ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲು ಎಸೆದಿದ್ದ ಕಿಡಿಗೇಡಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದಾಗಿ ಸ್ವರಸ್ವತಿಪುರಂ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಸಂಜೆ ದುಷ್ಕರ್ಮಿಯೊಬ್ಬ ಸಿದ್ದರಾಮಯ್ಯ ಮನೆ ಮೇಲೆ ಕಲ್ಲು ಎಸೆದಿದ್ದ. ಮನೆಯ ಕಿಟಕಿ ಗಾಜು ಪುಡಿಯಾಗಿತ್ತು. ಮುಖ್ಯಮಂತ್ರಿ ನಿವಾಸದ ಮೇಲೆ ಕಲ್ಲು ಎಸೆದ ಆರೋಪದಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಇದೀಗ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆರೋಪಿ, ಸ್ಥಳೀಯ ನಿವಾಸಿ ಸತ್ಯಮೂರ್ತಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪೊಲೀಸರು ನಗರದ 3ನೇ ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿಯ ಹಿನ್ನೆಲೆ ಮತ್ತು ಆತ ಕಲ್ಲು ಎಸೆದೆ ಹಿಂದಿನ ಉದ್ದೇಶವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.