ಮೈಸೂರು | ನಾಗರಿಕತೆ, ಸಂಸ್ಕೃತಿಯನ್ನು ಜನರಿಗೆ ಅರ್ಥೈಸುವಲ್ಲಿ ಶಿಲ್ಪ ಕಲೆಗಳ ಪಾತ್ರ ಮಹತ್ವದ್ದು: ಸಚಿವ ಮಹದೇವಪ್ಪ

Date:

Advertisements

ಲಲಿತ ಕಲೆ ಮತ್ತು ಕರಕುಶಲ ಕಲೆ ಉಪಸಮಿತಿ ಹಾಗೂ ಕರ್ನಾಟಕ ಶಿಲ್ಪಕಲಾ ಶಿಬಿರ ಅಕಾಡೆಮಿ ಬೆಂಗಳೂರು
ಸಹಯೋಗದೊಂದಿಗೆ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ‘ರಾಜ್ಯ ಮಟ್ಟದ ಶಿಲ್ಪಕಲಾ ಶಿಬಿರ’ವನ್ನು ಸಚಿವ ಡಾ ಹೆಚ್ ಸಿ ಮಹದೇವಪ್ಪ ಉದ್ಘಾಟಿಸಿದರು

ಬಳಿಕ ಮಾತನಾಡಿದ ಅವರು, ‘ನಮ್ಮ ಇತಿಹಾಸದ ನಾಗರಿಕತೆ ಹಾಗೂ ಸಂಸ್ಕೃತಿಯನ್ನು ಕಣ್ಣು ಕಟ್ಟುವಂತೆ ಕೆತ್ತನೆ ಮಾಡುವುದರ ಮೂಲಕ ಜನರು ನಾಗರಿಕತೆ ಮತ್ತು ಸಂಸ್ಕೃತಿಯನ್ನು ಅರ್ಥೈಸಿಕೊಳ್ಳುವಲ್ಲಿ ಶಿಲ್ಪ ಕಲೆಗಳ ಪಾತ್ರ ಮಹತ್ವವದ್ದು’ ಎಂದು ಹೇಳಿದರು.

“ಚರಿತ್ರೆ ಗೊತ್ತಿಲ್ಲದವರು, ಚರಿತ್ರೆಯನ್ನು ಸೃಷ್ಟಿಸಲಾರರು” ಎಂಬ ಬಾಬಾ ಸಾಹೇಬರ ಮಾತಿನಂತೆ ನಾಗರಿಕತೆ ಮತ್ತು ಸಂಸ್ಕೃತಿಯನ್ನು ಸಂಪೂರ್ಣವಾಗಿಲಳ ಅರಿಯದವರು ಶಿಲ್ಪಕಲೆ ಮತ್ತು ಕರಕುಶಲ ಕಲೆಗಳನ್ನು ರಚಿಸಲು ಸಾಧ್ಯವಿಲ್ಲ.

Advertisements

ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಲೆಯೇ ಶಿಲ್ಪಕಲೆಯಾಗಿರುವಾಗ ಮೊದಲು ಅದರ ಇತಿಹಾಸವನ್ನು ತಿಳಿದು ನಂತರ ರಚಿಸುವ ಕೆಲಸ ಪ್ರತಿಯೊಬ್ಬ ಕಲಾವಿದನದ್ದಾಗಿರುತ್ತದೆ ಎಂದು ಹೇಳಿದರು.

1001796837

ದೇಶ ಕಂಡಂತಹ ಅಮರ ಶಿಲ್ಪಿ ಜಕಣಚಾರಿ ಅವರ ಶಿಲ್ಪಕಲೆಗಳು ಇಂದಿಗೂ ಜೀವಂತವಾಗಿವೆ. ಅಲ್ಲದೆ ಸೋಮನಾಥಪುರ, ಬೇಲೂರು ಮತ್ತು ಹಳೇಬೀಡಿನ ದೇವಾಯಗಳ ಒಂದೊಂದು ಕೆತ್ತನೆಗಳು ಒಂದೊಂದು ಕಥೆಯನ್ನು, ಇತಿಹಾಸವನ್ನು ತಿಳಿಸುತ್ತವೆ. ನಮ್ಮ ದೇಶದ ಸಂಸ್ಕೃತಿ, ಆಚಾರ ವಿಚಾರ, ಉಡುಗೆ ತೊಡುಗೆ ಒಟ್ಟಾರೆಯಾಗಿ ಇತಿಹಾಸವನ್ನು ವಿವರವಾಗಿ ತಿಳಿಸುವಂತಹ ಮಹಾನ್ ಕೆಲಸವನ್ನು ಶಿಲ್ಪಕಲೆಗಳು ಮಾಡುತ್ತಿವೆ ಎಂದು ಅಭಿಪ್ರಾಯಪಟ್ಟರು.

ಕಲಾವಿದರು ಇದರ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಿ ಯುವ ಪೀಳಿಗೆಗೆ ಹಾಗೂ ಮುಂದಿನ ಪೀಳಿಗೆಗೆ ಇತಿಹಾಸದ ಸತ್ಯವನ್ನು ತಿಳಿಸುವ ಶಿಲ್ಪಕಲೆಗಳನ್ನು ರಚಿಸಿ, ನಮ್ಮ ದೇಶದ ಶ್ರೀಮಂತ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು ಎಂದು ಸಲಹೆ ಕೊಟ್ಟರು.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅತ್ಯಂತ ವಿಶಾಲ ಮತ್ತು ಸುದೀರ್ಘವಾಗಿರುವ ಶಿಲ್ಪಕಲೆಯ ಪ್ರತಿಯೊಂದು ಕಲಾಕೃತಿಗಳು ನೋಡುಗರೊಂದಿಗೆ ತಾವೇ ಮಾತನಾಡುವಂತಿರಬೇಕು. ಅಂತಹ ಜೀವಂತ ಕಲಾಕೃತಿಗಳನ್ನು ಕಲಾವಿದರು ರಚಿಸಬೇಕು. ವಿದ್ಯಾಸಂಸ್ಥೆಗಳು ಶಿಲ್ಪಕಲೆಯನ್ನು ಕಲಿಯಲು ಆಸಕ್ತಿಯಿಂದ ಬರುವಂತಹ ವಿದ್ಯಾರ್ಥಿಗಳ ಜೊತೆ ಆಟವಾಡದೆ ಅವರಿಗೆ ಉತ್ತಮ ಶಿಕ್ಷಣ ನೀಡಿ, ಒಳ್ಳೆಯ ಜೀವನವನ್ನು ರೂಪಿಸಿಕೊಳ್ಳಲು ಜೊತೆಯಾಗಬೇಕು. ವಿದ್ಯಾರ್ಥಿಗಳು ಸಹ ಅಧ್ಯಾಪಕರೊಂದಿಗೆ ಸಹಕರಿಸಿ ಆಸಕ್ತಿಯಿಂದ ಕಲಿತು ಶಿಲ್ಪಕಲೆ ಹಾಗೂ ಕರಕುಶಲ ಕಲೆಗಳಂತಹ ಅದ್ಬುತ ಕಲೆಗಳನ್ನು ಉಳಿಸಿ ಬೆಳೆಸಬೇಕೆಂದು ಕಿವಿಮಾತು ಹೇಳಿದರು.

ಚನ್ನಪಟ್ಟಣದ ಗೊಂಬೆಗಳು, ಕುಂಬಾರರ ಮಡಿಕೆಗಳು, ಕಲ್ಲು ಕೆತ್ತನೆಗಳು ಹಾಗೂ ಇತ್ಯಾದಿಗಳನ್ನು ತಂದು ಅದಕ್ಕೆ ವಿಭಿನ್ನ ರೂಪ ಕೊಟ್ಟು ವಿಶೇಷ ಕಲಾಕೃತಿಗಳ ರಚನೆ ಮಾಡಬೇಕು. ದಸರಾ ಸಂದರ್ಭದಲ್ಲಿ ಕಲಾ ವಿದ್ಯಾರ್ಥಿಗಳು ರಚಿಸುವ ಉತ್ಪನ್ನಗಳನ್ನು ಬಳಸುವ ಮೂಲಕ ವಿದ್ಯಾರ್ಥಿಗಳಿಗೆ ಇನ್ನು ಹೆಚ್ಚಿನ ಪ್ರೋತ್ಸಾಹವನ್ನು ನೀಡಬೇಕು ಎಂದು ಕರೆಕೊಟ್ಟರು.

ಲಲಿತ ಕಲೆ ಮತ್ತು ಕರಕುಶಲ ಉಪಸಮಿತಿಯ ಉಪ ವಿಶೇಷಾಧಿಕಾರಿ ಹಾಗೂ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಆಯುಕ್ತ ಎ ದೇವರಾಜು ಮಾತನಾಡಿ ಈ ವರ್ಷ ರಾಜ್ಯಮಟ್ಟದ ಶಿಲ್ಪಕಲಾ ಶಿಬಿರವು ಭಾರತ ಸ್ವಾತಂತ್ರ್ಯ ಹೋರಾಟಗಾರರು, ಸ್ವಾತಂತ್ರ್ಯ ಚಳುವಳಿ ಮತ್ತು ಸಂವಿಧಾನದ ಮಹತ್ವ ಎಂಬ ವಿಷಯದ ಮೇಲೆ 10 ದಿನ ನಡೆಯಲಿದ್ದು ರಾಜ್ಯದ ವಿವಿಧ ಭಾಗದಿಂದ ಪ್ರಸಿದ್ಧ ಕಲಾವಿದರು ಆಗಮಿಸಿ ಶಿಬಿರಾರ್ಥಿಗಳಿಗೆ ಉಪಯುಕ್ತವಾದ ಸಲಹೆ ನೀಡಲಿದ್ದಾರೆ. ಈ ಶಿಬಿರವು ಸಾರ್ವಜನಿಕರಿಗೆ ಮುಕ್ತವಾಗಿದ್ದು, ಪ್ರತಿಯೊಬ್ಬರು ಶಿಬಿರದಲ್ಲಿ ಭಾಗವಹಿಸಬಹುದು ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ ಎಂ ಗಾಯತ್ರಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷ ಎಂ ಸಿ ರಮೇಶ್ ಸೇರಿದಂತೆ ಕಲಾವಿದರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X