ಮೈಸೂರು | ರಾಜ್ಯ ಮಟ್ಟದ ಯೋಗ ಸ್ಪರ್ಧೆ; ವಿಜೇತರಿಗೆ ಬಹುಮಾನ, ಪ್ರಶಸ್ತಿ ಪತ್ರ ವಿತರಣೆ

Date:

Advertisements

ಬಲಿಷ್ಟ ಭಾರತಕ್ಕಾಗಿ ಪ್ರತಿಯೊಬ್ಬರೂ ಯೋಗ ಮಾಡಬೇಕು‌. ಹಿಂದೆ ಹರಿದ್ವಾರ ಅಥವಾ ಋಷಿಕೇಶವನ್ನು ಯೋಗದ ರಾಜಧಾನಿ ಎನ್ನಲಾಗುತ್ತಿತ್ತು. ಆದರೆ ಈಗಾ ಮೈಸೂರನ್ನು ಯೋಗದ ರಾಜಧಾನಿ ಎನ್ನಲಾಗುತ್ತಿದೆ ಎಂದು ಮೈಸೂರಿನ ಯೋಗ ಫೆಡರೇಶನ್‌ನ ಅಧ್ಯಕ್ಷ ಶ್ರೀಹರಿ ಹೇಳಿದರು.

10ನೇ ಅಂತಾರಾಷ್ಟ್ರೀಯ ಯೋಗ ದಿನೋತ್ಸವ ಮತ್ತು ಯೋಗಗುರು ಡಾ ಗಣೇಶ್ ಕುಮಾರ್ ಅವರ ಜನ್ಮ ಷಷ್ಠಾಬ್ದಿಯ ಅಂಗವಾಗಿ ಯೋಗ ಸ್ಪೋರ್ಟ್ಸ್ ಫೌಂಡೇಶನ್ ವತಿಯಿಂದ ಮೈಸೂರು ವಿಶ್ವವಿದ್ಯಾಲಯ ಯೋಗ ಭವನದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಯೋಗ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಯೋಗ ಕ್ಷೇತ್ರ ಇಂದು ದೊಡ್ಡಮಟ್ಟದಲ್ಲಿ ಬೆಳೆದಿದೆ. ಅಂತಾರಾಷ್ಟ್ರೀಯ ಯೋಗದಿನದಂದು ಮೈಸೂರಿನಲ್ಲಿ ನಡೆದ ಸಾಮೂಹಿಕ ಯೋಗ ಪ್ರದರ್ಶನ ಗಿನ್ನೀಸ್ ದಾಖಲೆ ನಿರ್ಮಿಸಿದೆ‌. ಇದರ ಜತೆಗೆ ಮತ್ತೊಂದು ಮುಕುಟ ಎನ್ನುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗದಿನದಲ್ಲಿ ಪಾಲ್ಗೊಂಡು ಈ ನೆಲೆದ ಹೆಮ್ಮೆಯನ್ನು ಹೆಚ್ಚಿಸಿದ್ದಾರೆ. ಮೈಸೂರಿನ ಈ ಶ್ರೀಮಂತ ಪರಂಪರೆ ಮತ್ತಷ್ಟು ಹೆಚ್ಚಬೇಕು” ಎಂದು ಸಲಹೆ ನೀಡಿದರು.

Advertisements

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿ‌ನ‌ ಸ್ಥಾನಿಕ ವೈದ್ಯಾಧಿಕಾರಿ ಡಾ ಎಚ್ ಎ ಶಶಿರೇಖಾ ಮಾತನಾಡಿ, “ದೈನಂದಿನ ಜೀವನದಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ. ದೈಹಿಕ ಆರೋಗ್ಯ, ಮಾನಸಿಕ ಆರೋಗ್ಯ, ಸಾಮಾಜಿಕ ಆರೋಗ್ಯ ಸುಸ್ಥಿರತೆಗೆ ಯೋಗ ಅಡಿಪಾಯವಾಗಿದೆ. ದೇಹವು ದೈಹಿಕವಾಗಿ ಆರೋಗ್ಯಕರವಾಗಿದ್ದಾಗ, ಮನಸ್ಸು ಸ್ಪಷ್ಟವಾಗಿ ಕೇಂದ್ರೀಕೃತವಾಗಿರುತ್ತದೆ. ಒತ್ತಡವು ನಿಯಂತ್ರಣದಲ್ಲಿರುತ್ತದೆ. ಯೋಗದ ಮೊರೆ ಹೋದವರು ದೈಹಿಕ, ಮಾನಸಿಕ, ಭಾವನಾತ್ಮಕ ಹಾಗೂ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದಾರೆ” ಎಂದರು.

ಯೋಗಗುರು ಡಾ ಗಣೇಶ್ ಕುಮಾರ್ ಮಾತನಾಡಿ, “ಮೈಸೂರು ಅರಸರು ಯೋಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಆ ಪರಂಪರೆಯನ್ನು ನಾವು ಮತ್ತಷ್ಟು ಹೆಚ್ಚಿಸಬೇಕಿದೆ. ಒಲಂಪಿಕ್ಸ್‌ನಲ್ಲಿ ಯೋಗವನ್ನು ಒಂದು ಕ್ರೀಡೆಯನ್ನಾಗಿ ಸೇರ್ಪಡೆ ಮಾಡಲಾಗಿದೆ. ಇದರ ಜತೆಗೆ 2036ಕ್ಕೆ ಭಾರತದಲ್ಲಿ ಒಲಂಪಿಕ್ಸ್ ಆಯೋಜಿಸಲು ಚಿಂತಿಸಲಾಗಿದೆ‌. ಇದರಲ್ಲಿ ನಮ್ಮ ಯೋಗಾಪಟುಗಳು ಪಾಲ್ಗೊಂಡು ದೇಶದ ಕೀರ್ತಿ ಹೆಚ್ಚಿಸಲು ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕಿದೆ” ಎಂದು ಸಲಹೆ ನೀಡಿದರು.

ಯೋಗ ಸ್ಪರ್ಧೆ 2

ಮಂಡ್ಯ ಜಿಲ್ಲಾ ಕಾರಾಗೃಹ ಅಧೀಕ್ಷಕ ಟಿ ಕೆ ಲೋಕೇಶ್ ಮಾತನಾಡಿ, “ಕೋಪ, ತಾಪ, ದುಡುಕುತನದಿಂದ ನಾನಾ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಕೈದಿಗಳು ಜೈಲಿನಲ್ಲಿ ಬಂಧಿಯಾಗಿದ್ದಾರೆ. ನಮ್ಮಲ್ಲಿ ಅಂಥವರಿಗೆ ನಿತ್ಯ ಯೋಗಭ್ಯಾಸ ಮಾಡಿಸಲಾಗುತ್ತಿದೆ. ಇದರಿಂದ ಅವರಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಈ ನಿಟ್ಟಿನಲ್ಲಿ ಯೋಗ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ” ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಡಾ ಗಣೇಶ್ ಕುಮಾರ್ ಹಾಗೂ ಡಾ.ಎಚ್ ಎ ಶಶಿರೇಖಾ ಅವರಿಗೆ ಅವರ ಶಿಷ್ಯಂದಿರು ಗುರುವಂದನೆ ಸಲ್ಲಿಸಿದರು.

ರಾಜ್ಯ ಮಟ್ಟದ ಯೋಗ ಸ್ಪರ್ಧೆ ಕಾರ್ಯಕ್ರಮಕ್ಕೆ ಮೈಸೂರು, ಮಂಡ್ಯ, ಚಾಮರಾಜನಗರ, ಗದಗ, ಬಳ್ಳಾರಿ, ರಾಯಚೂರು, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ 500ಕ್ಕೂ ಹೆಚ್ಚು ಸ್ಫರ್ದಿಗಳು ಪಾಲ್ಗೊಂಡಿದ್ದರು.

ಯೋಗ ಸ್ಪರ್ಧೆ 1

ಸ್ಪರ್ಧೆಯು 8 ವರ್ಷಕ್ಕಿಂತ ಮೊದಲು, 8 ರಿಂದ 10 ವರ್ಷ, 11 ರಿಂದ 14 ವರ್ಷ, 15 ರಿಂದ 20 ವರ್ಷ, 21 ರಿಂದ 30 ವರ್ಷ, 31 ರಿಂದ 40 ವರ್ಷ, 41 ರಿಂದ 50 ವರ್ಷ ಹಾಗೂ 50 ವರ್ಷಕ್ಕೂ ಮೇಲ್ಪಟ್ಟು ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಪ್ರತಿಯೊಂದು ವಿಭಾಗದಲ್ಲೂ ಪ್ರತ್ಯೇಕವಾಗಿ (ಬಾಲಕ/ಬಾಲಕಿ) ನಗದು ಬಹುಮಾನ ನೀಡಲಾಯಿತು. ಮೊದಲ ಬಹುಮಾನವಾಗಿ ₹1000, ಎರಡನೇ ಬಹುಮಾನವಾಗಿ ₹700, ಮೂರನೇ ಬಹುಮಾನವಾಗಿ ₹500ರ ಜತೆಗೆ ಪ್ರಮಾಣ ಪತ್ರ ಹಾಗೂ ಆಕರ್ಷಕ ಬಹುಮಾನ ನೀಡಲಾಯಿತು.

ಸೋಲೋ ಆರ್ಟಿಸ್ಟಿಕ್ ಯೋಗಾಸನ ಸ್ಪರ್ಧೆಯಲ್ಲಿ ಬಾಲಕ/ಬಾಲಕಿಯರ ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಮೊದಲ ಮೂರು ಸ್ಥಾನಗಳಿಗೆ ನಗದು ಬಹುಮಾನ ನೀಡಲಾಯಿತು. 4, 5 ಮತ್ತು 6ನೇ ಸ್ಥಾನ ಪಡೆದವರಿಗೆ ಪ್ರಮಾಣ ಪತ್ರ ಮತ್ತು ಆಕರ್ಷಕ ಬಹುಮಾನ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಅತ್ಯಂತ ಅಸಮರ್ಥ ವಿಪಕ್ಷ ನಾಯಕ ಆರ್ ಅಶೋಕ್‌: ಶಾಸಕ ಪ್ರದೀಪ್‌ ಈಶ್ವರ್‌ ಕಿಡಿ

ಕಾರ್ಯಕ್ರಮದಲ್ಲಿ ಮೈಸೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಸಿ ವೆಂಕಟೇಶ, ಮೈಸೂರು ಯೋಗ ಒಕ್ಕೂಟದ ಗೌರವಾಧ್ಯಕ್ಷ ಡಾ ಚಂದ್ರಶೇಖರ್, ಅಧ್ಯಕ್ಷ ಟಿ ಜಲೇಂದ್ರ ಕುಮಾರ್, ಯೋಗ ಫೆಡರೇಶನ್ ಆಫ್ ಮೈಸೂರಿನ ಕಾರ್ಯದರ್ಶಿ ಶಶಿಕುಮಾರ್, ಯೋಗ ಸ್ಪೋರ್ಟ್ಸ್ ಫೌಂಡೇಶನ್ ಖಜಾಂಚಿ ಎಂ ಎನ್ ಮೋಹನ್, ಕರ್ನಾಟಕ ಸ್ಟೇಟ್ಸ್ ಅಮೆಚೂರ್ ಯೋಗ ಅಸೋಸಿಯೇಷನ್ ಉಪಾಧ್ಯಕ್ಷ ಗಿರೀಶ್, ಕಾರ್ಯದರ್ಶಿ ಎ ನಟರಾಜು, ಬಸವಮಾರ್ಗ ಸಂಸ್ಥೆಯ ಎಸ್ ರಾಜು, ಯೋಗ ಗುರುಗಳಾದ ಗೀತಾ ಕುಮಾರ್, ಪ್ರೇಮ್ ಕುಮಾರ್ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X