ಮೈಸೂರು | ಉಪ ತಹಸೀಲ್ದಾರ್ ಕಿರುಕುಳ ಆರೋಪ, ಕಂಪ್ಯೂಟರ್ ಆಪರೇಟರ್‌ ಆತ್ಮಹತ್ಯೆ

Date:

ಉಪತಹಸೀಲ್ದಾರ್ ಕಿರುಕುಳಕ್ಕೆ ಬೇಸತ್ತ ಕಂಪ್ಯೂಟರ್ ಆಪರೇಟರ್ ನಾಡಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.

- Advertisement -

ವಿಕಲಚೇತನರಾಗಿ ಕಂಪ್ಯೂಟರ್ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಮೇಶ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಉಪತಹಸೀಲ್ದಾರ್ ಶಿವಕುಮಾರ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ನಾಡ‌ ಕಚೇರಿಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಕೂಡಲೇ ಪರಮೇಶ್ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಪರಮೇಶ್ ಸಾವನ್ನಪ್ಪಿದ್ದಾರೆ.

death note paramesh
ಮೃತ ಪರಮೇಶ ಬರೆದ ಡೆತ್‌ ನೋಟ್

“ಭಾನುವಾರ ಕೂಡ ಪರಮೇಶ್‌ಗೆ ನಾಡಕಚೇರಿಯಲ್ಲಿ ಕೆಲಸ ಮಾಡುವಂತೆ ತಾಕೀತು ಮಾಡಲಾಗಿದೆ. ಏಪ್ರಿಲ್‌ ನಿಂದ ವೇತನ ಬಂದಿಲ್ಲ. ಇದರಿಂದ ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗಿದೆ. ವಿಕಲಚೇತನನಾಗಿದ್ದರೂ ಕನಿಕರ ತೋರದೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ನನ್ನ ಸಾವಿಗೆ ಉಪ ತಹಸೀಲ್ದಾರ್ ಶಿವಕುಮಾರ್ ಅವರೇ ನೇರ ಕಾರಣ” ಮೃತ ಪರಮೇಶ ಡೆತ್ ನೋಟ್‌ನಲ್ಲಿ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಕುರಿತು ಹುಲ್ಲಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...