ಮೈಸೂರು | ಬೆಳ್ಳಿಹಬ್ಬ ಸಂಭ್ರಮ; ಜು.29, 30ರಂದು ದಲಿತ ಸಾಹಿತ್ಯ ಸಮ್ಮೇಳನ

Date:

ದಲಿತ ಸಾಹಿತ್ಯ ಪರಿಷತ್‌ ವತಿಯಿಂದ ಬೆಳ್ಳಿಹಬ್ಬ ಸಂಭ್ರಮದ ಅಂಗವಾಗಿ ಜುಲೈ 29 ಮತ್ತು 30ರಂದು 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು‌ ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಾಹಿತ್ಯ ಪರಿಷತ್‌ ಜಿಲ್ಲಾ ಸಂಯೋಜಕ ಡಾ. ಚಂದ್ರಗುಪ್ತ ತಿಳಿಸಿದರು.

- Advertisement -

ಮೈಸೂರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸದ್ಯದ ಸಂದಿಗ್ಧ ಪರಿಸ್ಥಿತಿಯಲ್ಲಿ ದಲಿತ ಪ್ರಜ್ಞೆ, ಸಂವೇದನೆ ಹೊಂದಿದ ಲೇಖಕರಿಗೆ ಅವಕಾಶ ಇಲ್ಲದಂತಾಗಿದೆ. ಹಾಗಾಗಿ ದಮನಿತ ಹಾಗೂ ಶೋಷಿತರಿಗೆ ತುಡಿಯುವ, ದಲಿತ ಸಂವೇದನೆಯ ಲೇಖಕರಿಗೆ ಅವಕಾಶ ಕಲ್ಪಿಸಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಎರಡು ದಿನ ಸಮ್ಮೇಳನ ನಡೆಯಲಿದ್ದು, ಪ್ರಬುದ್ಧ ಭಾರತ, ಸಂವಿಧಾನ ರಕ್ಷಣೆ, ಮೀಸಲಾತಿ ವಿಷಯದ ಕುರಿತು ಸಂವಾದ ಹಾಗೂ ಚರ್ಚೆಗಳು ನಡೆಯಲಿವೆ. ಸಮತಾಗೀತೆ, ಸಂವಿಧಾನ ಪ್ರಸ್ತಾವನೆ ಓದು, ಬುದ್ಧ ಚಿಂತನೆಗಳ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಗುವುದು. ಸಮ್ಮೇಳನದಲ್ಲಿ ಎರಡು ಕವಿಗೋಷ್ಠಿ, ಬೆಳ್ಳಿ ಸಂಭ್ರಮ ಪ್ರಶಸ್ತಿ ಸಮಾರಂಭ, ಗೌರವ ಸಮಾರಂಭ, ಪುಸ್ತಕಗಳ ಬಿಡುಗಡೆ ನಡೆಯಲಿದೆ” ಎಂದರು.

Press meet
ದಲಿತ ಸಾಹಿತ್ಯ ಪರಿಷತ್‌ ವತಿಯಿಂದ ಬೆಳ್ಳಿಹಬ್ಬ ಸಂಭ್ರಮಕ್ಕೆ ಕರೆಯೋಲೆ

“ಕಾಂಗ್ರೆಸ್‌ನ ಕೆಪಿಸಿಸಿ ಕಾರ್ಯದರ್ಶಿ ಹಾಗೂ ನಾಗವಾಲ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸಿ ನರೇಂದ್ರ ನಾಗವಾಲ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿದ್ದು, ರಾಜ್ಯ ಸಮಿತಿಯು ಇವರನ್ನು ಗೌರವ ಪ್ರಶಸ್ತಿಗೆ ಅಯ್ಕೆ ಮಾಡಿದೆ. ಹಾಗೆಯೇ ಯುವ ಬರಹಗಾರ, ದಲಿತ ಚಿಂತಕ ರವೀಂದ್ರ ಹಾರೋಹಳ್ಳಿ ಅವರನ್ನೂ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ರಾಗಿ ಲಕ್ಷ್ಮಣಯ್ಯ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ: ಸಚಿವ ಚಲುವರಾಯಸ್ವಾಮಿ

“ರಾಜ್ಯ ಘಟಕದ ಅಧ್ಯಕ್ಷ ಅರ್ಜುನ ಗೊಳಸಂಗಿ ಅವರ ನೇತೃತ್ವದಲ್ಲಿ ಈ ಸಮ್ಮೇಳನ ನಡೆಯುತ್ತಿದ್ದು, ದಲಿತ ಸಾಹಿತ್ಯ ಸಂಪದ ಕೃತಿಯನ್ನು ಬಿಡುಗಡೆ ಮಾಡಲು ಚಿಂತಿಸಲಾಗಿದೆ. ಅದುದರಿಂದ ದಲಿತ ಲೇಖಕರು, ಚಳವಳಿಗಾರರು, ಚಿಂತಕರು, ವಿಚಾರವಾದಿಗಳು, ವಿಮರ್ಶಕರು, ಪ್ರಗತಿಪರರು, ಸಂಶೋಧಕರು, ವಿದ್ಯಾರ್ಥಿಗಳು ಸೇರಿದಂತೆ ಇತರರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ. ಕವಿಗೋಷ್ಠಿಯಲ್ಲಿ ಭಾಗವಹಿಸುವ ಜಿಲ್ಲಾ ಕವಿಗಳು ತಾವು ರಚಿಸಿರುವ ಕವನದ ಪ್ರತಿಯನ್ನು ಸಮಿತಿಯ ಸಂಯೋಜಕ ಡಾ. ಚಂದ್ರಗುಪ್ತ (9591799053), ಅಧ್ಯಕ್ಷ ಡಾ.ರಂಗಸ್ವಾಮಿ ಕಾಳಿಹುಂಡಿ(8217656459), ಕಾರ್ಯದರ್ಶಿ ಡಾ.ಮಂಜು ಟಿ, ಸತ್ತಿಗೆಹುಂಡಿ (7353344365) ಅವರ ವಾಟ್ಸಪ್ ನಂಬರ್ ಹಾಗೂ ಅಥವಾ ಇಮೇಲ್ [email protected]‌, [email protected], [email protected] ಈ ವಿಳಾಸಕ್ಕೆ 3ಡಿ ಕವನಗಳನ್ನು ಕಳುಹಿಸಲು ಕೋರಿದೆ” ಎಂದರು.

ಸುದ್ದಿಗೋಷ್ಠಿಯ್ಲಿ ಜಿಲ್ಲಾ ಉಪಾಧ್ಯಕ್ಷೆ ಜಯಶೀಲ, ಜಿಲ್ಲಾ ಕಾರ್ಯದರ್ಶಿ ಮಂಜು ಸತ್ತಿಗೆ ಉಂಡಿ, ರಂಗಸ್ವಾಮಿ ಕಾಳಿಹುಂಡಿ, ಖಜಾಂಚಿ ಡಾ. ಶಿವಶಂಕರ್‌ ಬಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...