಥ ಕುಮಾರ್ ಸೇರಿದಂತೆ ಇತರ ಅಭಿಮಾನಿಗಳು ಇದ್ದರು.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X