ಮೈಸೂರು | ಮೀತಲತಂಡ ಇಸ್ಮಾಯಿಲ್‌ಗೆ ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿ

Date:

ಕೊಡಗು ಜಿಲ್ಲೆಯ ವಿರಾಜಪೇಟೆ ಬಳಿಯಿರುವ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮೀತಲತಂಡ ಎಂ ಇಸ್ಮಾಯಿಲ್ ಅವರಿಗೆ ‘ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

- Advertisement -

ಧಾರವಾಡದ ಚೇತನ ಫೌಂಡೇಶನ್ ಕರ್ನಾಟಕದ ವತಿಯಿಂದ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳ ಶೈಕ್ಷಣಿಕ ಉತ್ತೇಜನಕ್ಕಾಗಿ ಶ್ರಮಿಸಿದವರಿಗೆ ನೀಡಲಾಗುವ ರಾಜ್ಯಮಟ್ಟದ ಸಮಾಜ ಸೇವಾ ಪ್ರಶಸ್ತಿಗೆ ಮೀತಲತಂಡ ಎಂ ಇಸ್ಮಾಯಿಲ್ ಭಾಜನರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಚೇತನ ಫೌಂಡೇಶನ್ ಕರ್ನಾಟಕದ ಆಶ್ರಯದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ ಇವರ ಸಹಯೋಗದಲ್ಲಿ ಮೈಸೂರಿನ ವಿಜಯನಗರದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಸಭಾಂಗಣದಲ್ಲಿ ನಡೆದ ‘ಮೈಸೂರು ನುಡಿ ಸಡಗರ’ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಎನ್ ಸತ್ಯನಾರಾಯಣ ಅವರಿಂದ ಕನ್ನಡ ನಾಡಿನ ಪ್ರಸಿದ್ಧ ಸಾಹಿತಿಗಳ ಮತ್ತು ವಿದ್ವಾಂಸರ ಸಮ್ಮುಖದಲ್ಲಿ ಇಸ್ಮಾಯಿಲ್ ಅವರು ರಾಜ್ಯಮಟ್ಟದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

ಪಂಪ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಸಾಹಿತಿ ಡಾ. ಸಿ ಪಿ ಕೃಷ್ಣಕುಮಾರ್(ಸಿಪಿಕೆ) ಕಾರ್ಯಕ್ರಮ ಉದ್ಘಾಟಿಸಿದರು. ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಹಿರಿಯ ಕವಿ ಮಂಗಳೂರಿನ ಗೋವಿಂದ ಭಟ್, ಕಿರುತೆರೆ ನಟ ಎನ್ ಹರೀಶ್ ಸೇರಿದಂತೆ ಮೊದಲಾದವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಮೈಸೂರಿನ ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಟಿ ಸತೀಶ್ ಜವರೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಧಾರವಾಡದ ಚೇತನ ಫೌಂಡೇಶನ್‌ನ ಅಧ್ಯಕ್ಷ ಚಂದ್ರಶೇಖರ ಮಾಡಲಗೇರಿ, ಕಾವ್ಯಶ್ರೀ ಚಾರಿಟೆಬಲ್ ಟ್ರಸ್ಟ್ ಕರ್ನಾಟಕದ ಸಂಸ್ಥಾಪಕ ಅಧ್ಯಕ್ಷ ಡಾ ಜಿ ಶಿವಣ್ಣ ಹಾಗೂ ಇತರರು ಇದ್ದರು.

ಈ ಸುದ್ದಿ ಓದಿದ್ದೀರಾ? ಮಡಿಕೇರಿ | ಕ್ರೀಡೆಯಿಂದ ಸಮಾಜದಲ್ಲಿ ಸೌಹಾರ್ದ ವೃದ್ಧಿ: ಶಾಸಕ ಮಂತರ್ ಗೌಡ

ಇಸ್ಮಾಯಿಲ್ ಅವರು ಪ್ರಶಸ್ತಿ ಸ್ವೀಕರಿಸಿದ ಸಂದರ್ಭದಲ್ಲಿ ಕೊಡವ ಮುಸ್ಲಿಂ ಅಸೋಸಿಯೇಷನ್(ಕೆಎಂಎ) ಕೋಶಾಧಿಕಾರಿ ಹರಿಶ್ಚಂದ್ರ ಎ ಹಂಸ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಪಟ್ಟಿಯಡ ಎ ಹನೀಫ್, ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶ್ರೀನಿವಾಸ್, ಚಾಮಿಯಾಲದ ಸಫ್ವಾನ್ ಸೇರಿದಂತೆ ಕುಟುಂಬದವರು ಮತ್ತು ಸ್ನೇಹಿತರ ಬಳಗದವರು ಇದ್ದರು. ಕೆದಮುಳ್ಳೂರು ಗ್ರಾ. ಪಂ.ಗೆ 3ನೇ ಬಾರಿಗೆ ಚುನಾಯಿತರಾಗಿರುವ ಇಸ್ಮಾಯಿಲ್ ಅವರು ಕೊಡವ ಮುಸ್ಲಿಂ ಅಸೋಸಿಯೇಷನ್(ಕೆಎಂಎ)ನ ಕಾರ್ಯಕಾರಿ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...