ಮೈಸೂರು | ತಾಪಮಾನ ಹೆಚ್ಚಳ; ಪಕ್ಷಿಗಳಿಗೆ ನೀರಡಿಕೆ ನೀಗಿಸುವ ಜಾಗೃತಿ ಜಾಥಾ

Date:

ಬೇಸಿಗೆಯ ತಾಪಮಾನ ಹೆಚ್ಚಳವಾಗುತ್ತಿರುವ ಪರಿಣಾಮ ನೀರಿನ ಸೆಲೆಗಳು ಬತ್ತಲಾರಂಭಿಸಿವೆ. ಹೀಗಾಗಿ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಮೈಸೂರು ನಗರದ ಕಡಕೋಳದಲ್ಲಿರುವ ಶೇಷಾದ್ರಿಪುರಂ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯ ವಿದ್ಯಾರ್ಥಿಗಳು, ಹಾಗೆಯೇ ರೋಟರಿ ಕ್ಲಬ್ ಶ್ರೀರಂಗಪಟ್ಟಣ ಮತ್ತು ಅಚೀವರ್ಸ್ ಅಕಾಡೆಮಿಯಿಂದ ಜಾಗೃತಿ ಜಾಥಾ ಅಭಿಯಾನ ಆಯೋಜನೆ ಮಾಡಿದ್ದರು.

- Advertisement -

ಈ ಅಭಿಯಾನಕ್ಕೆ ಶ್ರೀರಂಗನಾಯಕಿ ಸಮಾಜದ ಮುಖ್ಯಸ್ಥ ಆಶಲತಾ ಪುಟ್ಟೇಗೌಡ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಎನ್‌ಎಸ್‌ಎಸ್ ಅಧಿಕಾರಿ ಡಾ. ರಾಘವೇಂದ್ರ ಮಾತನಾಡಿ, “ಮನುಷ್ಯನಾದರೆ, ನನಗೆ ಹಸಿವಾಗಿದೆ, ದಾಹವಾಗಿದೆಯೆಂದು ಕೇಳುವುದರ ಮೂಲಕ ತನ್ನ ಹಸಿವೆಯನ್ನು ನೀಗಿಸಿಕೊಳ್ಳುತ್ತಾನೆ. ಆದರೆ ಮೂಕಪ್ರಾಣಿ ಪಕ್ಷಿಗಳು ಅದರಲ್ಲೂ ಪಕ್ಷಿಗಳು ತಮ್ಮ ಹಸಿವನ್ನೇ ಹೇಳಿಕೊಳ್ಳಲಾಗದೆ ಸಂಕಟಪಡುತ್ತಿರುತ್ತವೆ. ಆದ್ದರಿಂದ ದಯಮಾಡಿ ಸಾರ್ವಜನಿಕರು ಸುತ್ತಲಿನ ಪರಿಸರದಲ್ಲಿ ಹಾಗೂ ಮನೆಯ ಮೇಲೆ ನೀರು ಮತ್ತು ಆಹಾರವನ್ನು ಇಟ್ಟು ಪಕ್ಷಿಗಳ ದಾಹವನ್ನು ನೀಗಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ರಂಝಾ‌ನ್ ಮುಸ್ಲಿಮರ ಆಧ್ಯಾತ್ಮಿಕ ಬೆಳವಣಿಗೆಗೆ ಅವಕಾಶ‌ ಒದಗಿಸುತ್ತದೆ: ಲಾಲಹುಸೇನ ಕಂದಗಲ್ಲ

ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಬೀದಿಗಳಿಗೆ ತೆರಳಿ ಘೋಷವಾಕ್ಯವನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಈ ಅಭಿಯಾನಕ್ಕೆ ಶ್ರೀರಂಗಪಟ್ಟಣ ರೋಟರಿ ಸಂಸ್ಥೆಯ ಅಧ್ಯಕ್ಷ ಮಂಜು ರಾಮ ಪುಟ್ಟೇಗೌಡ, ನಿರ್ದೇಶಕ ನಾಗೇಂದ್ರ, ಶ್ರೀನಿವಾಸ, ಕಾಂತರಾಜ್, ವಿದ್ಯಾರ್ಥಿಗಳಾದ ಹರ್ಷ ಹೃದಯ್, ಶಾಂಭವಿ, ವಿಹಾನ್ ಮುರಳಿ ದಿವಿತ್, ಪರಶುರಾಮ್ ಸೇರಿದಂತೆ ಇತರರು ಈ ಅಭಿಯಾನಕ್ಕೆ ಸಾತ್ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...